Site icon Vistara News

Murder Case: ಮೈಸೂರಲ್ಲಿ ರೌಡಿಶೀಟರ್‌ ಮರ್ಡರ್‌; ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

murder case

murder case

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ (Murder case) ಶುರುವಾಗಿದೆ. ನಡು ರಸ್ತೆಯಲ್ಲೇ ರೌಡಿಶೀಟರ್‌ವೊಬ್ಬನ (Rowdy Sheeter Murder) ಬರ್ಬರ ಹತ್ಯೆ ಆಗಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಕೊಲೆಯಾದವನು.

ಈ ರೌಡಿಶೀಟರ್‌ ಚಂದು, ಮಹಾನಗರ ಪಾಲಿಕೆ ಮಾಜಿ ಸದಸ್ಯ ಮಹದೇಶ್ ಅಲಿಯಾಸ್ ಅವ್ವ ಮಾದೇಶ್‌ ಅವರ ಆಪ್ತನಾಗಿದ್ದ ಎಂದು ತಿಳಿದು ಬಂದಿದೆ. ದ್ವಿಚಕ್ರ ವಾಹನದಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಮುಖ್ಯರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

ರೌಡಿಶೀಟರ್‌ ಚಂದು ಹುಣಸೂರು ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಕೆಲ ದಿನಗಳಿಂದಷ್ಟೇ ಕೇಸ್ ಖುಲಾಸೆಯಾಗಿ ಜೈಲಿನಿಂದ ಹೊರಗೆ ಬಂದಿದ್ದ. ಪಡುವಾರಹಳ್ಳಿಯ ದೇವು ಕೊಲೆಗೆ ಪ್ರತಿಕಾರ ತೀರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Housewife death: ಗೃಹಿಣಿ ಅನುಮಾನಾಸ್ಪದ ಸಾವು, ಗಂಡನಿಂದಲೇ ಕೊಲೆ ಶಂಕೆ

ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version