Site icon Vistara News

ಮುರುಘಾಶ್ರೀ ಪ್ರಕರಣ | 2ನೇ ಪೋಕ್ಸೋ ಪ್ರಕರಣದಲ್ಲಿ ಸ್ವಾಮೀಜಿಗೆ ಪೊಲೀಸ್ ಕಸ್ಟಡಿ ಅಂತ್ಯ; ನ.8 ರವರೆಗೆ ನ್ಯಾಯಾಂಗ ಬಂಧನ

Not timetable to send children; Havent seen Murugha Seer room says Warden Rashmi

ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳ 3 ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಆದರೆ, ನ್ಯಾಯಾಲಯದ ಈ ಹಿಂದಿನ ಆದೇಶದಂತೆ 1ನೇ ಪೋಕ್ಸೊ ಪ್ರಕರಣದಲ್ಲಿ ನವೆಂಬರ್ 8ರವರೆಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

ಪೊಲೀಸ್‌ ಕಸ್ಟಡಿಯ ಮೂರನೇ ದಿನವಾದ ಶನಿವಾರ ಬೆಳಗ್ಗೆ 10 ಗಂಟೆಗೆ ಡಿವೈಎಸ್ಪಿ ಕಚೇರಿಯಲ್ಲಿ ಮುರುಘಾಶ್ರೀ ಆರೋಗ್ಯ ತಪಾಸಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಬಳಿಕ ಮಧ್ಯಾಹ್ನ ಪೊಲೀಸರು ಮುರುಘಾಮಠಕ್ಕೆ ಮುರುಘಾಶ್ರೀಗಳನ್ನು ಕರೆತಂದು ಪೊಲೀಸರು ಸ್ಥಳ ಮಹಜರು ನಡೆಸಿದರು. ಮಠದಲ್ಲಿ ಮುರುಘಾಶ್ರೀ ಕಚೇರಿ, ಬೆಡ್ ರೂಮ್‌ನಲ್ಲಿ ಮಹಜರು ನಡೆಸಿ, 2 ಬ್ಯಾಗ್‌ಗಳಲ್ಲಿ ಬಟ್ಟೆ ಮತ್ತಿತರ ಸಾಕ್ಷ್ಯ ಸಂಬಂಧಿತ ವಸ್ತುಗಳನ್ನು ಜಪ್ತಿ ಮಾಡಲಾಯಿತು. ಬಳಿಕ ಮಠದಿಂದ ಜಿಲ್ಲಾಸ್ಪತ್ರೆಗೆ ಕರೆದೊಯ್ದ ಆರೋಗ್ಯ ತಪಾಸಣೆ ನಡೆಸಿ, ನವೆಂಬರ್ 3ರಂದು ನೀಡಿದ್ದ ಆದೇಶದಂತೆ 1ನೇ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನವಾಗಿದ್ದ ಮುರುಘಾಶ್ರೀಗಳ ಮೇಲೆ ಎರಡನೇ ಪೋಕ್ಸೋ ಕೇಸ್‌ ಮೈಸೂರಿನಲ್ಲಿ ದಾಖಲಾಗಿತ್ತು. ಮಠದಲ್ಲಿ ಅಡುಗೆ ಸಹಾಯಕಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಹೆಣ್ಣು ಮಕ್ಕಳ ಮೇಲೆ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರು ನೀಡಿದ್ದರು. ಹೀಗಾಗಿ ಎರಡನೇ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆ ನಡೆಸಲು ಮೂರು ದಿನಗಳ ಕಾಲ ಶ್ರೀಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು.

ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣ; 3 ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ

ರಾಮನಗರ: ಕಂಚುಗಲ್‌ ಬಂಡೇಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಾಗಡಿ 1ನೇ ಜೆಎಂಎಫ್​ಸಿ ಕೋರ್ಟ್ ನ್ಯಾಯಾಧೀಶೆ‌ ಎಂ. ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕೆ ಅಲಿಯಾಸ್‌ ಚಂದು (21), ತುಮಕೂರು ಮೂಲದ ನಿವೃತ್ತ ಶಿಕ್ಷಕ ಮಹದೇವಯ್ಯ ಅವರನ್ನು ಮಾಗಡಿ ಪೊಲೀಸರು ಬಂಧಿಸಿದ್ದರು. ಇದೀಗ ನ್ಯಾಯಾಂಗ ಬಂಧನಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಮೃತ್ಯುಂಜಯ ಸ್ವಾಮೀಜಿ ಮತ್ತು ವಕೀಲ ಮಹದೇವಯ್ಯ ಅವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದು, ನಿಲಾಂಬಿಕೆಯನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಮುಂದಿನ ವಿಚಾರಣೆ ನ.15ಕ್ಕೆ ನ್ಯಾಯಾಲಯದಲ್ಲಿ ನಡೆಯಲಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | 2ನೇ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಮುರುಘಾಶರಣರು ಮೂರು ದಿನ ಪೊಲೀಸ್‌ ಕಸ್ಟಡಿಗೆ

Exit mobile version