ಬೆಂಗಳೂರು ಗ್ರಾಮಾಂತರ: ಇಲ್ಲಿನ ರಾಜಾನುಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪಾಗಲ್ ಪ್ರೇಮಿಯೊಬ್ಬ ಕಾರಿಡಾರ್‌ನಲ್ಲಿಯೇ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ (Murder Case) ಪೋಷಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿನಿ ಲಯಸ್ಮಿತಾ ಕೊಲೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ, ಗುರುವಾರ ಕಾಲೇಜು ಮುಂಭಾಗ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕನ್ನಡಪರ ಸಂಘಟನೆಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದರು. ಇತ್ತ ಕಾಲೇಜು ಮುಂಭಾಗ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪದೇ ಪದೆ ಅಹಿತಕರ ಘಟನೆಗಳು ನಡೆಯುತ್ತಿದ್ದರೂ ಕಾಲೇಜು ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು. ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈಗಾಗಲೇ ಮೃತ ವಿದ್ಯಾರ್ಥಿನಿ ಲಯಸ್ಮಿತಾ ತಾಯಿ ರಾಜೇಶ್ವರಿ ಆರೋಪಿ ಪವನ್ ಕಲ್ಯಾಣ್ ಹಾಗೂ ಕಾಲೇಜು ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಪವನ್ ಕಲ್ಯಾಣ್, ಶಾಲಾ ಆಡಳಿತ ಮಂಡಳಿ ಮತ್ತು ಸೆಕ್ಯುರಿಟಿ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜತೆಗೆ ಆರೋಪಿ ಪವನ್ ಕಲ್ಯಾಣ್ ಪೂರ್ವಪರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಇದನ್ನೂ ಓದಿ | Gender change | ಲಿಂಗ ಪರಿವರ್ತಿಸಿಕೊಂಡು ಹೆಣ್ಣಾದ ಮುಸ್ಲಿಂ ಯುವಕ: ದೇರಳಕಟ್ಟೆ ಹೆಸರು ದುರ್ಬಳಕೆಗೆ ಆಕ್ರೋಶ