MP Pratapsimha : ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆಶಿಗೆ ಗುಂಡು ಹೊಡೆದ ಸಿದ್ದರಾಮಯ್ಯ! - Vistara News

ಕರ್ನಾಟಕ

MP Pratapsimha : ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆಶಿಗೆ ಗುಂಡು ಹೊಡೆದ ಸಿದ್ದರಾಮಯ್ಯ!

MP Pratapsimha : ಸಿದ್ದರಾಮಯ್ಯ ಅವರು ಇದುವರಗೆ ತಮ್ಮ ಆಪ್ತರ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ. ಈಗ ಮಗನನ್ನೇ ಬಳಸಿಕೊಂಡು ಡಿ.ಕೆ. ಶಿವಕುಮಾರ್‌ ಎದೆಗೆ ಗುಂಡು ಹಾಕುತ್ತಿದ್ದಾರೆ ಎಂದಿದ್ದಾರೆ ಸಂಸದ ಪ್ರತಾಪ್‌ ಸಿಂಹ.

VISTARANEWS.COM


on

Siddaramaiah Pratapsimha Yathindra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ (Siddaramaiah Full time Chief Minister) ಎಂಬ ಯತೀಂದ್ರ ಸಿದ್ದರಾಮಯ್ಯ (yatindra siddaramaiah) ಅವರ ಹೇಳಿಕೆ ಕಾಂಗ್ರೆಸ್‌ ಮಾತ್ರವಲ್ಲ, ಬಿಜೆಪಿ ವಲಯದಲ್ಲೂ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿದ್ಯಮಾನಕ್ಕೆ ಪ್ರತಿಕ್ರಿಯೆ ನೀಡಿರುವ ಮೈಸೂರು ಸಂಸದ ಪ್ರತಾಪ್‌ಸಿಂಹ (MP Pratapsimha) ಅವರು, ʻʻಸಿದ್ದರಾಮಯ್ಯ ಅವರು ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್‌ ನೋಡಿದ್ರೆ ಅಯ್ಯೋಪಾಪ ಅನಿಸ್ತದೆ!

ʻʻಡಿ.ಕೆ.ಶಿವಕುಮಾರ್ ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತದೆ. ಎಸ್.ಎಂ.ಕೃಷ್ಣ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಅಂತ ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡಿದ್ದರು. ಒಕ್ಕಲಿಗರ ಮನೆ ಮನೆಗೆ ಹೋಗಿ ವೋಟು ಕೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಚುನಾವಣೆ ನಾಯಕತ್ವ ವಹಿಸಿದ್ದರು‌. ಮಾತ್ರವಲ್ಲ, ಚುನಾವಣೆಗೆ ಬಂಡವಾಳವನ್ನೂ ಹಾಕಿದ್ದರು. ಈ ಕಾರಣಕ್ಕಾಗಿಯೇ ಎರಡೂವರೆ ವರ್ಷದ ಬಳಿಕ ಸಿಎಂ ಆಗುವ ಭರವಸೆ ಸಿಕ್ಕಿತ್ತು. ಆದರೆ ಸಿದ್ದರಾಮಯ್ಯ ಸಿಎಂ ಚೇರ್‌ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆʼʼ ಎಂದು ಪ್ರತಾಪ್‌ಸಿಂಹ ಹೇಳಿದರು.

ವ್ಯವಸ್ಥಿತವಾಗಿ ತಾನೇ ಸಿಎಂ ಎಂದು ಹೇಳಿಸುತ್ತಿದ್ದಾರೆ!

ʻʻಮೊದಲು ಎಂ.ಬಿ‌.ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಅಂತ ಹೇಳಿಸಿದ್ದರು. ನಂತರ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಕೆ‌.ಎನ್.ರಾಜಣ್ಣ ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಅಂತ ಹೇಳಿದ್ದರು. ಈಗ ಮಗನ ಮೂಲಕ ಹೇಳಿಸುತ್ತಿದ್ದಾರೆʼʼ ಎಂದು ಹೇಳಿದ ಪ್ರತಾಪ್‌ ಸಿಂಹ ಅವರು, ರಾಜಕೀಯವಾಗಿ ಇದು ದೊಡ್ಡ ಪರಿಣಾಮ ಬೀರಲಿದೆ ಎಂದು ಹೇಳಿದರು.

ಇದನ್ನೂ ಓದಿ : Congress Politics : ಲೋಕಸಭೆ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ; ಯತೀಂದ್ರ ಸ್ಫೋಟಕ ಹೇಳಿಕೆ

ಅವರಿಗೆ ಸ್ವಜಾತಿ, ಮುಸ್ಲಿಮರು ಮಾತ್ರ ಮುಖ್ಯ!

ʻʻಡಾ.ಯತೀಂದ್ರ ಅವರು ಹಾಸನದಲ್ಲಿ ನೀಡಿದ ಹೇಳಿಕೆ ಗಮನಿಸಿದ್ದೇನೆ. ನಮ್ಮ ಸಮುದಾಯದವರು, ಮುಸಲ್ಮಾನರು ಸಹಕಾರ ನೀಡಿದ್ದರಿಂದ ಸರ್ಕಾರ ಬಂತು ಅಂತ ಹೇಳಿದ್ದಾರೆ. ನಮಗೆ ಸ್ವಜಾತಿಯವರು, ಮುಸಲ್ಮಾನರು ಮಾತ್ರ ಮುಖ್ಯ ಅನ್ನುವ ಸಂದೇಶ ರವಾನಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರು, ವರುಣದಲ್ಲಿ ಲಿಂಗಾಯತರು ಮತ ‌ನೀಡದೆ ಕಾಂಗ್ರೆಸ್ ಸರ್ಕಾರ ಬಂತಾ?ʼʼ ಎಂದು ಪ್ರತಾಪ್‌ ಸಿಂಹ ಪ್ರಶ್ನಿಸಿದ್ದಾರೆ.

ʻʻಕಾಂಗ್ರೆಸ್‌ನಿಂದ ಗೆದ್ದವರಲ್ಲಿ 39 ಲಿಂಗಾಯತರು, ಹತ್ತಾರು ಒಕ್ಕಲಿಗರು ಶಾಸಕರಾಗಿದ್ದಾರೆ. ಖರ್ಗೆ ಕಾರಣಕ್ಕೆ ದಲಿತರೂ ಮತ ಹಾಕಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲ ಜಾತಿ, ಜನಾಂಗದವರೂ ನಿಮಗೆ ದೋಖಾ ಆಗಿದೆ ಅಂತ ಅರ್ಥ ಮಾಡಿಕೊಳ್ಳಿ’.” ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯತೀಂದ್ರ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತದೆ ಎಂದಿದ್ದರು.

ʻʻಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಇದನ್ನು ಲೋಕಸಭಾ ಚುನಾವಣೆಯಲ್ಲಿ ತೋರಿಸಬೇಕು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದ ಸಿಎಂ ಪುತ್ರ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

By

Action Prince Dhruva Sarja much awaited film Martin to hit the screens on October 11
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಕೇಸ್ ಸಂಬಂಧ ತನಿಖೆಯು ಕ್ಲೈ ಮ್ಯಾಕ್ಸ್ ಹಂತದಲ್ಲಿದ್ದು, ಇದೀಗ ಜೈಲಿನೊಳಗಿನ ಅಂದರ್ ಕಿ ದರ್ಬಾರ್ ಬೆಳಕಿಗೆ ಬಂದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ (Actor Darshan) ಇದ್ದ ವೇಳೆ ಸಿಕ್ಕ ರಾಜಾತಿಥ್ಯದ ತನಿಖೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ವಿಶೇಷ ಸವಲತ್ತುಗಳ ಜಾಡು ಹಿಡಿದ ಖಾಕಿಗೆ ರಾಜಾತಿಥ್ಯದ ಪಿನ್ ಟು ಪಿನ್ ಸಾಕ್ಷಿ ದೊರೆತಿದ್ದು, ಇದರ ಹೊರತಾಗಿ ಜೈಲಿನಲ್ಲಿ ಸಿಗುವ ಮದ್ಯದ ಬಾಟೆಲ್‌ಗಳ ಮತ್ತೊಂದು ಕಹಾನಿ ಬೆಳಕಿಗೆ ಬಂದಿದೆ.

