Site icon Vistara News

Muda Scam: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಅರ್ಜಿ; ಹೈಕೋರ್ಟ್‌ನಲ್ಲಿ ಸುದೀರ್ಘ ವಾದ-ಪ್ರತಿವಾದ

Muda Scam

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸುತ್ತಿದ್ದು, ವಕೀಲರ ನಡುವೆ ಸುದೀರ್ಘ ವಾದ-ಪ್ರತಿವಾದ ನಡೆಯುತ್ತಿದೆ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಕೊಟ್ಟ ಉತ್ತರವನ್ನು ಅವರು ಹೇಳಿಲ್ಲ. ಇಲ್ಲಿ ರಾಜ್ಯಪಾಲರಿಗೆ ಸಿಎಂ ರಾಜೀನಾಮೆ ಕೊಡುವುದು ಮಾತ್ರ ಬೇಕಿದೆ. ಅದಕ್ಕೆ ಒಂದೇ ಒಂದು ಸರಿಯಾದ ಕಾರಣ ನೀಡದೇ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಇದಕ್ಕೆ ಕನಿಷ್ಠ ಎರಡು ನಿಯಮಗಳಿವೆ. ನೂರು ಪುಟಗಳ ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಕೇವಲ ಎರಡು ಪುಟಗಳ ಉತ್ತರ ನೀಡಿದ್ದಾರೆ. ಸಂಪುಟದ ನಿರ್ಧ ರ ಪರಿಗಣಿಸಲ್ಲ ಎಂದಿದ್ದಾರೆ. ಯಾವ ತನಿಖಾಧಿಕಾರಿ ಕೇಳಿದ್ದಾರೆ ಅನ್ನೋದು ಮುಖ್ಯ. ಅಲ್ಲದೆ ಯಾವ ಆರೋಪವಿದೆ ಅನ್ನೋದು ಅವರು ಹೇಳಬೇಕಿತ್ತು? ಬಿಎನ್‌ಎಸ್ ಎಸ್ 218 ಅಡಿಯೂ ಅನುಮತಿ ನೀಡಿದ್ದಾರೆ ಎಂದರು.

