Murder Case: ಮಂಗಳೂರು ಜ್ಯುವೆಲ್ಲರಿಗೆ ನುಗ್ಗಿ ನೌಕರನಿಗೆ ಚಾಕು ಇರಿದು ಕೊಂದ ಮುಸುಕುಧಾರಿ - Vistara News

ಕರ್ನಾಟಕ

Murder Case: ಮಂಗಳೂರು ಜ್ಯುವೆಲ್ಲರಿಗೆ ನುಗ್ಗಿ ನೌಕರನಿಗೆ ಚಾಕು ಇರಿದು ಕೊಂದ ಮುಸುಕುಧಾರಿ

Murder Case: ಬಲ್ಮಠದಲ್ಲಿರುವ ಮಂಗಳೂರು ಜ್ಯುವೆಲ್ಲರಿಗೆ ನುಗ್ಗಿದ ದುಷ್ಕರ್ಮಿಯೊಬ್ಬ ಅಲ್ಲಿನ ನೌಕರನಿಗೆ ಚಾಕುವಿನಿಂದ ಇರಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

mangluru murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ನಗರದ ಬಲ್ಮಠದಲ್ಲಿ ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಂಗಡಿ ನೌಕರನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ (Murder Case) ಪರಾರಿಯಾಗಿದ್ದಾನೆ. ಇದು ಸ್ಥಳೀಯರನ್ನು ಆತಂಕಕ್ಕೆ ದೂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕೊಲೆಯಾದ ರಾಘವೇಂದ್ರ

ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಬಲ್ಮಠದ ‘ಮಂಗಳೂರು ಜುವೆಲ್ಲರಿ’ಯಲ್ಲಿ ಈ ಕೃತ್ಯ ನಡೆದಿದೆ. ಆದರೆ, ಬಂದವನು ಯಾರು? ಯಾವ ಕಾರಣಕ್ಕೆ ಚೂರಿ ಇರಿದಿದ್ದಾನೆ ಎಂಬ ಸಂಗತಿ ಗೊತ್ತಾಗಿಲ್ಲ. ರಾಘವೇಂದ್ರ ಅವರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದಾನೆ.

Mangalore Jewellery Murder Case

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರು ಕೆಲವೇ ಹೊತ್ತಿನಲ್ಲಿ ಅಸುನೀಗಿದ್ದಾರೆ. ಅಂಗಡಿ ಮಾಲೀಕ ಊಟಕ್ಕೆ ಹೋಗಿದ್ದಾಗ ಈ ಕೃತ್ಯ ನಡೆದಿದೆ. ಈಗ ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮುಸುಕು ಹಾಕಿಕೊಂಡು ಬಂದು ಕೃತ್ಯ ಎಸಗಿರುವ ವ್ಯಕ್ತಿಯ ಶೋಧಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Love Torture:‌ ಪ್ರೇಮದ ಸುಳಿಯಲ್ಲಿ ಸಿಲುಕಿದ ಬಾಲಕಿ ಆತ್ಮಹತ್ಯೆ; ಪ್ರಿಯಕರ ಅನುಮಾನಿಸಿ, ಅವಮಾನಿಸಿದ್ದೇ ಕಾರಣವಾಯ್ತಾ?

ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿರುವ ಪೊಲೀಸರು, ಹಂತಕನ ಪತ್ತೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸದ್ಯಕ್ಕೆ ಬಲ್ಮಠದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Prajwal Revanna Case: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಅರ್ಜ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್‌ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ

ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ | Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

Continue Reading

ಶಿವಮೊಗ್ಗ

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Road Accident : ಎದುರಿಗೆ ಬರುತ್ತಿದ್ದ ಬೈಕ್‌ ಅನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ಈ ಅಪಘಾತ ನಡೆದಿದೆ.

ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್‌ಗೆ ನುಗ್ಗಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ನಜ್ಜುಗಜ್ಜಾಗಿದ್ದ ಕಾರನ್ನು ತೆರವು ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

ಚೇಸ್‌ ಮಾಡಿ ಕಾರಿಗೆ ಕಲ್ಲು ಹೊಡೆದ ಅಪರಿಚಿತ

ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ನಿಲ್ಲುತ್ತಲೇ ಇಲ್ಲ. ಮಹದೇವಪುರದ ವಿಬ್ ಗಯಾರ್ ಶಾಲೆ ಬಳಿ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತನೊಬ್ಬ ಕಾರಿಗೆ ಕಲ್ಲು ಹೊಡೆದಿದ್ದಾನೆ. ದೀಪಕ್ ಜೈನ್ ಎಂಬುವವರ ಕಾರನ್ನು ಹಿಂಬಾಲಿಸಿ ನಂತರ ಅಡ್ಡ ಹಾಕಿ ಕಲ್ಲಿನಿಂದ ಮಿರರ್ ಜಖಂ ಮಾಡಿದ್ದಾನೆ. ಅಪರಿಚಿತನ ಕೃತ್ಯವು ಡ್ಯಾಶ್‌ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರಿಗೆ ಟ್ಯಾಗ್ ಮಾಡಿ ದೀಪಕ್ ಜೈನ್ ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Chitradurga Lok Sabha Constituency : ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Chitradurga Lok Sabha Constituency
Koo

ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಇದು ಇಡೀ ಚಿತ್ರದುರ್ಗ ಜಿಲ್ಲೆ ಮತ್ತು ತುಮಕೂರು ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೊಳಕಾಲ್ಮೂರು (ಎಸ್ಟಿ), ಚಳ್ಳಕೆರೆ (ಎಸ್ಟಿ), ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ (ಎಸ್ಸಿ), ಶಿರಾ ಮತ್ತು ಪಾವಗಡ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು . 1977 ರಿಂದ ಈ ಸ್ಥಾನವು ಕರ್ನಾಟಕ ರಾಜ್ಯದ ಭಾಗವಾಯಿತು.

ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟು 16 ಲೋಕಸಭಾ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ 11 ಬಾರಿ ಗೆದ್ದಿದೆ. ಇದಲ್ಲದೆ, ಪ್ರಜಾ ಸೋಷಿಯಲಿಸ್ಟ್ ಪಾರ್ಟಿ, ಸ್ವತಂತ್ರ ಅಭ್ಯರ್ಥಿ , ಜನತಾದಳ ಮತ್ತು ಜೆಡಿಯು ಅಭ್ಯರ್ಥಿಗಳು ಇಲ್ಲಿ ಗೆಲುವು ದಾಖಲಿಸಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಬಿಜೆಪಿ ಈ ಸ್ಥಾನದಿಂದ ಗೆದ್ದಿತ್ತು. 2019 ರಲ್ಲಿ ಮತ್ತೆ ಸ್ಥಾನ ಕಸಿದುಕೊಂಡಿತು. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸಾಮಾನ್ಯವಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಕ್ಷೇತ್ರವೆಂದು ಪರಿಗಣಿಸಲಾಗುತ್ತದೆ.

ಬಿಜೆಪಿ ಈ ಬಾರಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮೂರನೇ ಬಾರಿಗೆ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಗಣನೀಯ ಸಂಖ್ಯೆಯ ಎಸ್ಸಿ ಮತ್ತು ಎಸ್ಟಿ ಮತದಾರರಿದ್ದಾರೆ. 2019ರಲ್ಲಿ ಇಲ್ಲಿ 17.61 ಲಕ್ಷ ಮತದಾರರು ಇದ್ದರೆ 2024ರಲ್ಲಿ 18. 49 ಲಕ್ಷ ಮತದಾರರು ಕಾಣಿಸಿಕೊಂಡಿದ್ದಾರೆ.

ಹಿಂದಿನ ಫಲಿತಾಂಶಗಳು ಇಲ್ಲಿವೆ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಎ .ನಾರಾಯಣಸ್ವಾಮಿ ಅವರು ಕಾಂಗ್ರೆಸ್​​ನ ಬಿ.ಎನ್.ಚಂದ್ರಪ್ಪ ಅವರನ್ನು 80,178 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಬಿಜೆಪಿ 50.24% ಮತಗಳನ್ನು ಹೊಂದಿತ್ತು.

