Site icon Vistara News

Murder Case : ಜೈನ್‌ ಎಂಜಿನಿಯರಿಂಗ್‌ ಕಾಲೇಜು ಹಿಂಭಾಗ ಯುವಕನ ಬರ್ಬರ ಹತ್ಯೆ

murder case in belgavi

ಬೆಳಗಾವಿ: ಇಲ್ಲಿನ ಪೀರನವಾಡಿಯಲ್ಲಿ ಯುವಕನೊಬ್ಬ (26) ಹತ್ಯೆಯಾಗಿ (Murder case) ಹೋಗಿದ್ದಾನೆ. ಬೆಳಗಾವಿಯ ಪೀರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ ಕೊಲೆಯಾದ ಯುವಕ.

ಜೈನ್‌ ಇಂಜಿನಿಯರಿಂಗ್ ಕಾಲೇಜಿನ (Jain Engineering College) ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಅರ್ಬಾಜ್‌ ರಫೀಕ್‌ ಮೃತದೇಹವು (Dead body) ಪತ್ತೆ ಆಗಿದೆ. ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: Kidnap Case : ಪೋಷಕರ ಕಿಡ್ನ್ಯಾಪ್‌ ಕೇಸ್‌ ಸುಖಾಂತ್ಯ; ಗಂಡನ ಮನೆ ಸೇರಿದ ನವವಿವಾಹಿತೆ

ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಎಸ್.ಟಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರ್ಬಾಜ್ ರಫೀಕ್ ಮುಲ್ಲಾರ ಅಜ್ಜಿ ದೌಡಾಯಿಸಿದ್ದು ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಳಗಾವಿ ಬೀಮ್ಸ್‌ಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version