ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಸುಳ್ಳು ದೂರು ನೀಡಲು ಪಿತೂರಿ ಆರೋಪದಲ್ಲಿ (Murugha seer) ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದ ಆರೋಪಿಗಳಾದ ಎಸ್.ಕೆ.ಬಸವರಾಜನ್, ಸೌಭಾಗ್ಯ ಬಸವರಾಜನ್ ದಂಪತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮುರುಘಾಶ್ರೀ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿ ತಾಯಿ ಜತೆಗಿನ ಮೊಬೈಲ್ ಸಂಭಾಷಣೆ ಆಧರಿಸಿ ಎಫ್ಐಆರ್ ದಾಖಲಿಸಿದ್ದಾರೆ. ಮುರುಘಾಶ್ರೀ ವಿರುದ್ಧದ ಆರೋಪ ಸುಳ್ಳೆಂದು ಸಂಭಾಷಣೆಯಲ್ಲಿಲ್ಲ. ಆದರೆ, ಶ್ರೀಗಳ ವಿರುದ್ಧ ದೂರು ನೀಡಲು ಪ್ರಚೋದಿಸಿದ ಆರೋಪವನ್ನು ಹೊರಿಸಿ, ಅನಗತ್ಯವಾಗಿ ಪೊಲೀಸರು ನಮ್ಮನ್ನು ಬಂಧಿಸಿದ್ದರು. ತಮ್ಮ ಮೇಲಿನ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಹೀಗಾಗಿ ಎಫ್ಐಆರ್ ರದ್ದು ಮಾಡಬೇಕು ಎಂದು ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಎಸ್. ಕೆ. ಬಸವರಾಜನ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಮುರುಘಾಶ್ರೀ ಬಂಧನವಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀಗಳ ವಿರುದ್ಧ ಸುಳ್ಳು ದೂರು ದಾಖಲಿಸಲು ಷಡ್ಯಂತ್ರ ರೂಪಿಸಿದ ಆರೋಪದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್. ಕೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿದ್ದರು, ನಂತರ ಇವರಿಬ್ಬರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.
ಇದನ್ನೂ ಓದಿ | Leopard attack | ಮೈಸೂರು ನಗರಕ್ಕೇ ಬಂತು ಚಿರತೆ ದಂಡು; CFTRI ಶಾಲೆ ಬಳಿ ರಾತ್ರಿ ಸಂಚಾರ ಕಂಡು ಬೆಚ್ಚಿದ ಸಿಬ್ಬಂದಿ