ಜೈಲಿನೊಳಗೆ ದರ್ಶನ್‌ಗೆ ಸಿಕ್ಕ ರಾಜಾತಿಥ್ಯದ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ. ಜತೆಗೆ ಇದಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವ ಸಂಗತಿ ಸಹ ಬಯಲಾಗಿದೆ. ಸದ್ಯ ಈ ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುವ ತಯಾರಿಯಲ್ಲಿದ್ದಾರೆ.

ಜೈಲಿನ ಒಳಗಡೆ ದರ್ಶನ್ ರೌಂಡ್ ಟೇಬಲ್‌ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜತೆ ವಿಡಿಯೊ ಕಾಲ್ ಸಂಭಾಷಣೆ ನಡೆಸಿದ್ದ ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು, ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಜೈಲಿನಲ್ಲಿರುವ ರೌಡಿಗಳಿಗೆ ಸಪ್ಲೈ ಆಗುತ್ತಿದೆಯಾ ಕಾಸ್ಟ್ಲಿ ಡ್ರಿಂಕ್ಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಈಗ ಹೊಸದಂದು ಸಂಗತಿ ಕೇಳಿ ಬಂದಿದೆ. ಜೈಲಿನಲ್ಲಿರುವ ಕೆಲ ರೌಡಿಗಳಿಗೆ ಕಾಸ್ಟ್ಲಿ ಡ್ರಿಂಕ್ಸ್ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿದೆ ಎನ್ನಲಾಗಿದೆ. ಇನ್ನು ಮದ್ಯದ ಬಾಟಲ್‌ನ ಅಸಲಿ ಬೆಲೆ 2 ಸಾವಿರ ಇದ್ದರೆ ಅದನ್ನು ಜೈಲಿನೊಳಗೆ ಕೊಡಲು 25 ಸಾವಿರ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಟಲ್‌ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೋಗುವವನು ಮತ್ತೊಬ್ಬನಂತೆ.. ಬಳಿಕ ಅದನ್ನು ರೌಡಿಗೆ ತಲುಪಿಸುವವನು ಮತ್ತೋಬ್ಬ.. ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿ ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹೀಗೆ ಒಳಗೆ ಸಪ್ಲೈ ಮಾಡಿ ಎಣ್ಣೆಗೆ ಹಣ ಹೊರಗಡೆಯೇ ಪಡೆಯಲಾಗುತ್ತಿದೆ. ಯಾರ್ಯಾರು ಎಣ್ಣೆ ತಂದು ಕೊಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇದೆಲ್ಲದರ ನಡುವೆ ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಸದ್ಯ ರಾಜಾತಿಥ್ಯದ ತನಿಖೆ ಕೈಗೊಂಡಿದ್ದ ಪೊಲೀಸರು ಬಹುತೇಕ ತನಿಖೆ ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆ ಬಳಿಕ ಜೈಲಿನ ಅಕ್ರಮ ಚಟುವಟಿಕೆಗಳ ಮತ್ತಷ್ಟು ಸಂಗತಿ ಬಯಲಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನವಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬವನ್ನು ಪೀಣ್ಯ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿದ್ದ (Bengaluru News) ಒಂದೇ ಕುಟುಂಬದ ಮೂವರು ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ತಾರಿಖ್ ಸಯೀದ್(ಪತಿ), ಅನಿಲ ಸಯೀದ್ (ಪತ್ನಿ), ಇಶ್ರತ್ ಸಯೀದ್ (ಮಗಳು) ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುಟುಂಬ ಮೆಹದಿ ಫೌಂಡೇಶನ್‌ಗೆ ಸೇರಿದ್ದರು. ಪಾಕಿಸ್ತಾನದಿಂದ ಬಾಂಗ್ಲಾಗೆ ಸುಮಾರು ಹದಿನೈದಕ್ಕೂ ಹೆಚ್ಚು ಮಂದಿ ಬಂದಿದ್ದರು, ಅದರಲ್ಲಿ ಈ ಪಾಕ್ ಕುಟುಂಬವಿತ್ತು. ಅಲ್ಲಿಂದ ದೆಹಲಿಗೆ ಅಕ್ರಮವಾಗಿ ಪ್ರವೇಶಿಸಿ, ಭಾರತ ದೇಶದ ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್ ಮಾಡಿಕೊಂಡಿದ್ದರು. ಅಲ್ಲಿಂದ ನೇರ ಕೇರಳಕ್ಕೆ ಹೋಗಿದ್ದರು. ಕೇರಳದಿಂದ ದಾವಣಗೆರೆಗೆ ಬಂದಿದ್ದ ಪಾಕ್ ಕುಟುಂಬ, ದಾವಣಗೆರೆಯಲ್ಲಿ ಒಂದು ವರ್ಷಗಳ ಕಾಲ ವಾಸ ಮಾಡುತ್ತಿತ್ತು.

