ಕಲಬುರಗಿ: ಕಲ್ಲಿನಿಂದ ಜಜ್ಜಿ ಇಬ್ಬರ ಮಹಿಳೆಯರ ಭೀಕರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರ ಕ್ರಾಸ್ ಬಳಿ ನಡೆದಿದೆ. ಕೂಲಿ ಕೆಲಸಕ್ಕೆಂದು ಜಮೀನಿಗೆ ಹೋಗಿದ್ದಾಗ ಮಹಿಳೆಯನ್ನು ಕೊಲೆ ಮಾಡಲಾಗಿದೆ.
ಚಂದ್ರಮ್ಮ (51), ಶರಣಮ್ಮ (53) ಕೊಲೆಯಾದ ಮಹಿಳೆಯರು. ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Murder Case : ಸೀರೆಯಿಂದ ಕುತ್ತಿಗೆ ಬಿಗಿದು ಹೆಂಡತಿಯನ್ನು ಕೊಂದು ಎಸ್ಕೇಪ್
ತಲೆ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್‌ನ ಬರ್ಬರ ಹತ್ಯೆ
ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ (Murder Case) ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Bengaluru News) ಘಟನೆ ನಡೆದಿದೆ. ವೀರೇಶ್ (25) ಮೃತ ದುರ್ದೈವಿ.
ನಿರ್ಮಾಣ ಹಂತದ ಕಟ್ಟಡದಲ್ಲಿ ವೀರೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ನಿನ್ನೆ ಶನಿವಾರ ಮಧ್ಯರಾತ್ರಿ ನಿದ್ದೆಗೆ ಜಾರಿದ್ದ ವೀರೇಶ್ ಮೇಲೆ ಯಾರೋ ಹಂತಕರು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೋಣನಕುಂಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Monkey attack: ಏಕಾಏಕಿ ದಾಳಿ ನಡೆಸಿದ ಮಂಗಗಳು; ಈ ಬಾಲಕಿ ಏನು ಮಾಡಿದಳು ಗೊತ್ತೇ
ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಭರಮಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೀರೇಶ್ ಎಂಬಾತ ಶವ ಪತ್ತೆಯಾಗಿದೆ. ರಾಯಚೂರಿನ ವೀರೇಶ್ ಕಟ್ಟಡ ಕಾರ್ಮಿಕನಾಗಿದ್ದ. ಸದ್ಯ ವೀರೇಶ್ ಅವರ ಸಂಬಂಧಿಕರು, ಸಹೋದ್ಯೋಗಿಗಳ ವಿಚಾರಣೆ ನಡೆಯುತ್ತಿದೆ. ಮೃತನ ಸಂಬಂಧಿಕರು ದೂರು ನೀಡಿದ್ದಾರೆ. ಅನುಮಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದರು.
ಬೇಲ್ ಪಡೆದು ಜೈಲಿನಿಂದ ಹೊರಬಂದ ರೌಡಿಶೀಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಆನೇಕಲ್: ನೇಣು ಬಿಗಿದುಕೊಂಡು (Self Harming) ರೌಡಿ ಶೀಟರ್ (Rowdy Sheeter) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ (Anekal News) ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ (28) ಆತ್ಮಹತ್ಯೆಗೆ ಶರಣಾದವನು.
2019ರಲ್ಲಿ ಲೋಕನಾಥ್ ಎಂಬಾತನ ಕೊಲೆ ಪ್ರಕರಣದಲ್ಲಿ ಅರುಣ್ ಜೈಲುಪಾಲಾಗಿದ್ದ. ನಂತರ ಜಾಮೀನಿನ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇತ್ತೀಚಿಗೆ ಅರುಣ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅರುಣ್ ರೂಮಿನ ಬಾಗಿಲು ತೆರೆಯದೇ ಇದ್ದಾಗ, ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.