Site icon Vistara News

Murder Case: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆ

Murder Case

ಹುಬ್ಬಳ್ಳಿ: ಚಾಕುವಿನಿಂದ ಇರಿದು ಯುವಕನ ಹತ್ಯೆ ಮಾಡಿರುವ ಘಟನೆ (Murder Case) ಹಳೇ ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ. ಎಲೆಕ್ಟ್ರಿಷಿಯನ್ ಆಕಾಶ ಮಠಪತಿ ಕೊಲೆಯಾದ ಯುವಕ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Actor Pratham: ನಟ ಪ್ರಥಮ್‌ಗೆ ಜೀವ ಬೆದರಿಕೆ; ದರ್ಶನ್ ಅಭಿಮಾನಿಗಳ ಮೇಲೆ ಬಿತ್ತು ಕೇಸ್‌

ಆಂತರಿಕ ಮಾಹಿತಿ ಸೋರಿಕೆ; ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು: ಅಪರಾಧಿಗಳಿಗೆ ಪೊಲೀಸ್ ಇಲಾಖೆಯ ಆಂತರಿಕ ಮಾಹಿತಿ ಸೋರಿಕೆ ಆರೋಪದಲ್ಲಿ ತುಮಕೂರಿನಲ್ಲಿ ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಹೊಸ ಬಡಾವಣೆ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಅಬ್ದುಲ್ ಘನಿ ಹಾಗೂ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಿರಣ್ ಅಮಾನತುಗೊಂಡವರು.

ಪತ್ರಕರ್ತರೊಬ್ಬರ ಕೊಲೆಯ ಸಂಚು ಸೇರಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧನದಲ್ಲಿರುವ ಆರೋಪಿಗಳಿಗೆ ಮಾಹಿತಿ ಸೋರಿಕೆ ಆರೋಪದಲ್ಲಿ ಜೂ.10ರಂದು ಐವರು ಪೊಲೀಸ್ ಸಿಬ್ಬಂದಿಯನ್ನು ಎಸ್‌ಪಿ ಅಶೋಕ್ ಅಮಾನತು ಮಾಡಿದ್ದರು. ಇದೀಗ ಮತ್ತೆ ಇಲಾಖೆಯ ಆಂತರಿಕ ಮಾಹಿತಿ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಅಮಾನತು ಮಾಡಲಾಗಿದೆ.

50 ವರ್ಷದ ಅಂಕಲ್‌ ಜತೆಗೆ 19ರ ಯುವತಿ ನಾಪತ್ತೆ

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ (Love case) ನಾಪತ್ತೆ (Missing Case) ಆಗಿದ್ದು, ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಕೆರೆ ಬಳಿ ಕಾರು ನಿಲ್ಲಿಸಿ ಮೊಬೈಲ್‌ಗಳನ್ನು ಕಾರಿನೊಳಗೆ ಇಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಘಟನೆ ನಡೆದಿದೆ.

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ (50) ನಾಪತ್ತೆಯಾದವರು. ವಯಸ್ಸಿನ ಅಂತರ ಇದ್ದರೂ, ಇವರಿಬ್ಬರ ನಡುವೆ ಅದ್ಹೇಗೋ ಪ್ರೀತಿ ಚಿಗುರಿತ್ತು. ಕದ್ದುಮುಚ್ಚಿ ಇದ್ದ ಇವರಿಬ್ಬರ ಪ್ರೀತಿ ಕುಟುಂಬಸ್ಥರಿಗೆ ತಿಳಿದುಹೋಗಿತ್ತು. ಈ ಪ್ರೀತಿಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರಿಂದ, ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗಿದೆ.

ಕಳೆದ 3 ದಿನಗಳ ಹಿಂದೆ ಅನನ್ಯ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಮಾವತ್ತೂರು ಕೆರೆ ಬಳಿ ಆಕೆಯ ಚಪ್ಪಲಿ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೋಟ್ ಸಹಾಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ | Road Accident : ಯಮರೂಪಿಯಾಗಿ ಬಂದ ಟಾಟಾ ಏಸ್‌ ವಾಹನಕ್ಕೆ ಮೂವರು ಬಲಿ

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಾಲ ಪಿಎಸ್‌ಐ ರೇಣುಕಾ ಯಾದವ್, ಯೋಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version