Murugha Seer: ರಿಲೀಸ್‌ ಆದ ಐದೇ ದಿನಕ್ಕೆ ಮತ್ತೆ ಮುರುಘಾಶ್ರೀ ಬಂಧನ - Vistara News

ಕರ್ನಾಟಕ

Murugha Seer: ರಿಲೀಸ್‌ ಆದ ಐದೇ ದಿನಕ್ಕೆ ಮತ್ತೆ ಮುರುಘಾಶ್ರೀ ಬಂಧನ

Murugha Seer: ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.

VISTARANEWS.COM


on

Murugha seer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮೊದಲನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು (Murugha Seer) , ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.

ಮತ್ತೊಂದೆಡೆ ಮುರುಘಾಶ್ರೀಗಳ ಬಂಧನ ವಾರಂಟ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಶ್ರೀಗಳ ಪರ ವಕೀಲರು ಮುಂದಾಗಿದ್ದಾರೆ. ಬಂಧನ ವಾರಂಟ್ ಹೊರಡಿಸಿರುವುದು ಕಾನೂನು ಬಾಹಿರ, ಹೀಗಾಗಿ ವಾರಂಟ್ ರದ್ದುಪಡಿಸುವಂತೆ ಇಂದು ಸಂಜೆಯೇ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಇಂದೇ ವಿಚಾರಣೆ ಕೂಡ ನಡೆಸುವಂತೆ ವಕೀಲರು ಮನವಿ ಮಾಡಲಿದ್ದಾರೆ. ಸಂಜೆ 4.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೈಲು ಅಧಿಕಾರಿಗಳ ಕರ್ತವ್ಯ ಲೋಪ

ಪ್ರಕರಣದ ಬಗ್ಗೆ ಸಂತ್ರಸ್ತ ಬಾಲಕಿಯರ ಪರ ವಕೀಲ ಶ್ರೀನಿವಾಸ್ ಪ್ರತಿಕ್ರಿಯಿಸಿ, ಬಂಧನ ವಾರಂಟ್ ಹೊರಡಿಸುವುದು ಅವಶ್ಯ ಹಾಗೂ ಅನಿವಾರ್ಯವಾಗಿತ್ತು. ಕೋರ್ಟ್ ಬಂಧನ ವಾರಂಟ್ ಹೊರಡಿಸಿರುವುದು ಸಂತಸ ತಂದಿದೆ. ಮೊದಲನೇ ಪ್ರಕರಣದಲ್ಲಿ ಬೇಲ್ ಸಿಕ್ಕಾಗ ಸಂತ್ರಸ್ತ ಬಾಲಕಿಯ ಕುಟುಂಬ ಆತಂಕಕ್ಕೆ ಒಳಗಾಗಿತ್ತು. ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ತಯಾರಿ ನಡೆದಿತ್ತು. ಎರಡನೇ ಪ್ರಕರಣದಲ್ಲಿ ಜಾಮೀನು ಸಿಗದೇ ಇದ್ದರೂ ಅವರು ಹೊರಗಡೆ ಬಂದಿದ್ದು ಜೈಲು ಅಧಿಕಾರಿಗಳ ಕರ್ತವ್ಯ ಲೋಪ. ಎರಡನೇ ಪ್ರಕರಣಕ್ಕೆ ಜಾಮೀನು ಅರ್ಜಿ ಸಲ್ಲಿಸಿದರೆ ಅದಕ್ಕೆ ನಾವು ತಕರಾರು ಅರ್ಜಿ ಸಲ್ಲಿಸುತ್ತೇವೆ ತಿಳಿಸಿದ್ದಾರೆ.

ಇದನ್ನೂ ಓದಿ | Physical Abuse : ಹುಡುಗಿ ಒಪ್ಪದೆ ಪುರುಷ ಅತ್ಯಾಚಾರ ಮಾಡಲಾಗದು!; ಕಾಂಗ್ರೆಸ್‌ ನಾಯಕನ ಸಂಶೋಧನೆ!

