Site icon Vistara News

Murder Case: ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಮಲತಂದೆ!

Murder Case

ಬೆಂಗಳೂರು: ಇಬ್ಬರು ಹೆಣ್ಣು ಮಕ್ಕಳನ್ನು ಮಲತಂದೆ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ನಗರದ ದಾಸರಹಳ್ಳಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಕುಟುಂಬದ 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನು ಮಲತಂದೆ ಬರ್ಬರವಾಗಿ ಕೊಂದಿದ್ದಾನೆ.

ಸುಮಿತ್ ಕೊಲೆ ಮಾಡಿದ ಆರೋಪಿ. ದಾಸರಹಳ್ಳಿಯ ಕಾವೇರಿ ಬಡಾವಣೆಯ ಎರಡನೇ ಮಹಡಿಯಲ್ಲಿದ್ದ ಮನೆಯಲ್ಲಿಯಲ್ಲಿ ಘಟನೆ ನಡೆದಿದೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪಾಪಿ ಮಲತಂದೆ ಪರಾರಿಯಾಗಿದ್ದಾನೆ. ಆರೋಪಿಯು ಜೆಪ್ಟೊ ಡೆಲಿವರಿ ಆ್ಯಪ್‌ನಲ್ಲಿ‌ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಸಂಪಿಗೆಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ನಡೆದಿದೆ. ಪುಷ್ಪರಾಜ್ (27) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್‌ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ಖಾಲಿ‌ ಜಾಗದ ಶೆಡ್‌ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಣ ಡಬಲ್‌ ಆಗುತ್ತೆಂದು ಆನ್‌ಲೈನ್‌ನಲ್ಲಿ ಹೂಡಿಕೆ; ಮೋಸ ಹೋದ ಯುವಕ ನೇಣಿಗೆ ಶರಣು

ಶಿವಮೊಗ್ಗ: ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಮೋಸ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ನಗರದ ಕಾಗದ ನಗರ ಬಡಾವಣೆಯ 6ನೇ ವಾರ್ಡ್‌ನಲ್ಲಿ ನಡೆದಿದೆ. ಒನ್ ಟು ಡಬಲ್ ಆಗುತ್ತದೆಂದು ನಂಬಿ ಆನ್‌ಲೈನ್‌ನಲ್ಲಿ 91 ಸಾವಿರ ರೂ.ಗಳನ್ನು ಯುವಕ ಹೂಡಿಕೆ ಮಾಡಿದ್ದ. ಅದರೆ, ಮೋಸ ಹೋದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರದೀಪ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಖಾಸಗಿ ಕಂಪನಿಯಲ್ಲಿ ಪ್ರದೀಪ್ ಕೆಲಸ ಮಾಡುತ್ತಿದ್ದ. ಸಾಲ ಮಾಡಿ ಆನ್‌ಲೈನ್‌ ಆ್ಯಪ್‌ ಮೂಲಕ ಯುವಕ ಹಣ ಹೂಡಿಕೆ ಮಾಡಿದ್ದ. ಆದರೆ. ಅದರಲ್ಲಿ ಮೋಸ ಹೋಗಿದ್ದರಿಂದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

Exit mobile version