Site icon Vistara News

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Murder Case

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿದ್ದು, ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು , ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿದೆ. ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ | Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

ಯಾಸೀ‌ನ್‌ಗೆ ಚಾಕುವಿನಿಂದ ತಿವಿದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಸ್ಥಳದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನ್ನು ಯುವತಿಯ ತಂದೆಯೇ ಬರ್ಬರವಾಗಿ ಹತ್ಯೆ (Double Murder) ಮಾಡಿದ್ದಾನೆ. ಚಾಕುವಿನಿಂದ ಇರಿದು ಇಬ್ಬರನ್ನೂ ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ‌ನಡೆದಿದೆ.

ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ (22) ಮಾಯಪ್ಪ ಹಳೇಗೋಡಿ (22) ಕೊಲೆಯಾದವರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಎಂಬಾತ ಕೃತ್ಯ ಎಸಗಿದ್ದಾನೆ.

ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ.

ಯಲ್ಲಪ್ಪನನ್ನು‌ ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ‌ಫಕೀರಪ್ಪ ಚಾಕುವಿನಿಂದ ಇರಿದಿದ್ದಾಣೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ‌ಮಾಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ‌ಫಲಿಸದೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

ಘಟನೆ ಬಳಿಕ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version