ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗಾಗಿ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ಕೇಳಲು ಪೊಲೀಸರು ಸಿದ್ಧತೆ ನಡೆಸಿದ್ದು, ಇಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ.
ಸದ್ಯ ಮುರುಘಾ ಶ್ರೀಗಳು 1ನೇ ಪೋಕ್ಸೋ ಕೇಸಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ಟೋಬರ್ 13ರಂದು 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕೋರ್ಟ್ ಅನುಮತಿ ಪಡೆದು ಮುರುಘಾ ಶ್ರೀಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಬೇಕಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ತನಿಖಾಧಿಕಾರಿ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಸ್ಥಳ ಮಹಜರು, ಮೆಡಿಕಲ್ ಟೆಸ್ಟ್ ನಡೆಯಬೇಕಿದೆ.
ಮುರುಘಾ ಶ್ರೀಗಳ ವಿಚಾರಣೆ ