ಮುರುಘಾಶ್ರೀ ಪ್ರಕರಣ | ಚಿತ್ರದುರ್ಗದ ಸಿಡಬ್ಲ್ಯೂಸಿಯಲ್ಲಿ ಇರಲೊಪ್ಪದ ಸಂತ್ರಸ್ತ ಬಾಲಕಿಯರು - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಚಿತ್ರದುರ್ಗದ ಸಿಡಬ್ಲ್ಯೂಸಿಯಲ್ಲಿ ಇರಲೊಪ್ಪದ ಸಂತ್ರಸ್ತ ಬಾಲಕಿಯರು

ಮುರುಘಾಶ್ರೀ ಪ್ರಕರಣ | ಮುರುಘಾ ಶರಣರ ಮೇಲೆ ದಾಖಲಾಗಿರುವ ಎರಡನೇ ಪೋಕ್ಸೋ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯರಿಂದ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ. ಆದರೆ, ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ಮಾತ್ರ ಬಾಕಿಯಾಗಿದೆ.

VISTARANEWS.COM


on

chitradurga court 2
ಸ್ಥಳ ಮಹಜರಿಗಾಗಿ ಚಿತ್ರದುರ್ಗ ಮುರುಘಾ ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತರುತ್ತಿರುವ ಪೊಲೀಸರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಿತ್ರದುರ್ಗ: ಮುರುಘಾಮಠದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣದ ಸಂತ್ರಸ್ತೆಯರು ಇಲ್ಲಿನ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಯಲು ನಿರಾಕರಿಸಿದ್ದು, ಮೈಸೂರಿನ ಒಡನಾಡಿ ಸಂಸ್ಥೆಗೆ ಹೋಗುವುದಾಗಿ ಪಟ್ಟುಹಿಡಿದಿದ್ದಾರೆ. ಈ ನಿಮಿತ್ತ ಇವರ ಮನವೊಲಿಕೆ ಕಾರ್ಯ ನಡೆದಿದೆ.

ಆಗಿಲ್ಲ ಸ್ಥಳ ಮಹಜರು
ಇದಕ್ಕೂ ಮೊದಲು ಮಂಗಳವಾರ (ಅ.೨೫) ಬೆಳಗ್ಗೆ ಪೊಲೀಸರು ಸಂತ್ರಸ್ತರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನ್ಯಾಯಾಧೀಶರ ಎದುರು 164ರ ಅಡಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆದಿದ್ದು, ಸಂತ್ರಸ್ತ ಬಾಲಕಿಯರು ಮತ್ತು ತಾಯಿಯಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಬಳಿಕ ಸಂತ್ರಸ್ತ ಬಾಲಕಿಯರನ್ನು ಮುರುಘಾಮಠಕ್ಕೆ ಕರೆತರಲಾಗಿದೆ.

ಪೊಲೀಸರು ವಾಪಸ್
ಮುರುಘಾ ಮಠದಲ್ಲಿ ಮುರುಘಾಶ್ರೀಗಳ ಕಚೇರಿ ಹಾಗೂ ಕೊಠಡಿಯಲ್ಲಿ ಸ್ಥಳ ಮಹಜರು ಮಾಡಬೇಕಿತ್ತು. ಆದರೆ, ಇವುಗಳಿಗೆ ಬೀಗ ಹಾಕಲಾಗಿತ್ತು. ಈ ಬೀಗದ ಕೈಗಳು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿರುವ ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರ ಸುಪರ್ದಿಯಲ್ಲಿದ್ದವು. ಆದರೆ, ಅವರು ಕಾರ್ಯನಿಮಿತ್ತ ಬೆಂಗಳೂರಿನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬೇರೆ ದಾರಿ ಇಲ್ಲದೆ ಸಂತ್ರಸ್ತ ಬಾಲಕಿಯರ ಜತೆ ವಾಪಸಾಗಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಕೊನೆಗೂ ಮುರುಘಾಶರಣರ ಫೋಟೊ ತೆರವು

ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರು ಬುಧವಾರವೂ ಬೆಂಗಳೂರಿನಿಂದ ವಾಪಸಾಗದಿದ್ದರೆ ಅಂದೂ ಸಹ ಸ್ಥಳ ಮಹಜರು ನಡೆಯುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕಾಗಿ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಬಾಲಕಿಯರು ತಮ್ಮನ್ನು ಮೈಸೂರಿನ ಒಡನಾಡಿ ಸಂಸ್ಥೆಗೆ ಕಳುಹಿಸಿಕೊಡಿ ಎಂದು ಪಟ್ಟುಹಿಡಿದ್ದಾರೆ.

