MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ! - Vistara News

ಕರ್ನಾಟಕ

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

MUDA site scandal: ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಜಮೀನು ಸ್ವಾಧೀನವಾಗಿತ್ತು, ಅದಕ್ಕೆ ಪರ್ಯಾಯವಾಗಿ ಸೈಟ್‌ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

MUDA site scandal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಬಿಜೆಪಿ ಸರ್ಕಾರ ಅವಧಿಯಲ್ಲೇ ಸಿಎಂ ಹೆಂಡತಿಯವರ ಜಮೀನು ಸ್ವಾಧೀನ ಆಗಿದೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಸಿಎಂ ಹೆಂಡತಿ ಯಾಕೆ ಅಕ್ರಮ (MUDA site scandal) ಮಾಡುತ್ತಾರೆ. ಅವರ ಆಸ್ತಿ ಇತ್ತು, ಅದು ಹೋಗಿದೆ. ಪರ್ಯಾಯ ಸೈಟ್ ಕೊಡಬೇಕು, ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿ, ಅವರ ಜಮೀನು ಪಡೆದ ಹಿನ್ನೆಲೆಯಲ್ಲಿ ಇನ್ಸೆಂಟೀವ್ ಸ್ಕೀಮ್ ಅಡಿ ಮುಡಾ ಸೈಟ್‌ ನೀಡಿದೆ. ಡಿನೋಟಿಫೈ ಮಾಡದೆ ಇನ್ಸೆಂಟಿವ್ ತಗೊಂಡಿರೊದ್ದಕ್ಕೆ ಖುಷಿ ಪಡಬೇಕು. ಅವರು ಅರ್ಹರಿದ್ದಾರೆ, ತೆಗೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಅಧಿಕಾರಿಗಳ ಸಸ್ಪೆಂಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರ ವಿರುದ್ಧವಾಗಿ ಕಠಿಣವಾಗಿ ಇರುತ್ತಾರೆ. ಯಾರೆ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು, ತನಿಖೆ ಆಗಬೇಕು ಅಂತ ಹೇಳಿದ್ದಾರೆ. ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ. ನನಗೂ ಆ ನಾಗೇಂದ್ರ ವಿಚಾರದಲ್ಲಿ ಡೌಟ್ ಇತ್ತು. ಈ ಬಗ್ಗೆ ವಿಚಾರಿಸಿದಾಗ ನಮ್ಮ ಮಂತ್ರಿಗಳು ಅದರಲ್ಲಿ ಭಾಗಿಯಾಗಿಲ್ಲ ಎಂಬುವುದು ತಿಳಿದುಬಂದಿದೆ ಎಂದರು.

ಬೇರೆ ಯಾರೂ ಅಕ್ರಮ ಮಾಡಿಲ್ಲ ಅಂತ ಹೇಳೋದಿಲ್ಲ. ಆದರೆ ಮಿನಿಸ್ಟರ್ಸ್‌ ಯಾರೂ ಭಾಗಿಯಾಗಿಲ್ಲ. ಆ ವಿಚಾರದಲ್ಲಿ ನನಗೆ ಸಮಾಧಾನ ಇದೆ. ಅವಶ್ಯಕತೆ ಇದ್ದರೆ ಎಲ್ಲರನ್ನೂ ವಿಚಾರಣೆ ಮಾಡುತ್ತಾರೆ‌, ಎಷ್ಟೋ ಸಲ ನಮ್ಮನ್ನೇ ವಿಚಾರಿಸಿಲ್ಲವೇ ಎಂದು ಹೇಳಿದರು.

ಇದನ್ನೂ ಓದಿ | Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಯಾರೂ ಚರ್ಚೆ ಮಾಡದಂತೆ ಕೈ ನಾಯಕರಿಗೆ ಸೂಚನೆ ನೀಡಿದ್ದೀರಿ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸದೆ ಡಿಸಿಎಂ ನಿರ್ಗಮಿಸಿದರು.

ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

MUDA site Cm Siddaramaiah says his wife was given MUDA site during BJP regimescandal

ಬೆಂಗಳೂರು: ಮೈಸೂರಿನಲ್ಲಿ ಮುಡಾ ನಿವೇಶನ ಹಂಚಿಕೆ ಹಗರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರದ ಆದೇಶ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೂ ಮುಡಾ ಸೈಟ್‌ (MUDA site scandal) ಹಂಚಿಕೆಯಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪತ್ನಿಗೆ ನೀಡಿರುವ 50:50 ಅನುಪಾತದ ನಿವೇಶನಗಳ ಬಗ್ಗೆ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಇದ್ದ ಜಾಗವನ್ನು 1997ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದು, ಆ ಭೂಮಿಗೆ 2021ರಲ್ಲಿ ಪರಿಹಾರ ಕೊಟ್ಟಿತ್ತು ಎನ್ನಲಾಗಿದೆ. ಈ ಬಗ್ಗೆ ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿವೇಶನ ಹಂಚಿಕೆ ಬಿಜೆಪಿಯವರ ಕಾಲದಲ್ಲಿ ಆಗಿದ್ದು, ನನ್ನ ಹೆಂಡತಿಗೆ ಈ ಹಿಂದೆಯೇ ಸೈಟ್ ಹಂಚಲಾಗಿತ್ತು. 3 ಎಕರೆ 16 ಗುಂಟೆ ಜಮೀನು ನನ್ನ ಹೆಂಡತಿ ಹೆಸರಲ್ಲಿತ್ತು. ನನ್ನ ಬಾಮೈದ ತೆಗೆದಕೊಂಡಿದ್ದ ಜಾಗವನ್ನು ನನ್ನ ಹೆಂಡತಿಗೆ ದಾನ ಕೊಟ್ಟಿದ್ದ. ಅದನ್ನು ನಾನು ಅಧಿಕಾರದಲ್ಲಿ ಇದ್ದಾಗ ಖರೀದಿ ಮಾಡಿರಲಿಲ್ಲ‌. ಕಾನೂನಿನ ಪ್ರಕಾರವೇ ನಮಗೆ ಸೈಟ್‌ ಹಂಚಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಪ್ರಕಾರವೇ ನಮಗೆ 50:50 ನಿವೇಶನ ಕೊಡುವುದಾಗಿ ಮುಡಾದವರು ಹೇಳಿದ್ದರು. ಮಲ್ಲಿಕಾರ್ಜುನ್ ಎಂಬ ನನ್ನ ಬಾಮೈದ ಹರಿಶನ ಕುಂಕುಮ ಕೊಡುವಾಗ ನನ್ನ ಪತ್ನಿಗೆ ಗಿಫ್ಟ್ ಕೊಟ್ಟಿದ್ದ. ಆದರೆ ಅದನ್ನು ಮುಡಾದವರು ಸೈಟ್ ಮಾಡಿ ಹಂಚಿಬಿಟ್ಟರು. ಬಳಿಕ ನಮಗೆ ಜಮೀನು ಇಲ್ಲದಂತಾಯಿತು. ಅದಕ್ಕೆ ಮುಡಾದವರು ಬೇರೆ ಕಡೆ 50:50 ಸೈಟ್‌ ಕೊಟ್ಟಿದ್ದಾರೆ, ಇದು ತಪ್ಪಾ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Kannada New Movie: ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ ನಾಯಕನಾಗಿ ನಟಿಸಿರುವ, ನಿಶಾ ಯಾಲಿನಿ ನಾಯಕಿಯಾಗಿ ನಟಿಸಿರುವ, ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Kannada New Movie Kadalura Kanmani will release soon
Koo

ಬೆಂಗಳೂರು: ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು (Kannada New Movie) ನಿರ್ದೇಶಿಸಿದ್ದಾರೆ.

