ಚಿತ್ರದುರ್ಗ: ಮುರುಘಾಶ್ರೀ ವಿರುದ್ಧದ 2ನೇ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಜ.10ರಂದು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್‌ಶೀಟ್ (Murugha Seer) ಸಲ್ಲಿಸಿದ್ದಾರೆ.
ಮಠದ ಹಾಸ್ಟೆಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ 2022ರ ಅ.13ರಂದು 2ನೇ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಇದನ್ನೂ ಓದಿ | Robbery Case: ಸಾರಿಗೆ ಬಸ್‌ನಲ್ಲಿ ಚಾಕು ತೋರಿಸಿ ಹಣ ದರೋಡೆ ಮಾಡಿದ್ದ ಎಂಟು ಆರೋಪಿಗಳ ಬಂಧನ
ಕೋರ್ಟ್‌ನಲ್ಲಿ ಚಾರ್ಜ್ ಶೀಟ್ ನಂಬರ್ ಆಗುವುದು ಬಾಕಿಯಿದೆ. ನಂಬರ್ ಅಧಿಕೃತವಾದ ಬಳಿಕ ಈ ಬಗ್ಗೆ ಪೊಲೀಸರು ಮಾಹಿತಿ ನೀಡುವ ಸಾಧ್ಯತೆ ಇದೆ. ಮೊದಲ ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಮಾಹಿತಿ ಸೋರಿಕೆಯಾಗಿದೆ ಎಂದು ಕೋರ್ಟ್ ತನಿಖಾಧಿಕಾರಿ ಡಿವೈಎಸ್ಪಿ ಅನಿಲ್‌ಗೆ ನೋಟಿಸ್ ನೀಡಿತ್ತು.