Murder Case : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ; ಪತ್ನಿಗೆ ಕತ್ತಿ ಬೀಸಿ ಕೊಂದ ಪತಿ - Vistara News

ಉಡುಪಿ

Murder Case : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ; ಪತ್ನಿಗೆ ಕತ್ತಿ ಬೀಸಿ ಕೊಂದ ಪತಿ

Murder Case : ಪತಿ-ಪತ್ನಿ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿದೆ. ಕತ್ತಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

VISTARANEWS.COM


on

Family Dispute Husband murdered Wife
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿದ್ದಾಳೆ. ನೀಲಾವತಿ (42) ಮೃತ ದುರ್ದೈವಿ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ ಇತ್ತು. ಇಂದು ಅದು ವಿಪರೀತಕ್ಕೆ ತಿರುಗಿದ್ದು, ಜಗಳದಲ್ಲಿ ಸಿಟ್ಟಿಗೆದ್ದ ಲೋಕೇಶ್‌ ಪತ್ನಿ ನೀಲಾವತಿಗೆ ಕತ್ತಿಯನ್ನು ಬೀಸಿದ್ದಾನೆ.

ಕತ್ತಿಯಿಂದ ಬೀಸಿದ ರಭಸಕ್ಕೆ ತೀವ್ರ ಹಲ್ಲೆಗೊಳಗಾಗಿದ್ದ ನೀಲಾವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಜೀವಬಿಟ್ಟಿದ್ದಾಳೆ.ಇತ್ತ ಪತ್ನಿ ಕೊಂದ ಲೋಕೇಶ್ ನಾಪತ್ತೆಯಾಗಿದ್ದಾನೆ. ಸದ್ಯ ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Karnataka Weather : ಇನ್ನೆರಡು ದಿನಗಳು ರಾಜ್ಯಾದ್ಯಂತ ಸೆಕೆ ಟೈಂ; ತಾಪಮಾನ ಎಚ್ಚರಿಕೆ

ಉಡುಪಿಯಲ್ಲಿ ರಾತ್ರಿ ಬಸ್‌ ಸಂಚಾರ ವಿಷ್ಯಕ್ಕೆ ಇಬ್ಬರಿಗೆ ಚೂರಿ ಇರಿತ

ಪುತ್ತಿಗೆ ಪರ್ಯಾಯ ಸಮಯದಲ್ಲಿ ರಾತ್ರಿ ಬಸ್ ಸಂಚಾರ ವಿಷಯದಲ್ಲಿ ಇತ್ತಂಡಗಳ ನಡುವೆ ಗಲಾಟೆ ನಡೆದಿದೆ. ಪರ್ಯಾಯ ದಿನ ಬಸ್ ಸಂಚಾರ ವಿಷಯದಲ್ಲಿ ಜೆಎಂಟಿ ಬಸ್ ಸಿಬ್ಬಂದಿ ಹಾಗೂ ಟಿಎಂಟಿ ಬಸ್ ಸಿಬ್ಬಂದಿ ನಡುವೆ ಗಲಾಟೆ ನಡೆದಿತ್ತು.

Bus Dispute Assault Case in Udupi
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

ನಿನ್ನೆ ತಡರಾತ್ರಿ ಕೆಲಸ ಮುಗಿಸಿ ತೆರಳುತ್ತಿದ್ದ ವೇಳೆ ಜೆಎಂಟಿ ಬಸ್‌ನ ಶಿಶಿರ್ ಮತ್ತು ಸಂತೋಷ್ ಬೈಕ್ ಅಡ್ಡಗಟ್ಟಿದ ಟಿಎಂಟಿ ಬಸ್‌ನ ತನ್ವೀರ್, ಮುರ್ಹನ್, ಶಾಕೀರ್ ತಂಡದವರು ಚೂರಿ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

Udupi News : ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪರಿಕಲ್ಪನೆಯಲ್ಲಿ ಹಳೆ ಲಾರಿ ಚಾಸ್ಸಿಯನ್ನು ಕಿರು ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಮೂಲಕ ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದವರು ಖುಷಿಗೊಂಡಿದ್ದಾರೆ.

