MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ - Vistara News

ಕರ್ನಾಟಕ

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

MUDA site scandal: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಟೀಕಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನೇತೃತ್ವದ ಸರ್ಕಾರದಿಂದಲೇ 62 ಕೋಟಿ ರೂ.ಗಳ ಭಾರೀ ಪರಿಹಾರವನ್ನು ಏಕೆ ಕೇಳುತ್ತಿದ್ದಾರೆ? ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ಮುಡಾ ಪ್ರಕರಣವನ್ನು (MUDA site scandal) ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಒಪ್ಪಿಸಲು ಹೆದರಬಾರದು. ಹಾಗೆಯೇ ಜಾಣತನದಿಂದ ತಮಗೆ ನಿಕಟರಾಗಿರುವ ನಿವೃತ್ತ ನ್ಯಾಯಾಧೀಶರನ್ನು ಕರೆತಂದು ತನಿಖೆ ನಡೆಸಲು ಮುಖ್ಯಮಂತ್ರಿಗಳು ಮುಂದಾಗಬಾರದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪದ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಪಾತ್ರವಿದೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತಂತೆ ಇಂದಿನ ಪತ್ರಿಕೆಗಳಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಇಡೀ ದೇಶದಲ್ಲಿ ಬಹುಶಃ ಹಿಂದಿನ ಅಥವಾ ಇಂದಿನ ಯಾವ ಮುಖ್ಯಮಂತ್ರಿಯೂ ತಮ್ಮ ನೇತೃತ್ವದ ಸರ್ಕಾರದ ವಿರುದ್ಧವೇ ಹೀಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆಯೂ ಹೌದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ತಾವು ಸದಾ ಪಾರದರ್ಶಕವಾಗಿದ್ದು, ತಾವೊಬ್ಬ ಲೋಹಿಯಾ-ಸಮಾಜವಾದಿ ಹೇಳಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನು ಇದು ಬಯಲು ಮಾಡಿದೆ. ಮುಡಾ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಿದರೆ ಅನುಮಾನಾಸ್ಪದವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ಮರಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ನಂಬಲಾಗದ ಮತ್ತು ಆಘಾತಕಾರಿ ಸಂಗತಿ. ಹಾಗೆಯೇ, ಮುಖ್ಯಮಂತ್ರಿಗಳು ಏಕೆ ಧಾವಂತದಲ್ಲಿದ್ದಾರೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಹೆಚ್ಚಿನ ಪರಿಹಾರವನ್ನು ಕೇಳುವ ಮೊದಲು ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿ ನಡೆದಿದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕಲ್ಲವೇ? ಸರ್ಕಾರ ಯಾವುದೇ ಪಕ್ಷದ್ದಿರಲಿ, ಒಬ್ಬ ಶ್ರೀಸಾಮಾನ್ಯನಿಗೆ ಹೋಲಿಸಿದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ ಯಾವ ರೀತಿಯ ಅನುಕೂಲ ಕಲ್ಪಿಸಲಾಗಿದೆ ಎನ್ನುವುದನ್ನು ಮೊದಲು ತನಿಖೆ ಮಾಡಬೇಕಲ್ಲವೇ? ಸಿದ್ದರಾಮಯ್ಯನವರು ಅಧಿಕಾರದಲ್ಲಿರಲಿ ಅಥವಾ ಪ್ರತಿಪಕ್ಷದಲ್ಲಿರಲಿ, ಅನೇಕ ದಶಕಗಳಿಂದ ರಾಜ್ಯದಲ್ಲಿ ಬಹಳ ಪ್ರಭಾವಶಾಲಿ ವ್ಯಕ್ತಿಯಾಗಿರುವುದಂತೂ ನಿಜ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕ ಒಳಿತಿಗಾಗಿ ಬಿಟ್ಟುಕೊಡುತ್ತಾರೆ. ಆದರೆ ಇಲ್ಲಿ ಒಬ್ಬ ಮುಖ್ಯಮಂತ್ರಿಗಳು ಅತ್ಯಧಿಕ ಪರಿಹಾರ ಪಡೆದುಕೊಂಡದ್ದು ಮಾತ್ರವಲ್ಲ, ಇನ್ನೂ ಹೆಚ್ಚು ಕಬಳಿಸಲು ಆಸೆ ಪಡುತ್ತಿದ್ದಾರೆ. ನೆಹರೂ-ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಸಿಎಂ ಸಿದ್ದರಾಮಯ್ಯನವರ, ಆ ಹಿರಿಯರ ʼತ್ಯಾಗʼದ ಮಾದರಿಯನ್ನೂ ಅನುಸರಿಸಬೇಕು. ಆ ಕುಟುಂಬ ಅನೇಕ ವರ್ಷಗಳ ಹಿಂದೆ ಪ್ರಯಾಗರಾಜ್‌ನಲ್ಲಿರುವ ಪೂರ್ವಜರ ಮನೆಯನ್ನು ಬಿಟ್ಟುಕೊಟ್ಟಿತ್ತು. ಆದರೆ ನಂತರ ಇಡೀ ದೇಶವನ್ನು ಆಕ್ರಮಿಸಿಕೊಂಡರು ಎನ್ನುವುದು ಬೇರೆಯೇ ಕಥೆ. ಆದರೂ ತಾಂತ್ರಿಕವಾಗಿಯಾದರೂ ಅವರು ಏನೋ ಒಂದನ್ನು ತ್ಯಾಗ ಮಾಡಿದರಲ್ಲ, ಅದರಲ್ಲಿಯೂ ಒಂದು ಪಾಠ ಕಲಿಯಲಿಕ್ಕಿದೆ ಎಂದು ತಿಳಿಸಿದ್ದಾರೆ.

ತಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಹಿರಿಯ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಮುಡಾ ಪ್ರಕರಣವನ್ನು ತನಿಖೆಗೆ ಕೊಡಲು ಹಿಂಜರಿಯಬಾರದು. ಈ ಪ್ರಕರಣದ ತನಿಖೆಗೆ ತಮಗೆ ಆಪ್ತರಾದ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಬಗ್ಗೆಯೂ ಕೂಡ ಅವರು ಯೋಚಿಸಬಾರದು. ಈ ಬೃಹತ್ ಹಗರಣ ಸ್ವತಂತ್ರವಾಗಿ ತನಿಖೆಯಾಗಬೇಕಿದೆ. ಅವರು ಮುಖ್ಯಮಂತ್ರಿಯಾಗಿರುವುದರಿಂದ, ತಾವೇ ಫಿರ್ಯಾದಿ ಮತ್ತು ತಾವೇ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷದ ಕೆಲವು ಹಿರಿಯ ನಾಯಕರು ಸಲಹೆ ನೀಡಿದ್ದಾರೆ. ಬಹುಶಃ ಅವರು ಅದನ್ನು ಪರಿಗಣಿಸಿದರೆ ಒಳ್ಳೆಯದೇನೋ ಎಂದು ಹೇಳಿದ್ದಾರೆ.

ಇದನ್ನೂ ಓದಿ | CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕರುಗಳನ್ನು ತೆಗಳಲು, ನಿಂದಿಸಲು ಸದಾ ಮುಗಿಬೀಳುವ ಸಿದ್ದರಾಮಯ್ಯನವರ ಬೆಂಬಲಿಗ ಪಡೆಯ ಉದಾರವಾದಿಗಳು ಮತ್ತು ನಗರ ನಕ್ಸಲರು, ಈ ವಿಷಯದಲ್ಲಿ ಹೇಗೆ ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಾರೆ ಎನ್ನುವ ಕುತೂಹಲ ನನಗೂ ಇದೆ. ಅವರು ಪ್ರತಿಭಟಿಸಲು ಬಯಸುವುದಾದರೆ ಅಗತ್ಯ ವ್ಯವಸ್ಥೆಗಳನ್ನು ನಾವೇ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

New Medical Colleges: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಪದವಿಪೂರ್ವ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‍ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ)ಗಳಿಗೆ ಅವಕಾಶ ಸಿಕ್ಕಿದೆ.

VISTARANEWS.COM


on

New Medical Colleges
Koo

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ (New Medical Colleges) ಆಯೋಗ (ಎನ್‍ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಪದವಿಪೂರ್ವ ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‍ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ) ಆಗಿವೆ.

ಎಷ್ಟು ವೈದ್ಯಕೀಯ ಸೀಟು ಲಭ್ಯ?