ಇದನ್ನೂ ಓದಿ:Jigani Police: ಉಲ್ಫಾ ಉಗ್ರ ಬಂಧನ ಬೆನ್ನಲ್ಲೆ ನಾಲ್ವರು ವಿದೇಶಿಗರು ಸೇರಿ ‌ಓರ್ವ ಪಾಕಿಸ್ತಾನ ಪ್ರಜೆ ಬಂಧನ

ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಪೀಣ್ಯಗೆ ಆಗಮಿಸಿದ್ದರು. ಪೀಣ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಕುಟುಂಬ ಮೆಹದಿ ಫೌಂಡೇಶನ್‌ನ ಧರ್ಮ ಮತ್ತು ಧರ್ಮ ಗುರುಗಳ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದರು. ಜಿಗಣಿಯಲ್ಲಿ ಪಾಕ್ ಪ್ರಜೆ ರಷೀದ್ ಫ್ಯಾಮಿಲಿ ಬಂಧನವಾಗಿದ್ದರು. ರಷೀದ್ ತನಿಖೆಯ ವೇಳೆ ಪೀಣ್ಯದಲ್ಲಿ ಮತ್ತೊಂದು ಪಾಕ್ ಫ್ಯಾಮಿಲಿ ಇರುವುದಾಗಿ ಬಾಯಿಬಿಟ್ಟಿದ್ದರು. ಹೀಗಾಗಿ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಪೀಣ್ಯದಿಂದ ಬಂಧನ ಮಾಡಿ ಕರೆತಂದಿದ್ದ ಪೊಲೀಸರು ಮೂವರಿಗೂ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೆಡಿಕಲ್ ಚೆಕಪ್ ಮುಗಿಸಿ ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Continue Reading

ಬೆಂಗಳೂರು

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

HD Kumaraswamy : ಎಲೆಕ್ಷನ್‌ಗಾಗಿ ಎಚ್‌ಡಿ ಕುಮಾರಸ್ವಾಮಿ ಅವರು 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

HD kumaraswamy And Vijayetata
Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಉದ್ಯಮಿ ವಿಜಯ ಟಾಟಾ ಎಂಬುವವರಿಂದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ 50 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯ್ ಟಾಟಾ ದೂರಿನಲ್ಲಿ ಏನಿದೆ?

ರಿಯಲ್ ಎಸ್ಟೇಟ್ ಉದ್ಯಮಿಯಾದ ನಾನು 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಎಚ್‌ಡಿ ದೇವೆಗೌಡರ ಪಕ್ಷದ ಸೋಷಿಯಲ್‌ ಮೀಡಿಯಾ ಉಪಾಧ್ಯಕ್ಷನಾಗಿ ನನ್ನನ್ನು ನೇಮಿಸಿದರು. 2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಯಾನ ನಡೆಸಿದ್ದೇನೆ. ಕಳೆದ ಕೆಲ ವರ್ಷಗಳಿಂದ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನಹರಿಸಿದ್ದೆ. ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 24, 2024 ರಂದು ರಮೇಶ್ ಗೌಡ ನನ್ನ ನಿವಾಸಕ್ಕೆ ಆಗಮಿಸಿದ್ದರು.

