ಚಿತ್ರದುರ್ಗ: ಮುರುಘಾಮಠದ ಪೋಕ್ಸೊ ಪ್ರಕರಣದ 2ನೇ ಆರೋಪಿ, ಮಠದ ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಸೆ. 6ರಂದು ಬೆಳಗ್ಗೆ 12 ಗಂಟೆಗೆ ಪೊಲೀಸರು, ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ವಿಚಾರಣೆ ಮಾಡಲು ರಶ್ಮಿಯನ್ನು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಈಗಾಗಲೇ ಕೇಳಿದ್ದಾರೆ. ಹೀಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಲು ನ್ಯಾಯಧೀಶೆ ಕೋಮಲಾ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬಳಿಕ ಡಿವೈಎಸ್‌ಪಿ ಕಚೇರಿಯಲ್ಲಿ ಆರೋಪಿ ರಶ್ಮಿ ವಿಚಾರಣೆ ನಡೆಯಲಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಿಳಾ ಕಾರಾಗೃಹದಲ್ಲಿದ್ದ ಆರೋಪಿ ರಶ್ಮಿಯನ್ನು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ಮುರುಘಾಶ್ರೀ ಅವರನ್ನು ಸೆ. 14ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೀಗಾಗಿ ಸದ್ಯ ಶ್ರೀಗಳು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿದ್ದು, ಸೋಮವಾರ ರಾತ್ರಿ ಜೈಲೂಟವಾದ ಅನ್ನ, ಸಾರು ಸ್ವೀಕರಿಸಿದ್ದಾರೆ.
ಇದನ್ನೂ ಓದಿ | Rain News | ಪ್ರವಾಹ ನಿರ್ವಹಣೆಗೆ 600 ಕೋಟಿ ರೂ. ಬಿಡುಗಡೆ ಎಂದ ಸಿಎಂ ಬೊಮ್ಮಾಯಿ