ಗವರ್ನರ್ ತಮ್ಮ ಆದೇಶದಲ್ಲಿ ಮಧ್ಯಪ್ರದೇಶ ಸರ್ಕಾರ & ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ ಕೇಸ್ ಉಲ್ಲೇಖ ಮಾಡಿದ್ದಾರೆ ಎಂದು ಆರ್ಟಿಕಲ್ 163 ಬಗ್ಗೆ ಮನು ಸಿಂಘ್ವಿ ಉಲ್ಲೇಖಿಸಿ, ಹೌದು, ರಾಜ್ಯಪಾಲರಿಗೆ ಅಧಿಕಾರ ಇದೆ. ಆದರೆ ಒಂದು ಲೈನ್‌ನಲ್ಲಿ ಕ್ಯಾಬಿನೆಟ್ ನಿರ್ಧಾರ ತಿರಸ್ಕರಿಲು ಸಾಧ್ಯವಿಲ್ಲ. ಹಗರಣ ಸಂಬಂಧ ಮೂವರು ಅನುಮತಿ ಕೇಳಿದ್ದಾರೆ. ಟಿ.ಜೆ. ಅಬ್ರಹಾಂ ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡಿದ್ದಾರೆ. ಸಾಮಾನ್ಯವಾಗಿ ಒಂದು ದೂರು ನೀಡಿದರೆ ಅದನ್ನು ಪರಿಶೀಲನೆ ಮಾಡಲು ಸಮಯ ಬೇಕು. ಆದರೆ ದೂರು ನೀಡಿದ ದಿನವೇ ಶೋಕಾಸ್ ನೊಟೀಸ್ ನೀಡಿದ್ದಾರೆ. ಅಲ್ಲದೇ ಗವರ್ನರ್ ಮುಂದೆ 12 ಪ್ರಕರಣಗಳಲ್ಲಿ ಅನುಮತಿ ಕೇಳಲಾಗಿದೆ. ಆದರೆ ಅವುಗಳನ್ನು ಇನ್ನೂ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಲ್ಯಾಂಡ್ ಡಿನೋಟಿಫಿಕೇಷನ್ ಪ್ರಕ್ರಿಯೆ ಹಾಗೂ ಭೂ ಪರಿವರ್ತನೆ ಸೇರಿ ಇಲ್ಲಿಯವರೆಗೆ ನಡೆದ ಪ್ರಕ್ರಿಯೆಗಳನ್ನು ಉಲ್ಲೇಖಿಸಿ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, 2004 ರಿಂದ 2010ರ ತನಕ ಸಿದ್ದರಾಮಯ್ಯ ಪಾತ್ರವೇ ಇಲ್ಲ. 1992ರಲ್ಲಿ ಮುಡಾ ಸ್ವಾಧೀನವನ್ನು 1998ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ. 2004ರಲ್ಳಿ ಸಿಎಂ ಬಾಮೈದನಿಗೆ ಮಾರಾಟ ಆಗಿದೆ. 2005ರಲ್ಲಿ ಕೃಷಿ ಜಮೀನಾಗಿ ಪರಿವರ್ತನೆ ಮಾಡಲಾಗಿದ್ದು, 2010ರಲ್ಲಿ ಸಿಎಂ ಪತ್ನಿಗೆ ದಾನಪತ್ರ ಮಾಡಲಾಗಿದೆ. ಬಹುತೇಕ ಸಮಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿಲ್ಲ. ಯಾವುದೂ ತರಾತುರಿಯಲ್ಲಿ ನಡೆದಿಲ್ಲ. 2020ರಲ್ಲಿ ಭೂಮಿಗೆ ಪರಿಹಾರವಾಗಿ ನಿವೇಶನಗಳನ್ನು ಹಂಚಲಾಗಿದೆ. 2022ರಲ್ಲಿ ಸೈಟ್‌ಗಳ ಕ್ರಯ ಆಗಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಟಿ.ಜೆ. ಅಬ್ರಾಹಂ ಒಬ್ಬ ಬ್ಲ್ಯಾಕ್ ಮೇಲರ್, ಆತನಿಗೆ ಸುಪ್ರೀಂ ಕೋರ್ಟ್ ದಂಡ ಹಾಕಿದೆ ಎಂದರು. ಆದರೆ, ಅದೆಲ್ಲಾ ಈಗ ಅವಶ್ಯಕತೆ ಇಲ್ಲ ಎಂದು ಜಡ್ಜ್ ನಾಗಪ್ರಸನ್ನ ಹೇಳಿದರು.

ಮುರುಗೇಶ್ ನಿರಾಣಿ, ಜೊಲ್ಲೆ, ಜನಾರ್ದನ ರೆಡ್ಡಿ ಸೇರಿ ಹಲವ ವಿರುದ್ಧದ ಅರ್ಜಿಗಳು ಬಾಕಿ ಇದೆ. ಈ ಎಲ್ಲಾ ವಿಚಾರವನ್ನ ಕ್ಯಾಬಿನೆಟ್ ಸಲಹೆಯಲ್ಲಿ ಉಲ್ಲೇಖಿಸಲಾಗಿದೆ. ಹೊಸ‌ ಬಿಎನ್‌ಎಸ್ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಹೊಸ‌ ಕಾಯಿದೆಯ ಬದಲಾವಣೆ ಎಂದರೆ 420, ಈಗ ವಂಚನೆ ಅಲ್ಲ. 17ಎ ಅಡಿ ಯಾವುದೇ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಅನುಮತಿ‌ ಕೇಳಿಲ್ಲ. ಕರ್ತವ್ಯದ ಭಾಗವಾಗಿ ಸಿಎಂ ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ತೀರ್ಮಾನ ಮಾಡಿಲ್ಲ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಂವಿಧಾನದ 163ನೇ ವಿಧಿಯನ್ನು ಉಲ್ಲಂಘನೆ ಮಾಡಿದ್ದಾರೆ.

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ತಿಳಿಸಿದರು.

Exit mobile version