ನನ್ನ ಮನೆಯಲ್ಲಿ ಜತೆಯಲ್ಲಿ ಊಟ ಮಾಡುತ್ತಾ ಚೆನ್ನಪಟ್ಟಣ ಚುನಾವಣೆ ಬಗ್ಗೆ ವಿವರಿಸಿದರು. ನಿಖಿಲ್ ಕುಮಾರಸ್ವಾಮಿಯವರಿಗೆ ಚನ್ನಪಟ್ಟಣ ಚುನಾವಣೆಗೆ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದರು. ಇದೇ ವೇಳೆ ಕುಮಾರಸ್ವಾಮಿ ಫೋನ್ ಮಾಡಿದ್ದರು. ನಿಖಿಲ್ ಚನ್ನಪಟ್ಟಣ ಚುನಾವಣೆಗೆ ನಿಲ್ಲುತ್ತಿದ್ದಾರೆ, ಚುನಾವಣೆಗೆ 50 ಕೋಟಿ ರೂ. ಕೊಡಿ ಅಂದರು. ಈ ವೇಳೆ ನಾನು ಆಗಲ್ಲ ಸರ್ ಅಂತೇಳ್ದೆ, ಅದಕ್ಕೆ ಕುಮಾರಸ್ವಾಮಿ ಕೋಪ ಮಾಡಿಕೊಂಡರು. ನೀವು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ನಡೆಸೋದಷ್ಟೇ ಅಲ್ಲ. ಬದುಕುವುದೇ ಕಷ್ಟವಾಗತ್ತೆ ಅಂತ ಬೆದರಿಕೆ ಹಾಕಿ ಫೋನ್ ಕಟ್ ಮಾಡಿದ್ದರು. ನಿಮ್ಮ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲಿಕ್ಕೆ ಬಿಡೊಲ್ಲ ಎಂದು ಹೇಳಿದ್ದರಂತೆ.

ಕುಮಾರಸ್ವಾಮಿ ಜತೆ ಫೋನ್‌ನಲ್ಲಿ ಮಾತಾಡುವ ವೇಳೆ ರಮೇಶ್ ಗೌಡ ಎದುರಲ್ಲಿ ಕುಳಿತಿದ್ದರು. ಈ ವೇಳೆ ರಮೇಶ್ ಗೌಡ ಕೂಡ ಐದು ಕೋಟಿ ಕೇಳಿದರು. ದೇವಾಲಯ ಹಾಗೂ ಶಾಲೆ ಕಟ್ಟಿಸುತ್ತಿದ್ದು ಅದಕ್ಕಾಗಿ ಐದು ಕೋಟಿ ರೂ. ಕೊಡಿ ಎಂದು ರಮೇಶ್ ಗೌಡ ಕೇಳಿದರು. ತುಂಬಾ ಕಷ್ಟ ಇದೆ ಯಾವುದೇ ಕಾರಣಕ್ಕೂ ಆಗಲ್ಲ ಅಂತ ಹೇಳಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಉದ್ಯಮಿ ವಿಜಯ್ ಟಾಟಾ ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದೇವೆ. ಒಂದು ವಾರದಿಂದ ಮೆಸೇಜ್, ಕಾಲ್ ಮಾಡುವ ಕೆಲಸ ರಮೇಶ್ ಗೌಡ ಮಾಡುತ್ತಿದ್ದರು. 2019ರ ಚುನಾವಣೆಗೆ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೀವಿ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕುಮಾರಸ್ವಾಮಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿ ಎನ್ ಎಸ್ 352 ಅಡಿಯಲ್ಲಿ ಎನ್ ಸಿ ಆರ್ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ6 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು7 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು10 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು10 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ11 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು11 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು13 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು13 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು14 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು15 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ6 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