ಯಾದಗಿರಿ: ಯಾದಗಿರಿ ನಗರದಲ್ಲಿ ಹಿಂದು ಯುವಕನ ಕೊಲೆ ಪ್ರಕರಣ ಸಂಬಂಧ (Murder Case) ನಗರಠಾಣೆ ಪೊಲೀಸರು ತಡವಾಗಿ ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಫೈಯಾಜ್ ಹಾಗೂ ಆಸೀಫ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರೊಟ್ಟಿ ವಿಚಾರವಾಗಿ ದಲಿತ ಯುವಕ ರಾಕೇಶ್‌ನನ್ನು ಅನ್ಯ ಕೋಮಿನ ಯುವಕರ ಗ್ಯಾಂಗ್ ಕೊಲೆ ಮಾಡಿತ್ತು. ನೆನ್ನೆ ರಾತ್ರಿ ಕೊಲೆ ಘಟನೆ ನಡೆದರೂ ಕೇಸ್ ದಾಖಲಿಸಿಕೊಳ್ಳದೆ ಪೊಲೀಸರು ಸಂಧಾನ ಮಾಡಿದ್ದರು. ಇಂದು ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಕೊಲೆ ಕೇಸ್ ದಾಖಲಿಸದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೊಟ್ಟಿ ಕೇಳಿದ್ದಕ್ಕೆ ರಾಕೇಶ್ ಮನೆಗೆ ನುಗ್ಗಿ ಫೈಯಾಜ್ ಹಾಗೂ ಆತನ ಗ್ಯಾಂಗ್ ಕೊಲೆ ಮಾಡಿತ್ತು. ಯುವಕನ ತಾಯಿ ಮಂಜಮ್ಮ ನೀಡಿರುವ ದೂರಿನ ಮೇರೆಗೆ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು
ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.
ಭಾನುವಾರ ರಾತ್ರಿ ರಾಕೇಶ್ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.
ಸ್ವಲ್ಪ ಸಮಯದ ನಂತರ ರಾಕೇಶ್ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.
ಇನ್ನು ಹಿಂದು ಯುವಕನ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.
ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.