ಬೆಂಗಳೂರು: ಮುಡಾ ನಿವೇಶನ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಮಿ ಖರೀದಿಸಿದ್ದಾರೆಂದು ಆರೋಪಿಸಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಇದನ್ನೇ ಪ್ರತಿಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿವೆ. ಅದರಲ್ಲೂ, ಸೋಮವಾರದಿಂದ (ಜುಲೈ 15) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಸದನದಲ್ಲಿ ಅಬ್ಬರಿಸಲು ಬಿಜೆಪಿ ಸಜ್ಜಾಗಿದೆ. ಇದರ ಮಧ್ಯೆಯೇ ರಾಜ್ಯ ಸರ್ಕಾರ (Karnataka Government) ಎಚ್ಚೆತ್ತುಕೊಂಡಿದ್ದು, ಮುಡಾ ಪ್ರಕರಣದ ತನಿಖೆಗೆ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ವಿಪಕ್ಷಗಳ ಹೋರಾಟದಿಂದ ತಪ್ಪಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರವು ಮುಡಾ ಪ್ರಕರಣದ ತನಿಖೆಗಾಗಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿದೆ. ಆರು ತಿಂಗಳೊಳಗಾಗಿ ತನಿಖಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತನಿಖೆಗೆ ಸಹಕರಿಸಲು ಸೂಚಿಸಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರೇ ಪ್ರಮುಖವಾಗಿರುವ ಕಾರಣ ಬಿಜೆಪಿಯು ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದೆ. ಅದರಲ್ಲೂ, ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯೋಜನೆ ರೂಪಿಸಿಕೊಂಡಿದೆ. ಮಾಧ್ಯಮಗಳಲ್ಲೂ ಹಗರಣದ ಕುರಿತು ನಿರಂತರವಾಗಿ ವರದಿಯಾಗಿದೆ. ಇನ್ನು, ವಾಲ್ಮೀಕಿ ನಿಗಮದ ಭ್ರಷ್ಟಾಚಾರವೂ ಸರ್ಕಾರಕ್ಕೆ ಉರುಳಾಗಿದೆ. ಹಾಗಾಗಿ, ಮುಜುಗರದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರವು
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು ಹಾಗೂ ಕುಟುಂಬದವರು, ಜಿಲ್ಲಾಧಿಕಾರಿ, ತಹಸೀಲ್ದಾರ್, ಮುಡಾ ಅಧ್ಯಕ್ಷರ ವಿರುದ್ಧ ದೂರು ಸಲ್ಲಿಸಿದ್ದಾರೆ.
ದಾಖಲೆಗಳಲ್ಲಿ ಜಮೀನು ಮಾರಪ್ಪ ಎಂಬವರ ಹೆಸರಲ್ಲಿದೆ. ಆದರೆ, ಅನಧಿಕೃತ ವ್ಯಕ್ತಿಗಳನ್ನು ಸೃಷ್ಟಿಸಿ ಕೋಟ್ಯಂತರ ರೂ ಮೌಲ್ಯದ ಆಸ್ತಿ ಲಪಟಾಯಿಸಿದ್ದಾರೆಂದು ದಾಖಲೆಗಳ ಸಮೇತ ವಿಜಯನಗರ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ. ಆದರೆ, ಈಗಾಗಲೇ ತನಿಖಾ ತಂಡದಿಂದ ತನಿಖೆ ನಡೆಯುತ್ತಿರುವ ಕಾರಣ ಮತ್ತೊಂದು ತನಿಖೆ ಸಾಧ್ಯವಿಲ್ಲ ಎಂದು ಪೊಲೀಸರು ಹಿಂಬರಹ ಬರೆದು ಕಳುಹಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: R Ashok: ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ: ಆರ್. ಅಶೋಕ್