ನಡೆಯುತ್ತಿರುವ ಮನವೊಲಿಕೆ ಕಾರ್ಯ
ಮುರುಘಾ ಶ್ರೀಗಳ ಕಚೇರಿ ಮತ್ತು ಕೊಠಡಿಯ ಸ್ಥಳ ಮಹಜರು ಇನ್ನೂ ನಡೆಯದ ಕಾರಣ ಈ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿ ಅಧಿಕಾರಿಗಳು ಪ್ರಯತ್ನ ಪಡುತ್ತಿದ್ದಾರೆ. ಕಾರಣ, ಮೈಸೂರಿಗೆ ಕಳುಹಿಸಿದರೆ ಪುನಃ ಸ್ಥಳ ಮಹಜರಿಗೋಸ್ಕರ ಅವರನ್ನು ಕರೆತರಬೇಕಿದೆ.

ಮತ್ತೆ ಶ್ರೀಗಳು ಕಸ್ಟಡಿಗೆ?
ಈಗಾಗಲೇ ಒಂದು ಲೈಂಗಿಕ ಪ್ರಕರಣದಲ್ಲಿ ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಅ. ೧೪ರಂದು ಮತ್ತೊಂದು ಪ್ರಕರಣ ದಾಖಲಾಗಿದ್ದರಿಂದ ಮಂಗಳವಾರ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲು ಮಾಡಲಾಗಿದೆ. ಇನ್ನು ಸ್ಥಳ ಮಹಜರು ಮಾತ್ರ ಬಾಕಿ ಇದ್ದು, ಇದಾದ ಬಳಿಕ ಮುರುಘಾ ಶ್ರೀಯನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಚಿತ್ರದುರ್ಗ ಜಿಲ್ಲಾ ಕೋರ್ಟ್‌ನಲ್ಲಿ ಸಂತ್ರಸ್ತ ಬಾಲಕಿಯರಿಬ್ಬರ ಹೇಳಿಕೆ ದಾಖಲು

ನ್ಯಾಯಾಂಗ ಬಂಧನ ವಿಸ್ತರಣೆ
ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶರಣರು ಜಾಮೀನು ಕೋರಿ ಚಿತ್ರದುರ್ಗ 2ನೇ ಅಪರ & ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲವು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಇನ್ನು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ.

ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸಂಬಂಧ ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್‌ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು. ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಅಷ್ಟೂ ಹೆಣ್ಣು ಮಕ್ಕಳ ಆಪ್ತ ಸಮಾಲೋಚನೆಗೆ ಆದೇಶ
ಮುರುಘಾ ಶರಣರು ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಬೆನ್ನಲ್ಲೇ ಮತ್ತೆ ನಾಲ್ಕು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ದೂರು ಬಂದಿದ್ದ ಹಿನ್ನೆಲೆಯಲ್ಲಿ ಶ್ರೀಮಠದ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಎಲ್ಲ ಹೆಣ್ಣುಮಕ್ಕಳಿಗೂ ಆಪ್ತ ಸಮಾಲೋಚನೆ ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿ ಈಚೆಗೆ ಆದೇಶ ಹೊರಡಿಸಿದೆ.

ನವೆಂಬರ್‌ ೩೦ರ ಗುಡುವು
ಮಠದಿಂದ ವಿವಿಧ ಸರ್ಕಾರಿ ಹಾಸ್ಟೆಲ್, ಬಾಲಮಂದಿರಕ್ಕೆ ಸ್ಥಳಾಂತರಗೊಂಡಿರುವ ಅಥವಾ ಮನೆಗೆ ಹೋಗಿರುವ ಎಲ್ಲ ಹೆಣ್ಣುಮಕ್ಕಳ ಜತೆ ನವೆಂಬರ್ 30ರೊಳಗೆ ಆಪ್ತ ಸಮಾಲೋಚನೆ ನಡೆಸುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವ ಮಾಹಿತಿ ಸಿಕ್ಕಲ್ಲಿ ಹೇಳಿಕೆ ದಾಖಲಿಸಿ, ನಿಯಮಾನುಸಾರ ಮುಂದಿನ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ನಿರ್ಲಕ್ಷ್ಯ ವಹಿಸದಂತೆ ಕ್ರಮಕ್ಕೆ ಸೂಚನೆ
ಆಪ್ತ ಸಮಾಲೋಚನೆ ವೇಳೆ ಯಾವುದೇ ರೀತಿಯಾದಂತಹ ನಿರ್ಲಕ್ಷ್ಯ ಆಗಕೂಡದು. ಆದ್ಯತೆ ಮೇರೆಗೆ ಕ್ರಮ ವಹಿಸಬೇಕು. ಆಪ್ತ ಸಮಾಲೋಚನೆ ನಡೆಸುವಾಗ ಉಪಸ್ಥಿತರಿರುವ ಸಂಖ್ಯೆ, ಮಕ್ಕಳಿಂದ ಯಾವ ಮಾದರಿಯಲ್ಲಿ ಮಾಹಿತಿ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸಬೇಕು. ಜತೆಗೆ ಈಗ ಈ ಎಲ್ಲ ಮಕ್ಕಳಿಗೆ ಯಾವ ರೀತಿಯಾಗಿ ಪುನರ್ವಸತಿ ಕಲ್ಪಿಸಲಾಗಿದೆ? ಅವರಿಗೆ ವ್ಯವಸ್ಥೆ ಹೇಗಿದೆ ಎಂಬ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ; ನವೆಂಬರ್‌ 3ರವರೆಗೆ ಜೈಲೇ ಗತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