VISTARANEWS.COM


on

By

Udupi News
Koo

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news

ಇದನ್ನೂ ಓದಿ: Self Harming : ಅನಾರೋಗ್ಯದಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ; ಸಾಲಗಾರರ ಕಾಟಕ್ಕೆ ಹೆದರಿ ವ್ಯಕ್ತಿ ನಾಪತ್ತೆ

ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ಮಹಾರಾಷ್ಟ್ರ- ಕರ್ನಾಟಕಕ್ಕೆ ಸಂಪರ್ಕವಾಗಿದ್ದ ಕುಡಚಿಯ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಉಗಾರ್ ಸಂಪರ್ಕ ಸೇತುವೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಸೇತುವೆ ಮೇಲೆ ನದಿ‌ ನೀರು ಹರಿದಿದೆ. ಸೇತುವೆ ಮುಳುಗಡೆಯಾಗಿದ್ದರಿಂದ ಸಂಚಾರವನ್ನು ಬಂದ್‌ ಮಾಡಲಾಗಿದೆ. ಕುಡಚಿ ಠಾಣಾ ಪೊಲೀಸರಿಂದ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಇತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಳೋಳ ಗ್ರಾಮದಲ್ಲಿ ಕೃಷ್ಟೆಯ ಅಬ್ಬರಕ್ಕೆ ಮಂದಿರ ಜಲಾವೃತಗೊಂಡಿದೆ. ಅತ್ತ ಜಮಖಂಡಿ ಮೀರಜ್ ಸೇತುವೆ ಸಂಪೂರ್ಣ ಮುಳುಗಡೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಕುಡಚಿ- ಉಗಾರ ಸೇತುವೆಯು ಜಲಾವೃತವಾಗಿದ್ದು, ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕಡಿತವಾಗಿದೆ. ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ. ಇನ್ನೂ ಅಥಣಿಯಲ್ಲಿ ಜಮೀನುಗಳಿಗೆ ಕೃಷ್ಣಾ ನದಿ ನೀರು ನುಗ್ಗಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಬಳಿ ನೀರು ನುಗ್ಗಿ ಈಗಾಗಲೇ ಎರಡು ಸಾವಿರ ಹೆಕ್ಟರ್‌ಕ್ಕಿಂತಲೂ ಅಧಿಕ ಪ್ರದೇಶಕ್ಕೆ ಹಾನಿಯಾಗಿದೆ. ನದಿಗೆ ಇಳಿಯದಂತೆ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅಡಿಕೆ ತೋಟ ನೀರುಪಾಲು

ಶಿವಮೊಗ್ಗದ ಹೊಸನಗರದ ಹೆದ್ದಾರಿಪುರ ಗ್ರಾ.ಪಂ.ವ್ಯಾಪ್ತಿಯ ವಡಾಹೊಸಳ್ಳಿ ಗ್ರಾಮದಲ್ಲಿ ಹಳ್ಳದ ದಂಡೆ ಒಡೆದು ಅಡಿಕೆ ತೋಟಕ್ಕೆ ಹಾನಿಯಾಗಿದೆ. ಗ್ರಾಮದ ಕಮಲಾಕ್ಷ ಎಂಬುವರ ಕೃಷಿ ಜಮೀನು ಜಲಾವೃತಗೊಂಡಿದೆ. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ಉಕ್ಕಿ ಹರಿದಿದೆ. ಪರಿಣಾಮ ಅಪಾರ ಪ್ರಮಾಣದ ನೀರು ತೋಟಕ್ಕೆ ನುಗ್ಗಿದೆ. ನೂರಾರು ಅಡಿಕೆ ಸಸಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

Lakshmi Hebbalkar: ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Protest by Congress alleged that MLA Sunil Kumar has built a fake Parashurama statue
Koo

ಬೆಂಗಳೂರು: ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌, ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಕಿಡಿ ಕಾಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ. ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಸುಳ್ಳನ್ನು ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು, ಕೇಳಿ ಆಶ್ಚರ್ಯ ಉಂಟಾಯಿತು ಎಂದರು.

ಇದನ್ನೂ ಓದಿ: Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಧಿವೇಶನದಲ್ಲಿ ಸುನೀಲ್ ಕುಮಾರ್, ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ತಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

ಈ ವೇಳೆ ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ‌ಉದಯ್ ಕುಮಾರ್ ಶೆಟ್ಟಿ ಮುನಿಯಾಳ್, ಮಿಥುನ್ ರೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಧೀರ್ ಕುಮಾರ್ ಮೊರಳ್ಳಿ, ಉಡುಪಿ‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಹರೀಶ್ ಕುಮಾರ್, ಕಿಶನ್ ಹೆಗ್ಡೆ, ಕಿರಣ್ ಹೆಗ್ಡೆ, ರಮೇಶ್ ಕಾಂಚನ್, ಕೃಪಾ ಆಳ್ವ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ಎಸ್‌ಐಟಿ ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ

ಪರಶುರಾಮ ಥೀಮ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್‌ಐಟಿ)‌ ರಚಿಸಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ನಿಯೋಗದಲ್ಲಿ ಇದ್ದರು.

