ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಸೇರಿ ಗೆಳೆಯನನ್ನು ಕೊಲೆ (Murder Case) ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಪಿಎಂಸಿ ಯಾರ್ಡ್‌ನಲ್ಲಿ ನಡೆದಿದೆ.
ಓಂಕಾರ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆ ಸಂಬಂಧ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
ಭಾನುವಾರ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಕರೆದುಕೊಂಡು ಬಂದಿದ್ದರು. ಎಪಿಎಂಸಿ ಯಾರ್ಡ್‌ನಲ್ಲಿ ಮಾತುಕತೆ ಮಾಡುವ ವೇಳೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Murder Case | ಜಮೀನಿಗಾಗಿ ಯೋಧರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