ಇದನ್ನೂ ಓದಿ:Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎನ್.ಚಂದ್ರಪ್ಪ ಅವರು ಬಿಜೆಪಿಯ ಜನಾರ್ಧನ ಸ್ವಾಮಿ ಅವರನ್ನು 1,01,291 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 42.64% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜನಾರ್ದನ ಸ್ವಾಮಿ ಅವರು ಕಾಂಗ್ರೆಸ್​​ನ ಡಾ.ಬಿ.ತಿಪ್ಪೇಸ್ವಾಮಿ ಅವರನ್ನು 1,35,571 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.44.35ರಷ್ಟು ಮತಗಳನ್ನು ಪಡೆದಿತ್ತು.

2011ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಜಿಲ್ಲೆಯ ಜನಸಂಖ್ಯೆ 1659456. ಸರಾಸರಿ ಸಾಕ್ಷರತಾ ಪ್ರಮಾಣವು 73.71% – ಮಹಿಳೆಯರಲ್ಲಿ 65.88% ಮತ್ತು ಪುರುಷರಲ್ಲಿ 81.37% ಆಗಿತ್ತು. ಸಂಸತ್ತಿನಲ್ಲಿ ಎಸ್ಸಿ ಮತದಾರರು ಸುಮಾರು 23.7% ರಷ್ಟಿದ್ದರೆ, ಎಸ್ಟಿ ಮತದಾರರು 16.8% ರಷ್ಟಿದ್ದಾರೆ. ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 80% ರಷ್ಟಿದ್ದಾರೆ. ಈ ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ (1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ) 2024 ರಲ್ಲಿ 1,006, 2019 ರಲ್ಲಿ ಇದು 979, 2014 ರಲ್ಲಿ 966 ಮತ್ತು 2009 ರಲ್ಲಿ 967 ಆಗಿತ್ತು.

Continue Reading

ಪ್ರಮುಖ ಸುದ್ದಿ

Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

prajwal revanna case: ಪ್ರಜ್ವಲ್‌ ರೇವಣ್ಣ ಇಂದು ಪುರುಷತ್ವ ಪರೀಕ್ಷೆ ಹಾಗೂ ನಾಳೆ ಹಾಸನ ಸಂಸದ ಸ್ಥಾನದ ಚುನಾವಣೆ ಫಲಿತಾಂಶದ ಪರೀಕ್ಷೆ- ಎರಡೂ ಟೆನ್ಷನ್‌ ಅನ್ನು ಏಕಕಾಲಕ್ಕೆ ಎದುರಿಸಬೇಕಾಗಿದೆ. ಇಂದು ಅವರಿಗೆ ಮೆಡಿಕಲ್‌ ಟೆಸ್ಟ್‌ ರಹಸ್ಯವಾಗಿ ನಡೆಯುತ್ತಿದೆ.

VISTARANEWS.COM


on

Prajwal revanna case
Koo

ಬೆಂಗಳೂರು: ನಾಳೆ ಪ್ರಕಟವಾಗಲಿರುವ ಸಂಸದ ಸ್ಥಾನದ ಮತ ಎಣಿಕೆ (vote count) ಹಾಗೂ ಫಲಿತಾಂಶದ (Lok Sabha Election result) ಟೆನ್ಷನ್‌ ಒಂದು ಕಡೆ. ಅದರ ನಡುವೆಯೇ ಇಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna Case) ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ತನಿಖೆಯ ಅಂಗವಾಗಿ ಪುರುಷತ್ವ ಪರೀಕ್ಷೆ ಎದುರಿಸಿದರು. ಇದು ರಹಸ್ಯವಾಗಿ ನಡೆದಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಆಂಬ್ಯುಲೆನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿತು. ಹೆಚ್ಚಿನ ಪೊಲೀಸ್‌ ರಕ್ಷಣೆ ಇಲ್ಲದೆ, ಮೀಡಿಯಾದವರ ಗಮನ ಸೆಳೆಯದಂತೆ ಆಂಬ್ಯುಲೆನ್ಸ್‌ನಲ್ಲಿ ರಹಸ್ಯವಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಪ್ರಜ್ವಲ್‌ ಅವರ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಇದಾದ ಬಳಿಕ ಸ್ಥಳ ಮಹಜರು ಪ್ರಕ್ರಿಯೆಗೆ ಎಸ್ಐಟಿ ಟೀಂ ಪ್ರಜ್ವಲ್‌ ಅವರನ್ನು ಕರೆದೊಯ್ದಿತು.