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ಎರಡು ಪ್ರಕರಣಗಳು ದಾಖಲಾಗಿದ್ದವು. ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣವಾದರೆ ಎರಡನೇ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಜತೆಗೆ ಅವರು ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖಿಸಲಾಗಿದೆ. ಮೊದಲ ಪ್ರಕರಣದಲ್ಲಿ ಪೋಕ್ಸೊ ಪ್ರಕರಣ ಮಾತ್ರ ಇದ್ದರೆ, ಎರಡನೇ ಕೇಸ್‌ನಲ್ಲಿ ಪೋಕ್ಸೋ ಜತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯೂ ಅನ್ವಯವಾಗಿದೆ.

ನಿಜವೆಂದರೆ, ಮೊದಲನೇ ಪ್ರಕರಣದಲ್ಲಿ ಜಾಮೀನು ಪಡೆದಾಗ ಎರಡನೇ ಪ್ರಕರಣದ ಉಲ್ಲೇಖ ಆಗಿರಲಿಲ್ಲ. ಅದರಲ್ಲೂ ಮುಖ್ಯವಾಗಿ ಎರಡನೇ ಪ್ರಕರಣದಲ್ಲಿ ನಡೆಯಬೇಕಾದ ಬಂಧನ, ವಿಚಾರಣೆಯ ಯಾವ ಪ್ರಕ್ರಿಯೆಗಳೂ ನಡೆದಿರಲಿಲ್ಲ. ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಾಗ (ನವೆಂಬರ್‌ 16) ಶ್ರೀಗಳಿಗೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಅದರಲ್ಲಿ ಚಿತ್ರದುರ್ಗ ಜಿಲ್ಲಾ ಪ್ರವೇಶ ಮಾಡುವಂತಿಲ್ಲ ಎನ್ನುವುದು ಕೂಡಾ ಒಂದು. ಹೀಗಾಗಿ ಚಿತ್ರದುರ್ಗ ಜೈಲಿನಿಂದ ಹೊರಬಿದ್ದ ಶ್ರೀಗಳು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ಹೋಗಿದ್ದರು. ಇದೀಗ ಅಲ್ಲಿಯೇ ಅವರನ್ನು ಪೊಲೀಸರು ಬಂಧಿಸಿ, ಚಿತ್ರದುರ್ಗಕ್ಕೆ ಕರೆತರುತ್ತಿದ್ದಾರೆ.

ಇದನ್ನೂ ಓದಿ | Actor Darshan : ಸಾರ್ವಜನಿಕವಾಗಿ ಲಾಂಗ್‌ ಹಿಡಿದು ಪೋಸ್‌; ಮತ್ತೊಂದು ವಿವಾದದಲ್ಲಿ ದರ್ಶನ್‌

ಮೊದಲ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ದಿನವೇ ಅಂದರೆ ನವೆಂಬರ್‌ 16ರಂದೇ ಎರಡನೇ ಪ್ರಕಣರದ ವಿಚಾರಣೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು. ಶ್ರೀಗಳು ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಈ ವಿಚಾರಣೆ ನವೆಂಬರ್‌ 18ಕ್ಕೆ ಮುಂದೂಡಲ್ಪಟ್ಟಿತ್ತು. ನವೆಂಬರ್‌ 18ರಂದು ನಡೆದ ವಿಚಾರಣೆಯ ಅಂತಿಮ ತೀರ್ಪನ್ನು ನವೆಂಬರ್‌ 20ಕ್ಕೆ (ಮಂಗಳವಾರ) ಕಾಯ್ದಿರಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹87.10, ಎಂಟು ಗ್ರಾಂ ₹696.80 ಮತ್ತು 10 ಗ್ರಾಂ ₹871ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,710 ಮತ್ತು 1 ಕಿಲೋಗ್ರಾಂಗೆ ₹87,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ. ನಿನ್ನೆಗೆ ಹೋಲಿಸಿದರೆ ಈ ದರ ಕೊಂಚ ಏರಿಕೆ ಕಂಡಿದೆ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ಕರ್ನಾಟಕ

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Heavy Rain: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಶುಕ್ರವಾರ ಸುರಿದ ಭಾರೀ ಮಳೆಯಿಂದ ಹಾನಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲೆವೆಡೆ ರಸ್ತೆಗಳಲ್ಲೇ ನೀರು ಹರಿದು ಮುಂದಕ್ಕೆ ಚಲಿಸಲಾಗದೆ ವಾಹನ ಸವಾರರು ಪರದಾಡಿದರು. ವಿವಿಧೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಾಹನಗಳೂ ಜಖಂಗೊಂಡಿವೆ. ಜತೆಗೆ ಮೈಸೂರಿನ ಕೆಲವಡೆಡಯೂ ಹಾನಿ ಉಂಟಾಗಿದೆ.

