Muda site scandal: ನಕಲಿ‌ ದಾಖಲೆ ಸೃಷ್ಟಿಸಿ ಭೂಮಿ ಖರೀದಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು - Vistara News

ಕರ್ನಾಟಕ

Muda site scandal: ನಕಲಿ‌ ದಾಖಲೆ ಸೃಷ್ಟಿಸಿ ಭೂಮಿ ಖರೀದಿ ಆರೋಪ; ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು

Muda site scandal: ನಕಲಿ‌ ದಾಖಲೆ ಸೃಷ್ಟಿಸಿ ಭೂಮಿ ಖರೀದಿಸಿದ್ದಾರೆಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ಮುಡಾ ನಿವೇಶನ ಹಗರಣ (Muda site scandal) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ನಕಲಿ‌ ದಾಖಲೆ ಸೃಷ್ಟಿಸಿ ಭೂಮಿ ಖರೀದಿಸಿದ್ದಾರೆಂದು ಆರೋಪಿಸಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು ಹಾಗೂ ಕುಟುಂಬದವರು, ಜಿಲ್ಲಾಧಿಕಾರಿ, ತಹಸೀಲ್ದಾರ್, ಮುಡಾ ಅಧ್ಯಕ್ಷರ ವಿರುದ್ಧ ದೂರು ಸಲ್ಲಿಸಿದ್ದಾರೆ.

ದಾಖಲೆಗಳಲ್ಲಿ ಜಮೀನು ಮಾರಪ್ಪ ಎಂಬವರ ಹೆಸರಲ್ಲಿದೆ. ಆದರೆ, ಅನಧಿಕೃತ ವ್ಯಕ್ತಿಗಳನ್ನು ಸೃಷ್ಟಿಸಿ ಕೋಟ್ಯಂತರ ರೂ ಮೌಲ್ಯದ ಆಸ್ತಿ ಲಪಟಾಯಿಸಿದ್ದಾರೆಂದು ದಾಖಲೆಗಳ ಸಮೇತ ವಿಜಯನಗರ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ. ಆದರೆ, ಈಗಾಗಲೇ ತನಿಖಾ ತಂಡದಿಂದ ತನಿಖೆ ನಡೆಯುತ್ತಿರುವ ಕಾರಣ ಮತ್ತೊಂದು ತನಿಖೆ ಸಾಧ್ಯವಿಲ್ಲ ಎಂದು ಪೊಲೀಸರು ಹಿಂಬರಹ ಬರೆದು ಕಳುಹಿಸಿದ್ದಾರೆ.

ಪೊಲೀಸರ ಜತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ದೂರುದಾರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್‌ಟಿಸಿಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಯಾಕಿದೆ? ದೇವರಾಜು ಮತ್ತು ನಂತರ ಮಲ್ಲಿಕಾರ್ಜುನಸ್ವಾಮಿ ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ. ಶೇ.5 ಮಲ್ಲಿಕಾರ್ಜುನ ಹಾಗೂ ಪಾರ್ವತಿ ಅವರ ಹೆಸರಿಗೆ ಖಾತೆ ವರ್ಗಾವಣೆ ಮಾಡುವ ವೇಳೆ ಸ್ಥಳ ಪರಿಶೀಲನೆ ಮಾಡಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಕುವೆಂಪು ಏನು ಹೇಳಿದ್ದಾರೆ ಗೊತ್ತಾ? ಕಾರ್ಯದರ್ಶಿಗೆ ʼಭಾಷಾಂತರʼ ಪಾಠ ಮಾಡಿದ ಸಿಎಂ!

ಪರಿಶೀಲನೆ ಮಾಡಿದ್ದರೆ ಮುಡಾ ಅಭಿವೃದ್ಧಿ ಮಾಡಿರುವುದು ಕಂಡುಬಂದಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಿದರು? ನಿಜವಾದ ಭೂ ಮಾಲೀಕರ ವಂಶವೃಕ್ಷ, ಅವರ ಮರಣ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳ ಉಲ್ಲೇಖ ಇಲ್ಲ ಯಾಕೆ? ಕೆಸರೆ ಗ್ರಾಮದ 464ನೇ ಸರ್ವೆ ನಂಬರ್‌ನ 3.16 ಎಕರೆ ಭೂ ಭೂ ಸ್ವಾಧೀನ ಕೈ ಬಿಡಲು ಕಾರಣ ಏನು? 2005ರಲ್ಲೇ ಮಲ್ಲಿಕಾರ್ಜುನ ಸ್ವಾಮಿಗೆ ಅನ್ಯಕ್ರಾಂತ ಆಗಿದ್ದರೆ ಸದರಿ ಉಲ್ಲೇಖ ಆರ್‌ಟಿಸಿಗಳಲ್ಲಿ ಯಾಕೆ ಇಲ್ಲ? 2004-05ನೇ ಸಾಲಿನ ಆರ್‌ಟಿಸಿಯ ಕಲಂ 10ರಲ್ಲಿ MR8/92-93 ಎಂಬ ಉಲ್ಲೇಖವಿದೆ. ಇದನ್ನು ಗಮನಿಸಿದಾಗ ಮಾರಪ್ಪ ಎಂಬವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ಯಿತ್ವದಿಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest16 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest17 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ17 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest18 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest19 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest22 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