ಮೈಸೂರು: ಅರಣ್ಯದಲ್ಲಿ ಮರ ಕಳವು ಆರೋಪದಲ್ಲಿ (Wood Smuggling) ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ (Vikram Simha) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೇಲೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಕೋಟ್ಯಂತರ ರೂ. ಮೌಲ್ಯದ ಮರ ಕಡಿದು ಸಾಗಣೆ ಆರೋಪದಲ್ಲಿ ಅವರ ಬಂಧನವಾಗಿದೆ.
ಪ್ರಕರಣವನ್ನು ಅರಣ್ಯಾಧಿಕಾರಿಗಳಿಗೆ ಸಿಸಿಬಿ ವರ್ಗಾಯಿಸಿದ್ದು, ವಿಕ್ರಮ್ ಸಿಂಹ ಅವರನ್ನು ವಶಕ್ಕೆ ಪಡೆದು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ವಿರುದ್ಧ ಕೇಳಿಬಂದಿದೆ. ಹೀಗಾಗಿ ಅವರನ್ನು ಸಿಸಿಬಿ ಬಂಧಿಸಿದೆ.
ಇದನ್ನೂ ಓದಿ | Hoax Bomb Threat: ಬೆಂಗಳೂರು ಏರ್‌ಪೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ ಕರೆ; ಪ್ರಯಾಣಿಕನ ಬಂಧನ
ವಾರದ ಹಿಂದೆ, ಮರಗಳನ್ನು ಅಕ್ರಮವಾಗಿ ಕಡಿದಿರುವ ಆರೋಪದ ಮೇರೆಗೆ ಅವರ ವಿರುದ್ಧ ಅರಣ್ಯಾಧಿಕಾರಿಗಳು ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಆಧರಿಸಿ ಅವರನ್ನು ವಶಕ್ಕೆ ಪಡೆಯಲು ವಿಕ್ರಂ ಅವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಆದರೆ, ವಿಕ್ರಂ ಅವರು ತಲೆಮರೆಸಿಕೊಂಡಿದ್ದರು.
ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಬೆಂಗಳೂರಿನಲ್ಲಿ ಇರುವ ಕುರಿತಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ಸಿಕ್ತಿತ್ತು. ಹಾಗಾಗಿ, ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿತ್ತು. ನಂತರ ಅವರನ್ನು ಬೆಂಗಳೂರಿನ ಜಾರುಬಂಡೆ ಕಾವಲ್‌ನಲ್ಲಿರುವ ಅರಣ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.