ಈ ಮೂರು ವೈದ್ಯಕೀಯ ಕಾಲೇಜುಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದ್ದು, ಬಿಜಿಎಸ್‍ಗೆ 150, ಪಿಇಎಸ್‍ಗೆ 100 ಹಾಗೂ ಬಾಗಲಕೋಟೆ ಎಸ್‍ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.

ಇದನ್ನೂ ಓದಿ: Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

ರಾಜ್ಯದಿಂದ ಈ ಬಾರಿ ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ಎನ್‍ಎಂಸಿಗೆ ಮನವಿ ಮಾಡಲಾಗಿತ್ತು. ಆದರೆ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕೆಂಬ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ.

ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿದೆ. ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದು, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ.

ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್‍ಎಂಸಿ ಅನುಮೋದನೆ ನೀಡಿದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಸಿಗಲಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ರಾಮನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್‍ಗಳು ಇರಬೇಕೆಂಬ ನಿಯಮವಿದೆ. ಆದರೆ ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ. ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಬೇಕಾದರೆ ಎಂಎನ್‍ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕಾಗುತ್ತದೆ.

ನಿಯಮಗಳು ಏನೇನು?

2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಿದೆ.

ರಾಜ್ಯಗಳಲ್ಲಿರುವ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಎಂಬ ಅನುಪಾತಕ್ಕೆ ಅನುಗುಣವಾಗಿ ಈ ಮಾನದಂಡ ರೂಪಿಸಲಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ.

ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕೂಡ ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು. ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಇರಬೇಕು. ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮರ್ಥ್ಯ ಹೊಂದಿರಬೇಕು. ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.

ಇದನ್ನೂ ಓದಿ: PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು. ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕಾಗುತ್ತದೆ.

Continue Reading

ಉಡುಪಿ

Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Gururaj Gantihole: ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಯಿಂದ ಅಪಾರ ಪ್ರಮಾಣದ ತೋಟಗಾರಿಕೆ ಸೇರಿ ವಿವಿಧ ರೀತಿಯ ಬೆಳೆಗಳಿಗೆ ಹಾನಿಯಾಗಿದೆ. ಹೀಗಾಗಿ ಶಾಸಕ ಗುರುರಾಜ ಗಂಟಿಹೊಳೆ ಅವರು ತಾಲೂಕಿನ ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು.

VISTARANEWS.COM


on

Koo

ಉಡುಪಿ: ಬೈಂದೂರು ಕ್ಷೇತ್ರದಲ್ಲಿ ಬಿರುಗಾಳಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ (Gururaj Gantihole) ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಂದೂರು ತಾಲೂಕಿನಾದ್ಯಂತ ಭಾರಿ ಮಳೆಯಿಂದ (Heavy Rain) ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಬೈಂದೂರು ತಾಲೂಕು ತಲ್ಲೂರು ಕೋಟೆ ಬಾಗಿಲು ಬಯಲು ಮನೆ ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ, ಮಳೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಯಿಂದ ಅಪಾರ ಪ್ರಮಾಣದ ತೋಟಗಾರಿಕೆ ಸೇರಿ ವಿವಿಧ ರೀತಿಯ ಬೆಳೆಗಳಿಗೆ ಹಾನಿಯಾಗಿದೆ. ಹೀಗಾಗಿ ನೆರೆಪೀಡಿತ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಶಾಸಕರು, ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜು.9) ರಜೆ ಘೋಷಿಸಲಾಗಿದೆ. ಸತತ ನಾಲ್ಕನೇ ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಏಳು ತಾಲೂಕುಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿರಜೆ ಘೋಷಣೆ ಮಾಡಿದ್ದಾರೆ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಇದನ್ನೂ ಓದಿ | Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

Ambedkar’s Portrait:
ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Ambedkar's portrait
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (ಆ.15) ಮತ್ತು ಸಂವಿಧಾನ ದಿನಾಚರಣೆ (ನ.6) ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರ್‌ (Dr BR Ambedkar) ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ (Ambedkar’s Portrait) ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.

ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

Continue Reading

ಪ್ರಮುಖ ಸುದ್ದಿ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಪುತ್ರಿಯ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

VISTARANEWS.COM


on

Self Harming
Koo

ದಾವಣಗೆರೆ: ಬಿಜೆಪಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆ.ಜಿ. (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ ಮಾಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ (Pratap Kumar K.G) ಮೃತಪಟ್ಟಿದ್ದಾರೆ.

