ಬೀದರ್: ಸ್ಕೂಟರ್‌ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ (Murder Case) ಹತ್ಯೆ ಮಾಡಲಾಗಿದೆ. ಬೀದರ್ ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ಈ ಕೃತ್ಯ ನಡೆದಿದೆ. ಅಮೀತ್ ಮಾನಾಜೀ (35) ಹತ್ಯೆಯಾದವರು.
ವಿಳಾಸಪೂರ ನಿವಾಸಿಯಾದ ಅಮೀತ್ ಶನಿವಾರ ರಾತ್ರಿ 9 ಗಂಟೆಗೆ ಸುಮಾರಿಗೆ ಸ್ಕೂಟರ್‌ನಲ್ಲಿ ಮನೆಗೆ ತೆರಳುವಾಗ ಕಿಡಿಗೇಡಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಅಮಿತ್ ಲಾಕ್‌ಡೌನ್ ಬಳಿಕ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ. ಈತನ ಕುಟುಂಬವೆಲ್ಲ ಮೈಸೂರಿನಲ್ಲಿ ವಾಸವಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಅಮೀತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜನವಾಡ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಅಮೀತ್‌ನನ್ನು ಹತ್ಯೆ ಮಾಡಿದವರು ಯಾರು? ಯಾಕಾಗಿ ಹತ್ಯೆ ಮಾಡಿದ್ದಾರೆ. ಪರಿಚಯಸ್ಥರಿಂದಲೇ ಈ ಕೃತ್ಯ ನಡೆದಿದ್ದಯಾ ಅಥವಾ ಹಣದಾಸೆಗೆ ಯಾರಾದರೂ ದರೋಡೆಕೋರರು ಹೀಗೆ ಮಾಡಿದ್ದರಾ ಎಂಬ ಹಲವು ಆಯಾಮದಲ್ಲಿ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: Road Accident : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವಾಹನ ಪಲ್ಟಿ; ಯುವಕ ಸಾವು,10 ಮಂದಿಗೆ ಗಾಯ
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!
ಉಡುಪಿ: ಒಂದೇ ಕುಟುಂಬದ ನಾಲ್ವರ ಕಗ್ಗೊಲೆಯಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಈ ಕೃತ್ಯ (Murder case) ನಡೆದಿದೆ. ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆಯಾಗಿದೆ.
ಹಸೀನಾ (46), ಅಫ್ನಾನ್ (23), ಅಯ್ನಾಝ್ (21), ಆಸಿಂ (12) ಮೃತ ದುರ್ದೈವಿ. ಚೂರಿಯಿಂದ ಚುಚ್ಚಿ ಕೊಲೆಗೈದು ಹಂತಕರು ಪರಾರಿ ಆಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದುಷ್ಕರ್ಮಿಗಳು ಏಕಾಏಕಿ ಮನೆಗೆ ನುಗ್ಗಿ ಮೊದಲು ಮನೆ ಯಜಮಾನಿಗೆ ಚೂರಿ ಇರಿಯಲಾಗಿದೆ. ಬಳಿಕ ಮಕ್ಕಳಾದ ಅಫ್ನಾನ್,ಅಯ್ನಾಝ್‌ಗೆ ಚಾಕುವಿನಿಂದ ಇರಿದಿದ್ದಾರೆ. ಸದ್ದು ಕೇಳಿ ಆಟವಾಡುತ್ತಿದ್ದ ಆಸಿಂ ಒಳ ಬರುತ್ತಿದ್ದಂತೆ ಆತನನ್ನು ಕೊಂದಿದ್ದಾರೆ. ಇವರ ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಮನೆಯೊಳಗಿದ್ದ ಮತ್ತೊಬ್ಬ ಮಹಿಳೆಗೂ ತೀವ್ರ ಗಾಯಗಳಾಗಿದೆ. ಮನೆಯೊಡತಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿ ಇದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಎಸ್‌ಪಿ ಅರುಣ್ ಕುಮಾರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