Site icon Vistara News

Murder Case : ಮಂಡ್ಯದಲ್ಲಿ ಹೆಂಡ್ತಿ ಕತ್ತು ಕೂಯ್ದು ಪರಾರಿ

murder case in mandya

ಮಂಡ್ಯ: ಮಂಡ್ಯ ಜಿಲ್ಲೆಯ (Mandya News) ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಪತಿಯೊಬ್ಬ ಪತ್ನಿಯ ಬರ್ಬರ ಹತ್ಯೆ (Murder Case) ಮಾಡಿದ್ದಾನೆ. ಸೌಮ್ಯ (28) ಮೃತ ದುರ್ದೈವಿ.

ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿದ್ದಾನೆ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ, ಗಣೇಶ್‌ ಜತೆಗೆ ಮದುವೆ ಆಗಿದ್ದರು. ಈ ದಂಪತಿಗೆ ಏಳು ವರ್ಷದ ಗಂಡು ಮಗು ಇದೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಣೇಶ್‌ ಪತ್ನಿ ಕತ್ತು ಕೂಯ್ದು ಪರಾರಿ ಆಗಿದ್ದು, ಅಕ್ಕಪಕ್ಕದವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಪರಾರಿ ಆಗಿರುವ ಗಣೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರೀತಿಸಿ ಮದುವೆ ಆಗಿದ್ದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ದೇವನಹಳ್ಳಿ: ಕೇವಲ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ದಂಪತಿಯ (Newly wedded couple) ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೇ (Self harming) ಅಥವಾ ಬೇರೆ ಏನಾದರೂ ಅನಾಹುತವೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore rural) ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಮೃತಪಟ್ಟವರನ್ನು ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28), ಸಹನಾ (26) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Murder Case : ಡ್ರೈವ್‌ ಮಾಡೋಕೆ ಬೈಕ್‌ ಕೊಡಲಿಲ್ಲ ಎಂದು ಚಾಕು ಹಾಕಿದ!

ರಮೇಶ್‌ ಮತ್ತು ಸಹನಾ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರು ಮೂರು ತಿಂಗಳ ಹಿಂದಷ್ಟೇ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಮನೆಯಲ್ಲಿ ವಿರೋಧವಿದ್ದ ಹಿನ್ನೆಲೆಯಲ್ಲಿ ಅವರು ಯಾರ ಕಿರಿಕಿರಿಯೂ ಬೇಡ ಎಂದು ಪ್ರತ್ಯೇಕವಾಗಿ ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಎರಡು ದಿನದ ಹಿಂದೆ ಸಹನಾ ಮತ್ತು ರಮೇಶ್‌ ಅವರು ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಅಲ್ಲಿ ಮನೆಯವರ ಜತೆ ಚೆನ್ನಾಗಿಯೇ ಇದ್ದರು. ತಮ್ಮ ಮದುವೆ ವಿಚಾರದ, ನಂತರ ಎದುರಿಸಿದ ಸಮಸ್ಯೆಗಳ ಬಗ್ಗೆ ಸಹಜವಾಗಿ ಮಾತನಾಡಿದ್ದರು. ಇದೆಲ್ಲ ಆಗಿ ಅವರು ರಾತ್ರಿಯೇ ಮನೆಯಿಂದ ಹೊರಟಿದ್ದರು. ತಮ್ಮ ಮನೆಗೆ ಹೋಗುವುದಾಗಿ ಹೇಳಿದ್ದರು. ಆದರೆ, ಸೋಮವಾರ ಮುಂಜಾನೆ ಅವರ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಮತ್ತು ಪೊಲೀಸರಿಂದ ನೀರಿ‌ನಲ್ಲಿದ್ದ ಮೃತದೇಹ ಹೊರತೆಗೆಯಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಇದರ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version