Site icon Vistara News

Murder Case | ಬೀದಿ ಹೆಣವಾದ ರೌಡಿಶೀಟರ್‌; ಅನುಮಾನಾಸ್ಪದ ಸಾವು

hasana murder

ಹಾಸನ: ಚನ್ನರಾಯಪಟ್ಟಣ ತಾಲೂಕು ಹಿರೀಸಾವೆ ಗ್ರಾಮದ ಬಳಿ ರೌಡಿಶೀಟರ್‌ವೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಕೊಲೆ (Murder Case) ಮಾಡಿರುವ ಶಂಕೆ ವ್ಯಕ್ತವಾಗಿದೆ.

ಹಿರೀಸಾವೆ ಸಮೀಪದ ಮಾಚಬೂವನಹಳ್ಳಿ ಗ್ರಾಮದ ಕುಮಾರ್ ಅಲಿಯಾಸ್ ಕಪ್ಪೆ ಕುಮಾರ್ (35) ಮೃತಪಟ್ಟಿರುವ ರೌಡಿಶೀಟರ್. ಹಿರೀಸಾವೆ ಗ್ರಾಮದ ಹೊರವಲಯದಲ್ಲಿ ರಸ್ತೆ ಮಧ್ಯೆ ಮೃತದೇಹ ಪತ್ತೆಯಾಗಿದೆ.

ಕಳೆದ ತಿಂಗಳು ಹಿರೀಸಾವೆ ಪ್ರಕೃತಿ ಬಾರ್ ಮುಂದೆ ಈತನ ಮೇಲೆ ಹಲ್ಲೆ ನಡೆದಿತ್ತು. ಈ ವೇಳೆ ಕುಮಾರ್‌ ಬದುಕುಳಿದಿದ್ದ. ಬಳಿಕ ಬೆಂಗಳೂರಿಗೆ ತೆರಳಿದ್ದ. ಪುನಃ ಗ್ರಾಮಕ್ಕೆ ಬಂದಿದ್ದ ಕುಮಾರ್‌ ಈಗ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಸೋಮವಾರ ರಾತ್ರಿ ಸಂಬಂಧಿಕರ ಜತೆಗೆ ಹೊರಗೆ ಹೋಗಿದ್ದ ಎನ್ನಲಾಗಿದೆ. ಅದೂ ಅಲ್ಲದೆ, ಮೃತದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ. ಮೃತದೇಹವನ್ನು ಹಾಸನ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಹಳೇ ವೈಷಮ್ಯದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ತನಿಖೆಯನ್ನು ಚುರುಕುಗೊಳಿಸಲು ಪೊಲೀಸರು ಚಿಂತಿಸಿದ್ದಾರೆ. ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case | ರೌಡಿಶೀಟರ್ ದಿವಾಕರ್ @ ಡಿಚ್ಚಿ ದಿವಾ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದರು!

Exit mobile version