ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ (Murder Case) ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ | Absence Video: ಅಶ್ಲೀಲ ವಿಡಿಯೋ ಶೇರ್, ಅಪ್ಲೋಡ್ ಮಾಡುತ್ತಿದ್ದ ಪ್ರಜ್ವಲ್ ಮೇಲೆ ಕುದುರೆಮುಖದಲ್ಲಿ ಕೇಸ್ ದಾಖಲು!
ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ
ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ.
ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್; ಏನಿದರ ವಿಶೇಷತೆ? ದರ ಎಷ್ಟು?
ಕಳೆದ ಕೆಲ ದಿನಗಳಿಂದ ಮೃತ ಯುವತಿ ಪುಷ್ಪಾ, ಕಿರಣ್‌ನನ್ನು ಮದುವೆ ಮಾಡಿಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದಳು. ಆದರೆ ಕಿರಣ್ ಸದ್ಯ ಈಗಲೇ ಬೇಡ ಎಂದು ನಿರಾಕರಣೆ ಮಾಡಿದ್ದ. ಇದರಿಂದ ಆಕೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆಯಿಂದ ರೂಮ್‌ನಿಂದ ಹೊರ ಬಾರದ ಪುಷ್ಪಾಳ ಮೇಲೆ ಅನುಮಾನಗೊಂಡು ಪಕ್ಕದ ಮನೆಯವರು ರೂಮ್‌ಗೆ ಬಂದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ವಿಶ್ವವಿದ್ಯಾಲಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು
ಯುವಕನೊಬ್ಬ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ (Murder Case) ಮಾಡಿದ್ದ. ಈ ಘಟನೆಯಿಂದ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು. ಮೀನಾ ಎಂಬಾಕೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೇ ವೇಳೆ ಆರೋಪಿ ಪ್ರಕಾಶ್ ತನ್ನ ಮನೆಯ ಸಮೀಪದಲ್ಲೆ ನೇಣಿಗೆ (Self Harming) ಶರಣಾಗಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿ ಘಟನೆ ನಡೆದಿದೆ.
ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್ ರುಂಡ ಸಮೇತ ನಾಪತ್ತೆಯಾಗಿದ್ದ. ಆದರೆ ಶುಕ್ರವಾರ ಆತನ ಮನೆಯ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ. ಆದರೆ ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಜತೆಗೆ ಆರೋಪಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ: Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು, ಮತ್ತೊಬ್ಬ ಗಂಭೀರ
ಏನಿದು ಘಟನೆ?
ಮೀನಾ ಇನ್ನೂ ಹತ್ತನೇ ಕ್ಲಾಸ್ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.
ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್ ಕೊಲೆ ಮಾಡಿದ್ದ.
ಬಾಲಕಿಯನ್ನು ಆರೋಪಿ ಪ್ರಕಾಶ್ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.
ಇದನ್ನೂ ಓದಿ: Manisha Koirala: ಕ್ಯಾನ್ಸರ್ ವಿರುದ್ಧ ಹೋರಾಡಿದ್ದು ಹೇಗೆ? ಅನುಭವ ಹಂಚಿಕೊಂಡ ಮನೀಶಾ ಕೊಯಿರಾಲ
ಎಸ್ಎಸ್ಎಲ್ಸಿ ಪಾಸಾಗಿದ್ದ ಬಾಲಕಿ
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.