VISTARANEWS.COM


on

Heavy Rain
Koo

ಬೆಂಗಳೂರು: ಕೆಲವು ದಿನಗಳಿಂದ ಮಾಯವಾಗಿದ್ದ ಮಳೆ ಮತ್ತೆ ಬೆಂಗಳೂರಿಗೆ ಬಂದಿದೆ. ರಾಜಧಾನಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ (Heavy Rain). ಶುಕ್ರವಾರ ಸುರಿದ ಭಾರೀ ಮಳೆಯಿಂದ ಹಾನಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲೆವೆಡೆ ರಸ್ತೆಗಳಲ್ಲೇ ನೀರು ಹರಿದು ಮುಂದಕ್ಕೆ ಚಲಿಸಲಾಗದೆ ವಾಹನ ಸವಾರರು ಪರದಾಡಿದರು. ವಿವಿಧೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಾಹನಗಳೂ ಜಖಂಗೊಂಡಿವೆ.

ಮನೆಯೊಳಗೆ ನುಗ್ಗಿದ ನೀರು

ಅರ್‌.ಅರ್. ನಗರ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ದೇವಿನಗರದಲ್ಲಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ರಾತ್ರಿ ಇಡೀ ನಿದ್ದೆಗೆಟ್ಟು ಮನೆಯಿಂದ ನೀರು ಹೊರ ಹಾಕುವ ದೃಶ್ಯ ಕಂಡು ಬಂತು. ಇನ್ನು ಕೆಂಗೇರಿ ಟಿಟಿಎಂಸಿ ಕಾಂಪೌಂಡ್ ಕುಸಿದು ಬಿದ್ದಿದೆ. ಭಾರಿ ಮಳೆಯಿಂದಾಗಿ ಕಾಂಪೌಂಡ್ ವಾಲ್ ಕುಸಿದಿದ್ದು, ವಾಹನ ನಿಲುಗಡೆಯ ಪಾರ್ಕಿಂಗ್ ಸ್ಥಳ ಸಂಪೂರ್ಣ ಜಲಾವೃತವಾಗಿತ್ತು.

ಕಾರು, ಟಿಟಿ ವಾಹನ ಜಖಂ

ದೀಪಾಂಜಲಿ ನಗರದ ವ್ಯಾಪ್ತಿಯಲ್ಲಿಯಂತೂ ವರುಣ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಶುಕ್ರವಾರದ ಗಾಳಿ ಮಳೆಯ ರೌದ್ರಾವತಾರಕ್ಕೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ವಿದ್ಯುತ್ ಕಂಬ ಧರೆಗುರುಳಿವೆ. ಜತೆಗೆ ಹೆಮ್ಮರವೊಂದು ಉರುಳಿ ಬಿದ್ದ ಕಾರಣ ಮನೆ ಮುಂದೆ ನಿಲ್ಲಿಸಿದ್ದ 2 ಕಾರು, ಒಂದು ಟಿಟಿ ಜಖಂಗೊಂಡಿದೆ. ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಮಳೆ ಅವಾಂತರ ನೋಡಿದ ಜನರು ಕಂಗಾಲಾಗಿದ್ದಾರೆ. ನಾಗರಭಾವಿಯ ಗೋವಿಂದ ರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾರಿನ ಮೇಲೆ ಮರದ ಬೃಹತ್ ಕೊಂಬೆ ಬಿದ್ದು ಹಾನಿಯಾಗಿದೆ.