VISTARANEWS.COM


on

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮರಳಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾಯಕತ್ವದ ಕುರಿತಾದ ಪ್ರಶ್ನೆಗಳಿಗೆ ಬಹಳ ಸಂಯಮದಿಂದ ಉತ್ತರಿಸಿದ್ದಾರೆ. “ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಎಲ್ಲವೂ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲೇ ನಡೆಯಲಿದೆ” ಎಂದು ಹೇಳುವ ಮೂಲಕ ಸದ್ಯಕ್ಕೆ ಎದ್ದಿರುವ ಊಹಾಪೋಹಗಳಿಗೆ ಸೌಮ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ತಮ್ಮ ಆಪ್ತ ವಲಯದೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ತಮ್ಮ ಆಪ್ತರೊಬ್ಬರ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದ ನೆಪದಲ್ಲಿ ಸಿಎಂ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳು ಮತ್ತು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತಮ್ಮ ಬಣದ ನಾಯಕರ ವಿಶ್ವಾಸವನ್ನು ಉಳಿಸಿಕೊಳ್ಳಲು ಸಿಎಂ ಈ ಭೇಟಿಯನ್ನು ಬಳಸಿಕೊಂಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಮುಂಬರುವ ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿರುವ ಕಾರಣ, ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಆದರೆ, ನಗರದ ಸೌಂದರ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಡಿಸಿಎಂ ಅವರು ತಮ್ಮ ಬೆಂಬಲಿಗರಿಗೆ ಪ್ರೀತಿಯ ಎಚ್ಚರಿಕೆ ನೀಡಿದ್ದಾರೆ. “ನನ್ನ ಹುಟ್ಟುಹಬ್ಬದಂದು ಯಾವುದೇ ಅನಧಿಕೃತ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕಬೇಡಿ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ. ಏಪ್ರಿಲ್ ಅಂತ್ಯದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಡೆಯಲಿರುವ ಭೇಟಿಯ ಬಳಿಕ ರಾಜ್ಯ ರಾಜಕಾರಣದ ಮುಂದಿನ ಹಾದಿ ಇನ್ನಷ್ಟು ಸ್ಪಷ್ಟವಾಗುವ ಸಾಧ್ಯತೆಯಿದೆ.

Continue Reading

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading

Latest

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

VISTARANEWS.COM


on

ರಾಜ್ಯದ ಶಾಲಾ ಮಕ್ಕಳಲ್ಲಿ ಓದಿನ ಹವ್ಯಾಸವನ್ನು ಹೆಚ್ಚಿಸಲು ಮತ್ತು ಅವರ ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆಯು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಬಾಹ್ಯ ಜಗತ್ತಿನ ವಿದ್ಯಮಾನಗಳ ಬಗ್ಗೆ ಅರಿವು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ.

ಈ ಹೊಸ ನಿಯಮದ ಹಿಂದೆ ಮಕ್ಕಳನ್ನು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಚಟದಿಂದ ದೂರವಿಡುವ ಪ್ರಮುಖ ಉದ್ದೇಶವಿದೆ. ಅತಿಯಾದ ಇಂಟರ್ನೆಟ್ ಬಳಕೆಯಿಂದ ಮಕ್ಕಳಲ್ಲಿ ಉಂಟಾಗುತ್ತಿರುವ ದೃಷ್ಟಿ ದೋಷ, ಸ್ಮರಣಶಕ್ತಿ ಕುಂಠಿತ ಮತ್ತು ಮಾನಸಿಕ ಒತ್ತಡದಂತಹ ಸಮಸ್ಯೆಗಳಿಗೆ ಕಡಿವಾಣ ಹಾಕಲು ಪತ್ರಿಕೆ ಓದುವ ಹವ್ಯಾಸವು ರಾಮಬಾಣವಾಗಲಿದೆ. 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಸರ್ಕಾರದ ನಿರ್ಧಾರದ ಬೆನ್ನಲ್ಲೇ ಈ ಕ್ರಮ ಜಾರಿಗೆ ಬಂದಿರುವುದು ವಿಶೇಷವಾಗಿದೆ.

