ಚಿಕ್ಕಮಗಳೂರು: ಸರ್ಕಾರಿ ಬಸ್-ಪ್ರವಾಸಿಗರ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Road Accident) ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಶನಿವಾರ ನಡೆದಿದೆ.
ಮೂಲತಃ ಬೆಂಗಳೂರಿನ ಕೋಣನಕುಂಟೆಯ ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು. ಶಿವಯಾಗಯ್ಯ ಹಿರೇಮಠ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ | BBMP Fire Accident : ಬಿಬಿಎಂಪಿ ಅಗ್ನಿ ದುರಂತ ನಿಜಕ್ಕೂ ಸಂಭವಿಸಿದ್ದು ಹೇಗೆ? ಹಾಗಿದ್ರೆ ಪರೀಕ್ಷೆ ನಡೆಸೋದು ತಜ್ಞರಲ್ವ?
ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಹಾಗ ಸಕಲೇಶಪುರದಿಂದ ಮೂಡಿಗೆರೆ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಪರಸ್ಪರ ಡಿಕ್ಕಿ;ಯಾಗಿವೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಮಸ್ವರೂಪಿ ಟ್ರಕ್‌ಗೆ ಮಸಣ ಸೇರಿದ ಬೆಂಗಳೂರಿಗರು; ಎರಡು ತುಂಡಾಯ್ತು ಬೈಕ್!
ಹಾವೇರಿ/ ಧಾರವಾಡ/ಶಿರಸಿ: ಇತ್ತೀಚೆಗೆ ರಸ್ತೆ ಅಪಘಾತಗಳು (Road Accident) ಹೆಚ್ಚಾಗುತ್ತಿದ್ದು, ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾವೇರಿಯ ಶಿಗ್ಗಾವ್ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಬೆಂಗಳೂರು ಮೂಲದ ಇಬ್ಬರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮನೋಹರ್ (38), ಪ್ರಿಯಾಂಕ (23) ಎಂಬುವವರು ಮೃತಪಟ್ಟಿದ್ದಾರೆ.
ಮೊನಾಲಿಸಾ (38), ಸೀಖಾ (07) ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಇವರಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಬಾಂಬೆ ಕಡೆಗೆ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ತಡಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Electric Shock: ವಿದ್ಯುದಾಘಾತದಿಂದ ಒಂದೇ ಕುಟುಂಬದ ಮೂವರ ದುರ್ಮರಣ; ಮೊಮ್ಮಗಳ ರಕ್ಷಣೆಗೆ ಹೋದ ಅಜ್ಜ-ಅಜ್ಜಿ ಸಾವು
ಎರಡು ತುಂಡಾದ ಬೈಕ್, ಸವಾರ ಸಾವು
ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜೋಡಳ್ಳಿ ಗ್ರಾಮದಲ್ಲಿ ನಡೆದಿದೆ. ಅನಿಲ್ ಬಾಳಿಕಾಯಿ (38) ಮೃತ ದುರ್ದೈವಿ.
ಬೈಕ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.