ಚಿತ್ರದ ನಾಯಕನಾಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ “ಕಡಲೂರ ಕಣ್ಮಣಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಿಶಾ ಯಾಲಿನಿ ನಾಯಕಿಯಾಗಿ ನಟಿಸಿದ್ದು. ಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಡುಪಿ, ಮಂಗಳೂರು, ಹೊನ್ನಾವರ, ಮಂಕಿ, ಮುರುಡೇಶ್ವರದ ಸುತ್ತಮುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ‌. ಈ ಮನಮೋಹಕ ಪ್ರಾಕೃತಿಕ ಸ್ಥಳಗಳನ್ನು ಮನೋಹರ್, ರವಿರಾಮ್ ಸುಂದರವಾಗಿ ಚಿತ್ರೀಕರಿಸಿದ್ದಾರೆ. ‘ಕಡಲೂರ ಕಣ್ಮಣಿ’ ಚಿತ್ರಕ್ಕೆ ನಿರ್ದೇಶಕ ರಾಮ್ ಪ್ರಸಾದ್ ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

‘ಕಡಲೂರ ಕಣ್ಮಣಿ’ ಅಂದರೆ ವಜ್ರ ಎಂದೂ ಅರ್ಥ. ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ. ಸಿಟಿಯ ಹುಡುಗ ಕಡಲ ತೀರದ ಹುಡುಗಿಯ ಪ್ರೇಮ ಕಥೆಯೇ ‘ಕಡಲೂರ ಕಣ್ಮಣಿ’. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರದ ಕಲಾವಿದರು ತುಂಬಾ ಚಂದವಾಗಿ ನಟಿಸಿದ್ದಾರೆ.

ಇದನ್ನೂ ಓದಿ: Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ. ಸಂಕಲನ ಕಾರ್ಯದಲ್ಲಿ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ. ಬಂಡೆ ಚಂದ್ರು ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ. ‘ಕಡಲೂರ ಕಣ್ಮಣಿ’ ಚಿತ್ರವನ್ನು ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr. ಸುನೀಲ್ ಕುಂಬಾರ್ ಅವರು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಪ್ರಸಾದ್ ಹುಣಸೂರ ತಿಳಿಸಿದ್ದಾರೆ.

Continue Reading

ಕರ್ನಾಟಕ

Cabinet Meeting: ವಿಮಾದಾರರು, ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್;‌ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಇಲ್ಲಿವೆ

Cabinet Meeting: ಸಚಿವ ಸಂಪುಟ ಸಭೆಯಲ್ಲಿ ಕೆ.ಜಿ.ಐ.ಡಿ (KGID) ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪ, 563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಒದಗಿಸುವುದು ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

VISTARANEWS.COM


on

Cabinet Meeting
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜುಲೈ 4) ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ, ಕೆ.ಜಿ.ಐ.ಡಿ (KGID) ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪ, 563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಒದಗಿಸುವುದು ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ನಡೆಸಿದ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳು ಹೀಗಿವೆ.