ದಿನಪತ್ರಿಕೆ ಓದುವುದರಿಂದ ಕೇವಲ ಸಾಮಾನ್ಯ ಜ್ಞಾನ ವೃದ್ಧಿಸುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳ ಭಾಷಾ ಪ್ರೌಢಿಮೆ ಮತ್ತು ಬರವಣಿಗೆಯ ಕೌಶಲ್ಯವೂ ಉತ್ತಮಗೊಳ್ಳಲಿದೆ. ಹೊಸ ಶಬ್ದಗಳ ಪರಿಚಯದೊಂದಿಗೆ ಕನ್ನಡ ಭಾಷೆಯ ಮೇಲಿನ ಹಿಡಿತ ಸಾಧಿಸಲು ಇದು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಲಿದೆ. ಶಿಕ್ಷಣ ಇಲಾಖೆಯ ಈ ಸುಧಾರಣಾ ಕ್ರಮವು ಮಕ್ಕಳನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮತ್ತು ಅವರಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

Continue Reading

ಕರ್ನಾಟಕ

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

VISTARANEWS.COM


on

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಫ್ಲೈ 91 (Fly 91) ವಿಮಾನಯಾನ ಸಂಸ್ಥೆಯ ವಿಮಾನಗಳು ಸತತವಾಗಿ ತಾಂತ್ರಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಘಟನೆಯಾಗಿದ್ದು, ನಿನ್ನೆ ಹೈದರಾಬಾದ್‌ನಿಂದ ಬಂದ ವಿಮಾನವು ಲ್ಯಾಂಡಿಂಗ್‌ಗಾಗಿ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆದಿದೆ. ಮಧ್ಯಾಹ್ನ 3.13ಕ್ಕೆ ಹೈದರಾಬಾದ್‌ನಿಂದ ಹೊರಟಿದ್ದ ವಿಮಾನವು ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದ ನೆಪವೊಡ್ಡಿ ವಿಮಾನವನ್ನು ಆಕಾಶದಲ್ಲೇ ತಡೆಹಿಡಿದ ಪರಿಣಾಮ, ಅಂತಿಮವಾಗಿ 5.09ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವಿಳಂಬದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಾಣಭಯದಿಂದ ತತ್ತರಿಸುವಂತಾಯಿತು.

ಫ್ಲೈ 91 ಸಂಸ್ಥೆಯ ವಿಮಾನಗಳಿಗೆ ಹುಬ್ಬಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಏಪ್ರಿಲ್ 19 ರಂದು ಹೈದರಾಬಾದ್‌ನಿಂದ ಬರುತ್ತಿದ್ದ ಇದೇ ಸಂಸ್ಥೆಯ ವಿಮಾನವೊಂದು ವೇಗ ನಿಯಂತ್ರಣ ಕಳೆದುಕೊಂಡು ಬರೊಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿ, ಕೊನೆಗೆ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆಗಲೂ ಹವಾಮಾನದ ಕಾರಣ ನೀಡಲಾಗಿತ್ತಾದರೂ, ತಾಂತ್ರಿಕ ದೋಷವೇ ಅಸಲಿ ಕಾರಣ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ವಿಮಾನಯಾನ ಸಂಸ್ಥೆಯು ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಕ್ಕೆ ಪ್ರಯಾಣಿಕರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ನಡೆದ ಎರಡೇ ದಿನಗಳಲ್ಲಿ ಅಂದರೆ ಏಪ್ರಿಲ್ 21 ರಂದು ಬೆಂಗಳೂರಿನಿಂದ ಬಂದಿದ್ದ ವಿಮಾನಕ್ಕೂ ಇಂತಹುದೇ ಸ್ಥಿತಿ ಎದುರಾಗಿತ್ತು. ಈಗ ಕೇವಲ ಮೂರು ದಿನಗಳ ಅಂತರದಲ್ಲಿ ಮತ್ತೆ ಅದೇ ರೀತಿಯ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇತರ ವಿಮಾನ ಸಂಸ್ಥೆಗಳು ಸುಗಮವಾಗಿ ಸಂಚರಿಸುತ್ತಿರುವಾಗ ಫ್ಲೈ 91 ವಿಮಾನಗಳಿಗೆ ಮಾತ್ರ ಏಕೆ ಪದೇ ಪದೇ ಈ ತೊಂದರೆ ಆಗುತ್ತಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ವಿಮಾನಗಳ ಫಿಟ್‌ನೆಸ್ ಹಾಗೂ ನಿರ್ವಹಣೆಯಲ್ಲಿ ಸಂಸ್ಥೆ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಪ್ರಯಾಣಿಕರಿಂದ ಈಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿದೆ.

Continue Reading
Advertisement
Latest5 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest5 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest5 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest6 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest7 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest7 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

Latest7 hours ago

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

Latest9 hours ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest9 hours ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ10 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