ದಾವಣಗೆರೆ: ನಿಂತ ನೀರಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ (Electric shock) ಮೃತಪಟ್ಟಿರುವ ಘಟನೆ ಮಾವಿನಕಟ್ಟೆ ಗ್ರಾಮದ ಭದ್ರಾ ನಾಲೆಯಲ್ಲಿ (Bhadra Canal) ನಡೆದಿದೆ. ಅಭಿಷೇಕ್ (28) ಮೃತ ದುರ್ದೈವಿ.
ಅಭಿಷೇಕ್ ಭದ್ರಾ ನಾಲೆಯ ನಿಂತ ನೀರಲ್ಲಿ ಮೀನು ಹಿಡಿಯಲು ಹೋದಾಗ ಈ ಅವಘಡ ಸಂಭವಿಸಿದೆ. ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ನಿವಾಸಿಯಾಗಿರುವ ಅಭಿಷೇಕ್, ಚನ್ನೇಶಪುರ ಪಶು ಆಸ್ಪತ್ರೆಯಲ್ಲಿ ವೈದ್ಯಕೀಯ ಪರಿವೀಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ: Anupama Parameswaran: ಎದೆ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ಅನುಪಮಾ ಪರಮೇಶ್ವರನ್; ಇದು ನೀವೇನಾ? ಅಂದ್ರು ನೆಟ್ಟಿಗರು!
ಭದ್ರಾ ನಾಲೆಯ ಅಲ್ಲಲ್ಲಿ ನಿಂತ ನೀರನ್ನು ತೋಟಗಳಿಗೆ ಹರಿಸಲು ಅಕ್ರಮವಾಗಿ ಮೋಟಾರ್ ಅಳವಡಿಸಲಾಗಿತ್ತು. ಇದನ್ನು ಗಮನಿಸದ ಅಭಿಷೇಕ್ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಮೋಟರ್ನಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