  1. 1. ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ 2023ರಲ್ಲಿ ಜಾರಿಗೊಳಿಸಿರುವ 03 ಶಿಫಾರಸುಗಳ ಪೈಕಿ “To bring all urban and Local Bodies Election wing under the control of DPAR” ಎಂಬ ಶಿಫಾರಸು ಕೈಬಿಡುವುದು. ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
  2. 2. ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.
  1. 3. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ.
  2. 4. 563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಪ್ರಯೋಗಾಲಯಗಳನ್ನು ಅಗತ್ಯವಿರುವ ಸಾಮಗ್ರಿಗಳನ್ನು ರೂ.29 ಕೋಟಿ ಹಾಗೂ ರೂ.24 ಕೋಟಿ ರೂ. ಮೊತ್ತದ ಔಷಧಿಗಳು ಸೇರಿ ಒಟ್ಟು ರೂ.53.66 ಕೋಟಿಗಳನ್ನು 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಭರಿಸುವುದು.
  3. 5. 2024-25ನೇ ಸಾಲಿನ ಆಯವ್ಯಯ ಕಂಡಿಕೆ 114ರ ಘೋಷಣೆಯನ್ವಯ 100 ಹಾಸಿಗೆಗಳ ಸಾಮಥ್ರ್ಯದ 07 ತಾಲ್ಲೂಕು ಆಸ್ಪತ್ರೆಗಳ (ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳು) ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳಿಗೆ ತಗಲುವ ವೆಚ್ಚವನ್ನು ರಾಜ್ಯವಲಯದ ಲೆಕ್ಕ ಶೀರ್ಷಿಕೆ: 4210-01-110-1-19-436ರ ನಬಾರ್ಡ್ ಯೋಜನೆಯಡಿ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
  4. 6. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾದ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ವಿವಿಧ ವೃಂದದ ಒಟ್ಟು 158 ಹುದ್ದೆಗಳನ್ನು ಸೃಜಿಸಲು; ಹೆಚ್ಚುವರಿ 217 ಹುದ್ದೆಗಳನ್ನು ಕಡಿಮೆ ಒತ್ತಡ ಇರುವ ಸ್ಥಳಗಳಿಂದ ಅವಶ್ಯವಿರುವ ಕೇಂದ್ರಗಳಿಗೆ ಸ್ಥಳಾಂತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
  5. 7. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಸ್ತುತ ಇರುವ ಕಟ್ಟಡದ ಉನ್ನತೀಕರಣ ಹಾಗೂ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ರೂ.30.00 ಕೋಟಿ ಅಂದಾಜು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
  6. 8. ಕೊಪ್ಪಳ ಜಿಲ್ಲೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಎರಡನೇ ಹಂತದ/ಹೆಚ್ಚುವರಿ ಕಾಮಗಾರಿಗಳ ಪರಿಷ್ಕೃತ ಮೊತ್ತ ರೂ.59.32 ಕೋಟಿಗಳ ಅಂದಾಜಿಗೆ ಅನುಮೋದನೆ ನೀಡಲು; ಸದರಿ ಕಾಮಗಾರಿಗೆ ಬಿಡುಗಡೆ ಗೊಳಿಸಬೇಕಾಗಿರುವ ರೂ.1.83 ಕೋಟಿಗಳನ್ನು 2024-25ನೇ ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ: 4202-02-104-1-03-386 ರಡಿ ಹಂಚಿಕೆಯಾಗಿರುವ ಅನುದಾನದಲ್ಲಿ ಬಿಡುಗಡೆಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.
  7. 9. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ “ಕಾನೂನು ಮತ್ತು ನೀತಿ-2023” ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಅಂಶ 28ರನ್ವಯ ಸಚಿವ ಸಂಪುಟ ಅನುಮೋದನೆ ನೀಡಿದೆ.
  8. 10. ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಧಾರ್ಮಿಕ ಮತ್ತು ಇನ್ನಿತರೆ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದ ಸ.ನಂ.434 ರಲ್ಲಿ 20 ಗುಂಟೆ “ಗೋಮಾಳ” ಜಮೀನನ್ನು “ಗೋಮಾಳ” ಶೀರ್ಷಿಕೆಯಿಂದ ತಗ್ಗಿಸಿ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100 ರಷ್ಟು ಮತ್ತು ಇನ್ನಿತರೆ ಶಾಸನಬದ್ದ ಶುಲ್ಕಗಳನ್ನು ಮತ್ತು ಜಮೀನಿನ ಅನಧೀಕೃತ ಅಧಿಬೋಗಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ರಂತೆ ದಂಡವನ್ನು ವಿಧಿಸಿ, ಮಂಜೂರು ಮಾಡಲು ಮತ್ತು ಮಾರ್ಗದರ್ಶಿ ಮೌಲ್ಯದ ಶೇ.10 ರಷ್ಟು ವಾರ್ಷಿಕ ಮೌಲ್ಯ ಆಕರಿಸಲು ಸಚಿವ ಸಂಪುಟ ನಿರ್ಧರಿಸಿದೆ.
  9. 11. ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿದೆ.
  10. 12. ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 27ರಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡುವುದು; ಸಚಿವ ಸಂಪುಟ ಅನುಮೋದಿಸಿದೆ.