ಮಾಜಿ ಸಚಿವ ಬಿ.ಸಿ. ಪಾಟೀಲ್‌ರ ಮೊದಲ ಪುತ್ರಿ ಸೌಮ್ಯಾ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವಿದ್ದು, ಅಲ್ಲಿಗೆ ಕುಟುಂಬಸ್ಥರು, ಸಂಬಂಧಿಕರು ತೆರಳುತ್ತಿದ್ದಾರೆ.

ಮೆಗ್ಗಾನ್‌ ಅಸ್ಪತ್ರೆಗೆ ಆಗಮಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು ಪೊಲೀಸರಿಂದ ಮಾಹಿತಿ ಪಡೆದು, ಕಾರಿನಲ್ಲಿ ಕುಳಿತು ದುಃಖಿಸುತ್ತಿರುವುದು ಕಂಡುಬಂದಿದೆ.

ಶಿವಮೊಗ್ಗದಲ್ಲಿ ಬಿ.ಸಿ.ಪಾಟೀಲ್ ಮಾತನಾಡಿ, ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ನಂತರ ಹೊನ್ನಾಳಿ-ಮಲೆಬೆನ್ನೂರು ರೋಡ್‌ನಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿಯಿತು. ಮೊದಲು ದಾವಣಗೆರೆಗೆ ಶಿಫ್ಟ್ ಮಾಡಲು ಹೇಳಿದ್ದೆವು, ನಂತರ ಶಿವಮೊಗ್ಗ ಹತ್ತಿರ ಅಂತ ಇಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಕಾರಿಪುರ ಹತ್ತಿರ ಬಂದಾಗ ಜೀವ ಹೋಗಿದೆ ಎಂದು ತಿಳಿಸಿದರು.

ಮಕ್ಕಳ ವಿಚಾರದಲ್ಲಿ ಅವರಿಗೆ ಕೊರಗಿತ್ತು, ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೇ ನೋಡಿಕೊಳ್ಳುತ್ತಿದ್ದರು. ಮದುವೆ ಆಗಿ 16 ವರ್ಷ ಆಗಿತ್ತು, ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಈಗ ಇಂತಹ ಘಟನೆ ನಡೆದಿದೆ. ನಾಳೆ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಿದರು.

ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
New Medical Colleges
ಕರ್ನಾಟಕ2 mins ago

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

Jay Shah
ಕ್ರೀಡೆ7 mins ago

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Terrorists Attack
ಪ್ರಮುಖ ಸುದ್ದಿ14 mins ago

Terrorists Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ನಾಲ್ವರು ಯೋಧರು ಹುತಾತ್ಮ, 6 ಸೈನಿಕರಿಗೆ ಗಾಯ

Union Budget 2024
ದೇಶ19 mins ago

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Tej Pratap Yadav
ದೇಶ33 mins ago

Tej Pratap Yadav: ಶಿವಲಿಂಗವನ್ನು ತಬ್ಬಿ ಕುಳಿತು ಭಕ್ತಿ ಪ್ರದರ್ಶಿಸಿದ ಲಾಲು ಪ್ರಸಾದ್‌ ಯಾದವ್ ಪುತ್ರ; Video ಇಲ್ಲಿದೆ

Job Alert
Latest40 mins ago

Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

Menopause
ಆರೋಗ್ಯ54 mins ago

Yoga For Menopause: ಋತುಬಂಧ ಸಮಸ್ಯೆ ನಿಭಾಯಿಸಲು ಯೋಗ ನೆರವಾಗುವುದೇ?

ಉಡುಪಿ55 mins ago

Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Maldives
ಕ್ರೀಡೆ1 hour ago

Maldives: ವಿಶ್ವಕಪ್​ ಗೆಲುವಿನ ಸಂಭ್ರಮಾಚರಣೆಗೆ ಭಾರತ ತಂಡವನ್ನು ಆಹ್ವಾನಿಸಿದ ಮಾಲ್ಡೀವ್ಸ್‌

Sequins Lehenga Trend
ಫ್ಯಾಷನ್1 hour ago

Sequins Lehenga Trend: ಅಂಬಾನಿ ಮಗನ ಮದುವೆ ಎಫೆಕ್ಟ್‌; ಸಿಕ್ವಿನ್ಸ್ ಲೆಹೆಂಗಾಗಳಿಗೆ ಡಿಮ್ಯಾಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ3 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ8 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು9 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