Murder Case | ಪ್ರೀತಿ ಕೊಂದ ಕೊಲೆಗಾತಿ ಈಗ ಹೇಳೋ ಕತೆಗೆ ಸ್ಫೂರ್ತಿ; ಸುಂದರಿ ಹೆಂಡತಿಯ ಮರ್ಡರ್‌ ಕಹಾನಿ! - Vistara News

ಕರ್ನಾಟಕ

Murder Case | ಪ್ರೀತಿ ಕೊಂದ ಕೊಲೆಗಾತಿ ಈಗ ಹೇಳೋ ಕತೆಗೆ ಸ್ಫೂರ್ತಿ; ಸುಂದರಿ ಹೆಂಡತಿಯ ಮರ್ಡರ್‌ ಕಹಾನಿ!

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನ ಜತೆ ಸೇರಿ ಪತ್ನಿಯೇ ತನ್ನ ಗಂಡನನ್ನು ಅಪಘಾತ ಮಾಡಿ ಕೊಂದಿರುವ ಪ್ರಕರಣ ತನಿಖೆ ವೇಳೆ ಬಯಲಾಗಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಾಗಲಕೋಟೆ: ಇದೊಂದು ನಂಬಿಕೆ ದ್ರೋಹದ ಪ್ರಕರಣ. ಅರ್ಧಾಂಗಿಯೇ ಪತಿಯ ಕೊಂದ ಮೋಸದ ಕತೆ. ಹೆಂಡತಿಯೇ ಸರ್ವಸ್ವ ಎಂದು ತಿಳಿದವನು, ಆಕೆಯಿಂದಲೇ ಮೋಸ ಹೋಗಿ ಪ್ರಾಣ ತೆತ್ತ ವ್ಯಥೆ. ಅಪಘಾತದಲ್ಲಿ ಮೃತಪಟ್ಟಿದ್ದ ಪ್ರಕರಣವನ್ನು (Murder Case) ಪೊಲೀಸರು ಭೇದಿಸಿದ್ದು, ಹೆಂಡತಿಯೇ ಹಂತಕಿ ಎಂಬುದು ಬಯಲಾಗಿದೆ.

ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ಜುಲೈ ೨ರಂದು ಮಧ್ಯರಾತ್ರಿ ೧೨ರ ಸುಮಾರಿಗೆ ಪ್ರವೀಣ್ ಸೇಬಣ್ಣವರ (30) ಬೈಕ್‌ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ನೋಡಲು ಇದು ಅಪಘಾತ ಎಂದು ಅನ್ನಿಸಿದರೂ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಎಂಬ ಸ್ಫೋಟಕ ಮಾಹಿತಿಯೊಂದು ಹೊರಗೆ ಬಂದಿದೆ. ಈಗ ಪ್ರವೀಣ್‌ ಪತ್ನಿ ಹಾಗೂ ಆಕೆಯ ಪ್ರಿಯಕರ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ಮರ್ಡರ್‌; ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಏನಿದು ಪ್ರಕರಣ?

ಪ್ರವೀಣ್ ಸೇಬಣ್ಣವರ‌ ಅವರ ಜತೆ ನಿತ್ಯಾ ವಿವಾಹವಾಗಿತ್ತು. ಇಬ್ಬರೂ ಅನ್ಯೋನ್ಯವಾಗಿಯೇ ಇದ್ದರು. ಆದರೆ, ಈ ಮಧ್ಯೆ ಪತ್ನಿ ನಿತ್ಯಾಗೆ ರಾಘವೇಂದ್ರ ಎಂಬುವವನ ಮೇಲೆ ಪ್ರೀತಿಯಾಗಿದೆ. ಒಬ್ಬರಿಗೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿ ಗಟ್ಟಿಯಾಗಿದ್ದು, ತಮ್ಮಿಬ್ಬರ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆ ಎಂದು ಪ್ರವೀಣ್‌ ಹತ್ಯೆಗೆ ಇಬ್ಬರೂ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದರು. ಪ್ರವೀಣ್‌ ಬೈಕ್‌ನಲ್ಲಿ ಹೊರಡುವಾಗ ನಿತ್ಯಾ ಹಾಗೂ ಪ್ರಿಯಕರ ರಾಘವೇಂದ್ರ ಹಿಂದೆ ಕಾರಿನ ಮೂಲಕ ಪ್ರವೀಣ್‌ ಅವರನ್ನು ಫಾಲೋ ಮಾಡಿದ್ದಾರೆ.

ಯಾರೂ ಇಲ್ಲದ ಪ್ರದೇಶದಲ್ಲಿ ಕಾರಿನಿಂದ ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದರು. ಅಪಘಾತದಿಂದ ಗಂಭೀರವಾಗಿ ಗಾಯಗೊಂಡರೂ ಪ್ರವೀಣ್‌ ಕೂಡಲೇ ಪತ್ನಿ ನಿತ್ಯಾಗೆ ಕರೆ ಮಾಡಿದ್ದು, ತಮಗೆ ಅಪಘಾತವಾಗಿದೆ ಎಂದು ತಿಳಿಸುತ್ತಾರೆ. ಆದರೆ, ತಮಗೆ ಅಪಘಾತ ಮಾಡಿದ್ದು ನಿತ್ಯಾ ಎಂಬ ವಿಚಾರ ಅವರಿಗೆ ತೀಳಿದೇ ಇರುವುದಿಲ್ಲ. ಈ ವಿಷಯ ತಿಳಿದ ನಿತ್ಯಾ ಪುನಃ ತನ್ನ ಪ್ರಿಯಕರ ರಾಘವೇಂದ್ರನ ಜತೆ ಕಾರಿನಲ್ಲಿ ಬಂದು ಮತ್ತೊಮ್ಮೆ ಡಿಕ್ಕಿ ಹೊಡೆಸಿದ್ದಾಳೆ. ಬಳಿಕ ಪ್ರವೀಣ್‌ ಮೃತಪಟ್ಟಿರುವುದು ಖಚಿತವಾದ ಮೇಲೆ ಅಲ್ಲಿಂದ ಇಬ್ಪರೂ ಪರಾರಿಯಾಗಿದ್ದಾರೆ.

ಆದರೆ ಬೈಕ್ ಬಿದ್ದ ಜಾಗ ಹಾಗೂ ಶವದ‌ ಮೇಲಿನ ಗಾಯ ಶಂಕೆ ಮೂಡಿಸಿತ್ತು. ಪೊಲೀಸರು ಪ್ರಕರಣವನ್ನು ಬೆನ್ನಟ್ಟಿದಾಗ ಇದು ಕೊಲೆ ಎಂದು ತಿಳಿದು ಬಂದಿದೆ. ಸಂಶಯದ ಮೇರೆಗೆ ವಿಚಾರಣೆ ನಡೆಸುವಾಗ ನಿತ್ಯಾ ಹಾಗೂ ಆಕೆಯ ಪ್ರಿಯಕರ ರಾಘವೇಂದ್ರ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | ಪ್ರಿಯತಮೆಗೆ ಮದುವೆಯಾಗಿದ್ದರೂ ನಾ ನಿನ್ನ ಬಿಡಲಾರೆ ಎಂದ: ಕಡೆಗೆ ಕೊಲೆಯಾಗಿ ಹೋದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest1 hour ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest4 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest4 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest6 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest6 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest7 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest24 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