  11. 13. ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಬೆಂಬಲಿಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 27 ರನ್ವಯ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಗ್ರಾಮದ ಸ.ನಂ. 59/1 ರಲ್ಲಿ 0.14 ಎಕರೆ (14 ಸೆಂಟ್) ಜಮೀನನ್ನು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ನಿಯಮ 22ಎ(1)(1)(4) ರಂತೆ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯ ಹಾಗೂ ಇನ್ನಿತರ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಬ್ರಹ್ಮಶ್ರೀ ಗುರುನಾರಾಯನ ಸ್ವಾಮಿ ಸೇವಾ ಸಂಘಕ್ಕೆ ಮಂಜೂರು ಮಾಡಲು; ಮತ್ತು ಮಾರ್ಗದರ್ಶಿ ಮೌಲ್ಯದ ಶೇ.10 ರಷ್ಟು ವಾರ್ಷಿಕ ಮೌಲ್ಯ ಆಕರಿಸಲು ನಿರ್ಧರಿಸಿದೆ.
  12. 14. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ, ಬೆಂಗಳೂರು ಇವರಿಗೆ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿ ನೀಡಿರುವ 120*150 ಅಡಿ ನಿವೇಶನದ ಗುತ್ತಿಗೆ ಅವಧಿಯನ್ನು 30 ವರ್ಷಗಳ ಗುತ್ತಿಗೆ ಅವಧಿಯನ್ನು ದಿನಾಂಕ: 30.07.2023 ರಿಂದ ಪೂರ್ವಾನ್ವಯವಾಗುವಂತೆ ಮುಂದಿನ 30 ವರ್ಷಗಳಿಗೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 22ರ (1)(1)(6) ರನ್ವಯ ಸದರಿ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ.2.50 ರಷ್ಟು ವಾರ್ಷಿಕ ಗುತ್ತಿಗೆ ಮೊತ್ತ ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಈ ಗುತ್ತಿಗೆ ಮೊತ್ತವನ್ನು ಎರಡು ವರ್ಷಗಳಿಗೊಮ್ಮೆ ಶೇ.10 ರಷ್ಟು ಹೆಚ್ಚಿಸುವ ಷರತ್ತಿಗೊಳಪಟ್ಟು ಮುಂದುವರೆಸಲು ಹಾಗೂ ವಾರ್ಷಿಕ ರೂ.10,000/- ಗಳಂತೆ ಗುತ್ತಿಗೆ ಬಾಡಿಗೆಯನ್ನು ಹೆಚ್ಚಿಸಲು ಸಚಿವ ಸಂಪುಟ ಒಪ್ಪಿದೆ.
  13. 15. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಕರಡು ನಿಯಮಗಳನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲು; ಹಾಗೂ ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  14. 16. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ.363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಸರಬರಾಜಾಗಿರುವ 20 ಬಸ್ಸುಗಳಿಗೆ ಪ್ರತಿ ಬಸ್‍ಗೆ ರೂ.41.72 ಲಕ್ಷಗಳಂತೆ ಒಟ್ಟು ರೂ.835.00 ಲಕ್ಷಗಳ ಪರಿಷ್ಕøತ ವೆಚ್ಚವನ್ನು ಭರಿಸಲು; 820 ಬಸ್ಸುಗಳನ್ನು ಪ್ರತಿ ಬಸ್‍ಗೆ ರೂ.43.35 ಲಕ್ಷಗಳಂತೆ ಒಟ್ಟು ರೂ.355.47 ಕೋಟಿಗಳ ವೆಚ್ಚದಲ್ಲಿ ಖರೀದಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
  15. 17. ಇಂದಿರಾ ಕಿಚನ್-ಕಮ್- ಕ್ಯಾಂಟೀನ್‍ಗಳಿಗೆ ಹೊಸ ಮೆನುವಿನಂತೆ ಅಡುಗೆ ಉಪಕರಣ ಹಾಗೂ ಪೀಠೋಪಕರಣಗಳನ್ನು ಒಟ್ಟು ರೂ.84.58 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.
  16. 18. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊತ್ತ ರೂ.2000.00 ಕೋಟಿಗಳ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5 ರಷ್ಟು ಮೊತ್ತ ರೂ.150.00 ಕೋಟಿಗಳು, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿಗಳಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು; ಸಚಿವ ಸಂಪುಟ ಅನುಮೋದಿಸಿದೆ.
  17. 19. ರೈತರ ಸಹಕಾರಿ ಸಕ್ಕರೆ ಕಾರ್ಖಾನೆ, ರನ್ನನಗರ, ಮುಧೋಳ ತಾಲೂಕು, ಬಾಗಲಕೋಟೆ ಜಿಲ್ಲೆ ಈ ಕಾರ್ಖಾನೆಯನ್ನು 2024-25ನೇ ಹಂಗಾಮಿನಿಂದ 30 ವರ್ಷಗಳ ಅವಧಿಗೆ ((Lease Rehabilitate Operate Transfer) LROT) ಆಧಾರದ ಮೇಲೆ ಇದ್ದಲ್ಲಿ ಇದ್ದಂತೆಯೇ (As is where is basis) ಖಾಸಗಿಯವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.
  18. 20. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಂಭವಿಸಿದ ಅಗ್ನಿ ಅವಗಡದಲ್ಲಿ ನಿಧನರಾದ ಶ್ರೀ ಸಿ.ಎಂ ಶಿವಕುಮಾರ್, ಅಧೀಕ್ಷಕ ಅಭಿಯಂತರರು ಹಾಗೂ ಪ್ರಭಾರ ಮುಖ್ಯ ಅಭಿಯಂತರರು ಇವರಿಗೆ ರೂ.50.00 ಲಕ್ಷಗಳ ಪರಿಹಾರ ಹಾಗೂ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ಮತ್ತು ತೀವ್ರ ಗಾಯಗೊಂಡ ಉಳಿದವರಿಗೆ ಪರಿಹಾರ ಧನವನ್ನು ಇಲಾಖಾ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಿ, ಸರ್ಕಾರಿ ಉದ್ಯೋಗವನ್ನು ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Anganwadi workers should not be worried says Minister Lakshmi Hebbalkar
Koo

