Site icon Vistara News

Murder case | ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ?; ಉದ್ಯಮಿ ಪುತ್ರನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!

hubballi murder case akhil ಉದ್ಯಮಿ ಪುತ್ರ ಸುಪಾರಿ ಪ್ರಕರಣ ಪೊಲೀಸ್‌ ತನಿಖೆ

ಹುಬ್ಬಳ್ಳಿ: ಇಲ್ಲಿನ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅವರ ತೋಟದ ಮನೆಯಲ್ಲಿಯೇ ಶವವಾಗಿ (Murder case) ಪತ್ತೆಯಾಗಿದ್ದು, ಮಗನ ಕೊಲೆಗೆ ತಂದೆಯೇ ಸುಪಾರಿ ನೀಡಿರುವ‌ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಖಿಲ್ ಜೈನ್ (30) ಮೃತ ಯುವಕರಾಗಿದ್ದಾರೆ. ತಂದೆ ಭರತ್‌ ಜೈನ್‌ರನ್ನು ಸುಪಾರಿ ನೀಡಿ ಕೊಲೆ ಮಾಡಿಸಿರುವ ಶಂಕೆ ಮೇರೆಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಖಿಲ್ ನಾಪತ್ತೆ ಕುರಿತು ಡಿಸೆಂಬರ್ ೧ರಂದು ಕೇಶ್ವಾಪುರ ಪೊಲೀಸ್‌ ಠಾಣೆಯಲ್ಲಿ ಅಖಿಲ್‌ ತಂದೆ ಭರತ್‌ ದೂರು ನೀಡಿದ್ದರು.

ತನ್ನ ಮಗ ನಾಪತ್ತೆಯಾಗಿದ್ದು, ಆತನನ್ನು ಹುಡುಕಿಕೊಡಿ ಎಂದು ಪೊಲೀಸರ ಎದುರು ಹೈಡ್ರಾಮಾ ಮಾಡಿದ್ದ. ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದ ಪೊಲೀಸರು, ತನಿಖೆ ವೇಳೆ ಉದ್ಯಮಿ ಭರತ್‌ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಗೆ ಸುಪಾರಿ ಕೊಟ್ಟಿರುವ ವಿಷಯವನ್ನು ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ | Kashmiri Pandits | ಕಾಶ್ಮೀರದಲ್ಲಿ ಪಂಡಿತರ ಪಟ್ಟಿ ತಯಾರಿಸಿದ ಉಗ್ರರು, ಮತ್ತೆ ನರಮೇಧ ಶುರು?

ದೇವರಗುಡಿಹಾಳ ಬಳಿಯ ಫಾರ್ಮ್‌ಹೌಸ್‌ನಲ್ಲಿ ಮೃತದೇಹ ಇರುವುದಾಗಿ ಪೊಲೀಸರಿಗೆ ಭರತ್‌ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದ್ದು, ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಆದರೆ, ಇನ್ನೂ ಶವ ಸಿಕ್ಕಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ತನಿಖೆ ವೇಳೆ ಒಂದೊಂದೇ ಮಾಹಿತಿ ಬಯಲಿಗೆ
ಅಖಿಲ್ ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು, ಆತನ ಕುರಿತು ಮೊದಲು ಮಾಹಿತಿ ಕಲೆ ಹಾಕಿದ್ದಾರೆ. ದುಷ್ಟಟಗಳ ದಾಸನಾಗಿದ್ದ ಅಖಿಲ್ ಬಗ್ಗೆ ಮನೆಯವರೇ ರೋಸಿ ಹೋಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಅಖಿಲ್‌ ಫೋನ್‌ ಕಾಲ್‌ ಸಹಿತ ಮನೆಯವರ ಫೋನ್‌ ಕರೆಗಳ ಮಾಹಿತಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆಗ ಒಂದೊಂದೇ ಅಂಶಗಳು ಬೆಳಕಿಗೆ ಬಂದಿವೆ.

ಅಖಿಲ್ ತಂದೆ ಭರತ್ ಕೆಲವು ಕುಖ್ಯಾತ ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ. ಅಖಿಲ್ ನಾಪತ್ತೆಗೆ ಮೊದಲು ಭರತ್ ಸಂಪರ್ಕದಲ್ಲಿದ್ದವರು ಸುಪಾರಿ ಹಂತಕರು ಎಂಬುದು ತಿಳಿದುಬಂದಿದೆ. ಹೀಗಾಗಿ ಉದ್ಯಮಿ ಭರತ್‌ನನ್ನು ಕರೆಸಿ ವಿಚಾರಣೆ ಮಾಡಿದಾಗ ಆಘಾತಕಾರಿ ವಿಷಯವನ್ನು ಬಾಯ್ಬಿಟ್ಟಿದ್ದಾನೆ. ಮಗನನ್ನು ತಾನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದಾಗಿ ಭರತ್ ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ ಎನ್ನಲಾಗುತ್ತಿದೆ‌.

ಆದರೆ, ಈ ಕುರಿತು ಪೊಲೀಸರು ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ‌. ಕಾರಣ ಪೊಲೀಸರಿಗೆ ಅಖಿಲ್ ಮೃತದೇಹ ಇನ್ನೂ ಸಿಕ್ಕಿಲ್ಲ. ಹೀಗಾಗಿ ದೇವರ ಗುಡಿಹಾಳದಲ್ಲಿರುವ ಭರತ್ ಫಾರ್ಮ್‌ಹೌಸ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಅಖಿಲ್ ಮೃತದೇಹಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸುಪಾರಿ ಹಂತಕರು ಕೊಲೆ ಮಾಡಿ ಮೃತದೇಹವನ್ನು ಎಲ್ಲಿ ಎಸೆದಿದ್ದಾರೆ ಎಂಬುದರ ತನಿಖೆ ನಡೆಸುತ್ತಿದ್ದಾರೆ. ನಾಪತ್ತೆಯಾಗಿರುವ ಸುಪಾರಿ ಹಂತಕರ ಬಂಧನಕ್ಕೂ ಬಲೆ ಬೀಸಿದ್ದಾರೆ.

ಇದನ್ನೂ ಓದಿ | Hanuma Jayanti | ಶ್ರೀರಂಗಪಟ್ಟಣದಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ ತೆರವು; ಆಕ್ರೋಶಕ್ಕೆ ಮಣಿದು ವಾಪಸ್‌ ಕಟ್ಟಿದ ಪುರಸಭೆ

Exit mobile version