ಪೆಟ್ರೋಲ್‌ ಬಂಕ್‌ ಜಲಾವೃತ

ಇತ್ತ ಆರ್‌.ಆರ್‌.ನಗರದಲ್ಲಿಯೂ ಮಳೆಯ ಅಬ್ಬರ ಕಂಡು ಬಂತು. ವರುಣಾರ್ಭಟಕ್ಕೆ ಇಲ್ಲಿನ ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ ಜಲಾವೃತಗೊಂಡಿತ್ತು. ಪೆಟ್ರೋಲ್ ಟ್ಯಾಂಕ್ ಒಳಗಡೆಯೇ ನೀರು ನುಗ್ಗಿ ತೊಂದರೆ ಎದುರಾಗಿದೆ. ರಾತ್ರಿ ಸಂಪೂರ್ಣ ಜಲಾವೃತವಾಗಿದ್ದ ಪೆಟ್ರೋಲ್ ಬಂಕ್‌ ಅನ್ನು ಸದ್ಯ ಸಿಬ್ಬಂದಿ ಶುಚಿಗೊಳಿಸುತ್ತಿದ್ದಾರೆ. ಪೆಟ್ರೋಲ್ ಸಿಗದೆ ಬಂಕ್ ಬಳಿ ಬಂದು ವಾಹನ ಸವಾರರು ವಾಪಾಸ್ ಹೋಗುತ್ತಿದ್ದಾರೆ.

ಮೈಸೂರಿನಲ್ಲಿಯೂ ಹಾನಿ

ಮೈಸೂರಿನಲ್ಲಿಯೂ ಬಿರುಗಾಳಿ ಸಹಿತ ಸುರಿದ ಮಳೆ ವಿವಿಧೆಡೆ ಹಾನಿ ಉಂಟು ಮಾಡಿದೆ. ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಬೃಹತ್ ಗಾತ್ರದ ಅರಳಿ ಮರ ಉರುಳಿ ನಾಲ್ಕು ಮನೆಗಳಿಗೆ ಹಾನಿಯಾಗಿವೆ. ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು, ಜಾನುವಾರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ನೆಲ ಕಚ್ಚಿವೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾನಿಯಾಗಿರುವ ಮನೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನೂ ಕೆಲವು ದಿನ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Continue Reading

ಬೆಂಗಳೂರು ಗ್ರಾಮಾಂತರ

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Murder case : ತಡರಾತ್ರಿ ಯುವಕನ ಮೇಲೆ ದಾಳಿ ಮಾಡಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Murder case in Bengaluru rural
Koo

ದೊಡ್ಡಬಳ್ಳಾಪುರ : ಹಳೆ ದ್ವೇಷಕ್ಕೆ ಯುವಕನ ಕತ್ತು ಕೊಯ್ದು ಬರ್ಬರವಾಗಿ ಕೊಲೆ (Murder case) ಮಾಡಲಾಗಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ ನಡುರಸ್ತೆಯಲ್ಲಿ ಯುವಕರ ಗುಂಪುವೊಂದು ಹೇಮಂತ್‌ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಘಟನೆ ನಡೆದಿದೆ. ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್‌ನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೇಮಂತ್‌ಗೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಶವ ಎಸೆದು ಎಸ್ಕೇಪ್‌ ಆಗಿದ್ದಾರೆ. ಶನಿವಾರ ಮುಂಜಾನೆ ಸ್ಥಳೀಯರು ವಾಕಿಂಗ್ ಮಾಡುವಾಗ ಮೃತ ದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

ಸೋಮವಾರಪೇಟೆ: ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ಈತ ರುಂಡ ಹಾಗೂ ಕೋವಿಯೊಂದಿಗೆ ಪರಾರಿಯಾಗಿದ್ದ. ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

Prajwal Revanna Case: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ. ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಈ ತಂಡದಲ್ಲಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ.

ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ತಂಡವನ್ನು ರಚಿಸಲಾಗಿದೆ. ಯೂರೋಪ್ ಬಳಿ ಇರುವ ಹಂಗೇರಿ ತಲುಪಲಿರುವ ಕರ್ನಾಟಕ ಪೊಲೀಸರು ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ (MLAT) ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಪ್ರಜ್ವಲ್ ಬಳಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಇರುವುದರಿಂದ ಅವರು ಕೆಲವು ದೇಶಗಳಿಗೆ ವೀಸಾ ಇಲ್ಲದೆ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಎಸ್ಐಟಿ ವಿಶೇಷ ತನಿಖಾ ದಳ ಮಾಹಿತಿ ಕಲೆ ಹಾಕಿದೆ. ಒಂದು ವೇಳೆ ಇಂಡಿಯನ್ ಎಂಬಸ್ಸಿ ಕಡೆಯಿಂದ ಜರ್ಮನಿ ಎಂಬಸ್ಸಿ ಜತೆಗೆ ಮಾತುಕತೆ ನಡೆದರೆ ಖಂಡಿತವಾಗಲೂ ಪ್ರಜ್ವಲ್ ರೇವಣ್ಣ ಎಸ್ಐಟಿ ತೆಕ್ಕೆಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೆ ಚಿಂತನೆ

ಈಗಾಗಲೇ ಪ್ರಜ್ವಲ್ ಪತ್ತೆಗೆ ಬ್ಲ್ಯೂ ಕಾರ್ನರ್‌ ನೋಟಿಸ್ ಹೊರಡಿಸಿದ ಅಧಿಕಾರಿಗಳು ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೆ ಚಿಂತನೆ ನಡೆಸಿದ್ದಾರೆ. ಇಂದು ಅಥವಾ ನಾಳೆ ರೆಡ್ ಕಾರ್ನರ್ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಯುತ್ತಿದೆ. ಕೇಂದ್ರ ಗೃಹ ಸಚಿವಾಲಯದ ಜತೆ ಚರ್ಚೆ ನಡೆಸಿ ಇಂಟರ್ ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಸರ್ವ್ ಮಾಡಲಾಗುತ್ತದೆ.

ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾದರೆ ಏನಾಗುತ್ತೆ?

ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಮನವಿ ಮಾಡಲು ಎಸ್‌ಐಟಿ ಚಿಂತನೆ ನಡೆಸಿದೆ. ಇದಕ್ಕೆ ಮೊದಲು ಸಿಬಿಐ ಸಂಸ್ಥೆಯು ಇಂಟರ್‌ಪೋಲ್‌ ಅನ್ನು ಸಂಪರ್ಕಿಸಿ ರೆಡ್ ಕಾರ್ನರ್ ನೋಟಿಸ್‌ಗೆ ಬೇಡಿಕೆ ಸಲ್ಲಿಸಬೇಕು. ರೆಡ್ ಕಾರ್ನರ್ ನೋಟಿಸ್ ಜಾರಿಯಾದರೆ, ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧಿಸಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತಾರೆ. ನಂತರ ಇಲ್ಲಿನ ಪೊಲೀಸರು ಹೋಗಿ ಆತನನ್ನು ಕರೆತರುತ್ತಾರೆ. ಹೀಗಾಗಿ ಪ್ರಜ್ವಲ್‌ ವಿರುದ್ಧ ಈ ಕ್ರಮಕ್ಕೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

ಬ್ಲ್ಯೂ ಕಾರ್ನರ್‌ ನೋಟಿಸ್‌ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತದೆ. ಆರೋಪಿ ಯಾವ ದೇಶದಲ್ಲಿ ಇದ್ದಾರೆ? ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನಗಳನ್ನು ಈ ಮೂಲಕ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟಿಸ್‌ ನೀಡಲಾಗಿದ್ದು, ಇದು ಸುಳಿವು ಪಡೆಯಲು ಮುಖ್ಯವಾಗಿದೆ. ಆದರೆ ಇದರಿಂದ ಪ್ರಜ್ವಲ್‌ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡಲು ಸಿದ್ಧತೆ ನಡೆಸಲಾಗಿದೆ.

Continue Reading
Advertisement
Gold Rate Today
ಕರ್ನಾಟಕ7 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Heavy Rain
ಕರ್ನಾಟಕ17 mins ago

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Murder case in Bengaluru rural
ಬೆಂಗಳೂರು ಗ್ರಾಮಾಂತರ30 mins ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Narendra Modi
ದೇಶ32 mins ago

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Prajwal Revanna Case
ಕರ್ನಾಟಕ36 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

K S Rajanna
ದೇಶ2 hours ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ2 hours ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ2 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ2 hours ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ3 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ21 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ22 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ24 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