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಭರವಸೆ ನೀಡಿದ್ದಾರೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ, ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಈ ವೇಳೆ ತಿಳಿಸಿದರು.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.

ಅಂಗನವಾಡಿ ಕೇಂದ್ರದ ಹೆಸರು ಬದಲಾವಣೆಗೆ ಚಿಂತನೆ

ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಬಿ. ಅಮ್ಜದ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Kannada New Movie Kadalura Kanmani will release soon
ಕರ್ನಾಟಕ4 mins ago

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Zircon Jewellery Fashion
ಫ್ಯಾಷನ್12 mins ago

Zircon Jewellery Fashion: ಹೈ ಫ್ಯಾಷನ್‌ ಜ್ಯುವೆಲರಿ ಲಿಸ್ಟ್‌ಗೆ ಸೇರಿದ ವೈವಿಧ್ಯಯಮಯ ಜಿರ್ಕೊನ್‌ ಆಭರಣಗಳ ಹಂಗಾಮಾ!

ZIM vs IND
ಪ್ರಮುಖ ಸುದ್ದಿ18 mins ago

ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

Cabinet Meeting
ಕರ್ನಾಟಕ22 mins ago

Cabinet Meeting: ವಿಮಾದಾರರು, ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್;‌ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಇಲ್ಲಿವೆ

Hair Oil Tips
ಆರೋಗ್ಯ39 mins ago

Hair Oil Tips: ರಾತ್ರಿ ಕೂದಲಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಲಾಭವೋ ನಷ್ಟವೋ?

karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Anganwadi workers should not be worried says Minister Lakshmi Hebbalkar
ಬೆಂಗಳೂರು1 hour ago

Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

FIR Against Customer
ವಿದೇಶ1 hour ago

Viral News: 1 ಸಾವಿರ ರೂ. ಬಿಲ್‌ಗೆ 2.5 ಲಕ್ಷ ರೂ. ಟಿಪ್ಸ್‌ ಕೊಟ್ಟ ಗ್ರಾಹಕ; ಕೇಸು ದಾಖಲಿಸಿದ ಕೆಫೆ!

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

Hemant Soren
ದೇಶ2 hours ago

Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ3 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ4 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ5 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ6 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ7 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ8 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