ಇಂದು ಪುರುಷತ್ವಕ್ಕೆ ಸಂಬಂಧಿಸಿದ ಮೆಡಿಕಲ್‌ ಟೆಸ್ಟ್‌ಗಳನ್ನು ಪ್ರಜ್ವಲ್‌ ಮೇಲೆ ನಡೆಸಲಾಗುತ್ತಿದೆ. ನಾಳೆ ಚುನಾವಣೆ ಫಲಿತಾಂಶವೂ ಇದೆ. ಪ್ರಜ್ವಲ್‌ಗೆ ಎರಡೂ ಮಹತ್ವದ್ದಾಗಿದ್ದು, ಆತಂಕ ತಂದಿಟ್ಟಿವೆ.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಧ್ವನಿ ಹೋಲಿಕೆಗೆ ಮುಂದಾದ ಎಸ್‌ಐಟಿ

ಸೆರೆಸಿಕ್ಕ ನಂತರದ ಕ್ಷಣದಿಂದಲೇ ಎಸ್‌ಐಟಿ ಪ್ರಶ್ನೆಗಳಿಗೆ ಮುಖಾಮುಖಿಯಾಗಿರುವ ಪ್ರಜ್ವಲ್‌, 4ನೇ ದಿನವೂ ವಿಚಾರಣೆ ಎದುರಿಸಿದರು. ವಿಡಿಯೋಗಳ ಬಗ್ಗೆ ಪ್ರಜ್ವಲ್ ರೇವಣ್ಣ‌ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಗೊತ್ತಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ಬಗ್ಗೆ ಪ್ರಜ್ವಲ್ ಯಾವುದೇ ಸುಳಿವು ನೀಡಿಲ್ಲ. “ಮೊಬೈಲ್ ನನ್ನ ಬಳಿ ಇಲ್ಲ. ಒಂದು ವರ್ಷದ ಹಿಂದೆಯೇ ಕಳೆದುಹೋಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಹೇಳುತ್ತಿದ್ದಾರೆ.

ಇದೇ ವೇಳೆ ಪ್ರಜ್ವಲ್ ರೇವಣ್ಣ‌ ಅವರ ಧ್ವನಿ ಸ್ಯಾಂಪಲ್ ಪಡೆದು ಎಫ್ಎಸ್ಎಲ್‌ಗೆ ರವಾನಿಸಲು ಎಸ್‌ಐಟಿ ಮುಂದಾಗಿದೆ. ವಿಡಿಯೋದಲ್ಲಿರುವ ಧ್ವನಿ ಹಾಗೂ ಪ್ರಜ್ವಲ್ ರೇವಣ್ಣ‌ ಧ್ವನಿ ಮ್ಯಾಚ್ ಆಗುತ್ತದಾ ಎಂದು ಪರೀಕ್ಷೆ ನಡೆಯಲಿದೆ. ಧ್ವನಿ ಹೋಲಿಕೆ ಕಂಡುಬಂದರೆ ಪ್ರಜ್ವಲ್‌ಗೆ ಕಷ್ಟ ಎದುರಾಗಲಿದೆ.

ಇದನ್ನೂ ಓದಿ: Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Continue Reading
Advertisement
Prajwal Revanna Case
ಕರ್ನಾಟಕ9 mins ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ10 mins ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Anant-Radhika Bash legendary singer Andrea Bocelli performs
ಬಾಲಿವುಡ್11 mins ago

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

PM Narendra Modi
ರಾಜಕೀಯ16 mins ago

PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

Election Commission of india
ದೇಶ18 mins ago

Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

Chitradurga Lok Sabha Constituency
ಪ್ರಮುಖ ಸುದ್ದಿ24 mins ago

Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

Prajwal revanna case
ಪ್ರಮುಖ ಸುದ್ದಿ30 mins ago

Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

Murder Case in shivamogga
ಶಿವಮೊಗ್ಗ39 mins ago

Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

ಕರ್ನಾಟಕ40 mins ago

Physical Abuse: ಬಾಲಕಿಗೆ ದೆವ್ವ ಬಿಡಿಸುವುದಾಗಿ ಲೈಂಗಿಕ ದೌರ್ಜನ್ಯ: ಮೌಲ್ವಿ ಸೇರಿ ಇಬ್ಬರ ಬಂಧನ

Udupi-Chikmagalur Lok Sabha constituency
ದೇಶ60 mins ago

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