Continue Reading

ಮಳೆ

Karnataka Rain : ಹಾವೇರಿಯಲ್ಲಿ ಮಳೆಯಾರ್ಭಟಕ್ಕೆ ಮರ ಬಿದ್ದು ಬಲಿಯಾದ ಹಸು; ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

Karnataka Rain : ಮಳೆಯಿಂದಾಗಿ ಸಾವು-ನೋವು ಮುಂದುವರಿದಿದೆ. ಹಾವೇರಿಯಲ್ಲಿ ಮಳೆಗೆ ಬೃಹತ್‌ ಮರ ಬಿದ್ದು ಹಸುವೊಂದು ಮೃತಪಟ್ಟಿದೆ. ಇತ್ತ ಬೆಳಗಾವಿಯಲ್ಲಿ ಹಲವು ಸೇತುವೆಗಳು ಮುಳುಗಡೆಯಾಗಿದೆ.

VISTARANEWS.COM


on

By

karnataka rain
Koo

ಹಾವೇರಿ/ಬೆಳಗಾವಿ: ಹಾವೇರಿ ಜಿಲ್ಲೆಯಲ್ಲಿ ಮಳೆಯಾರ್ಭಟ (Karnataka Rain) ಮುಂದುವರಿದಿದೆ. ಸತತ ಮಳೆಯಿಂದಾಗಿ ಮರದ ಬುಡ ಸಡಿಲಗೊಂಡು ಕುಸಿದು ಬಿದ್ದಿದೆ. ಮರದಡಿ ನಿಂತಿದ್ದ ಹಸುವಿನ ಮೇಲೆ ಮರದ ತುಂಡು ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಜಾನುವಾರು ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಾಗಪ್ಪ ಗಿರಿಯಪ್ಪನವರು ಎಂಬುವವರಿಗೆ ಸೇರಿದ ಹಸು ಮೃತಪಟ್ಟಿದೆ.

ಮಳೆ ಅಬ್ಬರಕ್ಕೆ ಥಂಡಾ ಹೊಡೆದ ಬೆಳಗಾವಿ

ಮಹಾರಾಷ್ಟ್ರ ಮಳೆಗೆ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಯ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳಗೊಂಡಿದೆ. ಕೃಷ್ಣಾ ನದಿಗೆ ಒಟ್ಟು 1, 52,000 ಕ್ಯೂಸೇಕ್ ನೀರಿನ ಒಳ ಹರಿವು ಹೆಚ್ಚಳಗೊಂಡಿದೆ. ದೂದಗಂಗಾ ನದಿಯಲ್ಲಿ ನೀರು ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿಯ ಸದಲಗಾ-ಬೋರಗಾವ ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ಹಿನ್ನಿರು ರಸ್ತೆಗೆ ಆವರಿಸಿ ರಸ್ತೆ ಸಂಚಾರ ಬಂದ್‌ ಆಗಿದೆ. ಸದಲಗಾ ಪಟ್ಟಣದ ಹೊರ ವಲಯದ ಲಕ್ಷ್ಮಿ ದೇವಸ್ಥಾನ ಬಳಿ ನೀರು ಆವರಿಸಿ ರಸ್ತೆ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ-ಬೋರಗಾವ ಗ್ರಾಮದಲ್ಲಿ ಘಟನೆ ನಡೆದಿದೆ. ನೀರು ಹೆಚ್ಚಳದಿಂದಾಗಿ ತೋಟದ ಮನೆಯಿಂದ ಜಾನುವಾರುಗಳನ್ನು ಸ್ಥಳಾಂತರ ಮಾಡಿದ್ದಾರೆ.

ಇದನ್ನೂ ಓದಿ: Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ಮಹಾರಾಷ್ಟ್ರ- ಕರ್ನಾಟಕಕ್ಕೆ ಸಂಪರ್ಕವಾಗಿದ್ದ ಕುಡಚಿಯ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಉಗಾರ್ ಸಂಪರ್ಕ ಸೇತುವೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಸೇತುವೆ ಮೇಲೆ ನದಿ‌ ನೀರು ಹರಿದಿದೆ. ಸೇತುವೆ ಮುಳುಗಡೆಯಾಗಿದ್ದರಿಂದ ಸಂಚಾರವನ್ನು ಬಂದ್‌ ಮಾಡಲಾಗಿದೆ. ಕುಡಚಿ ಠಾಣಾ ಪೊಲೀಸರಿಂದ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಇತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಳೋಳ ಗ್ರಾಮದಲ್ಲಿ ಕೃಷ್ಟೆಯ ಅಬ್ಬರಕ್ಕೆ ಮಂದಿರ ಜಲಾವೃತಗೊಂಡಿದೆ. ಅತ್ತ ಜಮಖಂಡಿ ಮೀರಜ್ ಸೇತುವೆ ಸಂಪೂರ್ಣ ಮುಳುಗಡೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಕುಡಚಿ- ಉಗಾರ ಸೇತುವೆಯು ಜಲಾವೃತವಾಗಿದ್ದು, ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕಡಿತವಾಗಿದೆ. ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ. ಇನ್ನೂ ಅಥಣಿಯಲ್ಲಿ ಜಮೀನುಗಳಿಗೆ ಕೃಷ್ಣಾ ನದಿ ನೀರು ನುಗ್ಗಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಬಳಿ ನೀರು ನುಗ್ಗಿ ಈಗಾಗಲೇ ಎರಡು ಸಾವಿರ ಹೆಕ್ಟರ್‌ಕ್ಕಿಂತಲೂ ಅಧಿಕ ಪ್ರದೇಶಕ್ಕೆ ಹಾನಿಯಾಗಿದೆ. ನದಿಗೆ ಇಳಿಯದಂತೆ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅಡಿಕೆ ತೋಟ ನೀರುಪಾಲು

ಶಿವಮೊಗ್ಗದ ಹೊಸನಗರದ ಹೆದ್ದಾರಿಪುರ ಗ್ರಾ.ಪಂ.ವ್ಯಾಪ್ತಿಯ ವಡಾಹೊಸಳ್ಳಿ ಗ್ರಾಮದಲ್ಲಿ ಹಳ್ಳದ ದಂಡೆ ಒಡೆದು ಅಡಿಕೆ ತೋಟಕ್ಕೆ ಹಾನಿಯಾಗಿದೆ. ಗ್ರಾಮದ ಕಮಲಾಕ್ಷ ಎಂಬುವರ ಕೃಷಿ ಜಮೀನು ಜಲಾವೃತಗೊಂಡಿದೆ. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ಉಕ್ಕಿ ಹರಿದಿದೆ. ಪರಿಣಾಮ ಅಪಾರ ಪ್ರಮಾಣದ ನೀರು ತೋಟಕ್ಕೆ ನುಗ್ಗಿದೆ. ನೂರಾರು ಅಡಿಕೆ ಸಸಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸವೇಶ್ವರ ದೇಗುಲ ಜಲಾವೃತ

ಘಟಪ್ರಭಾ ನದಿ ನೀರು ಹರಿವಿನಲ್ಲಿ ಹೆಚ್ಚಳದಿಂದಾಗಿ ಬಾಗಲಕೋಟೆಯ ಮುಧೋಳದ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇಗುಲ ಜಲಾವೃತಗೊಂಡಿದೆ. ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಘಟಪ್ರಭಾ ನದಿಗೆ 27 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮುಧೋಳ ತಾಲೂಕಿನ 12 ಸಣ್ಣ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ. ಘಟಪ್ರಭಾ ನದಿ ಪಾತ್ರದ 21 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

Karnataka Weather forecast : ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ಮಲೆನಾಡು ಭಾಗಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain alert) ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ (Karnataka weather Forecast) ಮಾಡಲಾಗಿದೆ.

ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

ದಕ್ಷಿಣ ಒಳನಾಡಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEET UG 2024
ದೇಶ3 mins ago

NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

Amy Jones-Piepa Cleary
ಕ್ರೀಡೆ12 mins ago

Amy Jones-Piepa Cleary: ನಿಶ್ಚಿತಾರ್ಥ ಮಾಡಿಕೊಂಡ ಇಂಗ್ಲೆಂಡ್​-ಆಸ್ಟ್ರೇಲಿಯಾ ತಂಡದ ಮಹಿಳಾ ಆಟಗಾರ್ತಿಯರು

Union Budget 2024
ದೇಶ18 mins ago

Union Budget 2024 : ಹೂಡಿಕೆಗಳನ್ನು ಉತ್ತೇಜಿಸಲು ‘ಏಂಜಲ್ ಟ್ಯಾಕ್ಸ್’ ರದ್ದು ಮಾಡಿದ ಕೇಂದ್ರ ಸರ್ಕಾರ

Viral Video
Latest22 mins ago

Viral Video: ಎರಡು ಮುಖ, ನಾಲ್ಕು ತೋಳು, ನಾಲ್ಕು ಕಾಲುಗಳ ಮಗು ಜನನ!

Udupi News
ಉಡುಪಿ25 mins ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ರಾಜಕೀಯ42 mins ago

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

Parashuram D
ಕರ್ನಾಟಕ52 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Train Tragedy
Latest57 mins ago

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Union Budget 2024
ದೇಶ58 mins ago

Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

Protest by Congress alleged that MLA Sunil Kumar has built a fake Parashurama statue
ಉಡುಪಿ59 mins ago

Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Udupi News
ಉಡುಪಿ25 mins ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ5 hours ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಟ್ರೆಂಡಿಂಗ್‌