Site icon Vistara News

Murder Case: ಕ್ರೀಡಾಂಗಣದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತಾ?; ಯುವಕರಿಬ್ಬರಿಗೆ ಚಾಕು ಇರಿದು ಪರಾರಿ

#image_title

ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರೀಡಾಂಗಣದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ನಡೆದಿದ್ದು, ಯುವಕರಿಬ್ಬರಿಗೆ ಚಾಕು ಇರಿದು ಪರಾರಿ (Murder Case) ಆಗಿರುವ ಘಟನೆ ನಡೆದಿದೆ.

ಭರತ್ (24) ಮತ್ತು ಪ್ರತೀಕ್ (19) ಚಾಕು ಇರಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಬಿಜೆಪಿ ಮುಖಂಡನಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ವೇಳೆ ಯುವಕರಿಬ್ಬರು ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಲಾಗಿದೆ. ಇದರಿಂದ ಯುವಕರ ಗುಂಪಿನ ನಡುವೆ ಗಲಾಟೆ ನಡೆದಿದೆ.

ಆಟ ಮುಗಿಸಿ ಬಸ್‌ ನಿಲ್ದಾಣಕ್ಕೆ ಹೋಗುತ್ತಿದ್ದವರನ್ನು ಹಿಡಿದು ಚಾಕುವಿನಿಂದ ಚುಚ್ಚಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಚಾಕು ಇರಿತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಪಾಸ್‌ಪೋರ್ಟ್‌ ಪೊಲೀಸ್ ದೃಢೀಕರಣಕ್ಕಾಗಿ mPassport Police App ಲಾಂಚ್

ಬೆಂಗಳೂರು ಗ್ರಾಮಾಂತರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

Exit mobile version