ಮೈಸೂರು: ಪತಿಯೊಬ್ಬ ಪತ್ನಿಯ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ (Murder case) ಮಾಡಿರುವ ಘಟನೆ ನಡೆದಿದೆ. ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಸಿಟ್ಟಿಗೆ ಹತ್ಯೆಗೈದಿದ್ದಾನೆ. ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಎಂಬಾತ ಮಚ್ಚಿನಿಂದ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಪತ್ನಿ ಜತೆಗೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಸೋಮಯ್ಯ ಭಾವಿಸಿದ್ದ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿ ಮೇಲೆ ಎರಗಿ ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮಹದೇವಸ್ಮಾಮಿಯನ್ನು ಕೊಲೆ ಮಾಡಿ ಸೋಮಯ್ಯ ಪರಾರಿ ಆಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್‌ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!
ಬೆಂಗಳೂರು: ವ್ಯಕ್ತಿಯನ್ನು ಕೊಲೆಗೈದು ಶವವನ್ನು ಮೋರಿಗೆ ಬಿಸಾಡಿ ಹಂತಕರು (Murder Case) ಪರಾರಿ ಆಗಿದ್ದಾರೆ. ಬೆಂಗಳೂರಿನ ಜಾಲಹಳ್ಳಿಯ ಹೆಚ್ಎಂಟಿ ರೋಡ್‌ನ ಮೋರಿಯಲ್ಲಿ ಶವ ಪತ್ತೆಯಾಗಿದೆ.
ವ್ಯಕ್ತಿಯ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ. ಪರಿಣಾಮ ತಲೆ ಹಿಂಭಾಗ ಕಿತ್ತು ಬಂದಿದೆ. ಹತ್ಯೆ ಬಳಿಕ ಶವವನ್ನು ಮೋರಿಗೆ ಎಸೆದು ಹಂತಕರು ಕಾಲ್ಕಿತ್ತಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯಾದವನ ಗುರುತು ಪತ್ತೆಯಾಗಿಲ್ಲ. ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತನ ಮಾಹಿತಿ ಪತ್ತೆ ಹಚ್ಚಲು ಮುಂದಾಗಿದ್ದು, ಹಂತಕರಿಗೆ ಹುಡುಕಾಟ ನಡೆಸಿದ್ದಾರೆ. ಇನ್ನೂ ಮೋರಿಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು
ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಯುವಕರ ನಡುವೆ ಜಗಳ ನಡೆದು, ಯುವಕನ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಬೀದರ್‌ನ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ನಿವಾಸಿ ಬಸವರಾಜ ಜಮಾದಾರ (30) ಹತ್ಯೆಯಾದವ.
ಕಿಟ್ಟಾ ಗ್ರಾಮದಲ್ಲಿ ಗೆಳೆಯನ ಮದುವೆ ಸಮಾರಂಭ ಇತ್ತು. ಈ ಮದುವೆಗೆ ಬಸವರಾಜ ಹೋಗಿದ್ದ. ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡಲೆಂದು ಈತ ಕಿಟ್ಟಾ ಗ್ರಾಮಕ್ಕೆ ತೆರಳಿದ್ದ. ಮೆರವಣಿಗೆಯಲ್ಲಿ ನೃತ್ಯ ಮಾಡುವಾಗ ಕಿಟ್ಟಾ ಗ್ರಾಮದ ಕೆಲ ಯುವಕರೊಂದಿಗೆ ಜಗಳ ನಡೆದಿದೆ. ಈ ನಡುವೆ ಸ್ಥಳೀಯರು ಮಧ್ಯ ಪ್ರವೇಶಿಸಿ ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳಿಸಿದ್ದಾರೆ.
ಆದರೆ ಅಷ್ಟಕ್ಕೆ ಸುಮ್ಮನಾಗದ ಕಿಟ್ಟಾ ಗ್ರಾಮದ ಯುವಕರು, ಬಸವರಾಜನನ್ನು ಮೆರವಣಿಗೆಯಿಂದ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆ ಸಿಪಿಐ ಕೃಷ್ಣಕುಮಾರ ಪಾಟೀಲ, ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆ ಮಾಡಿ ಪರಾರಿಯಾದ ಯುವಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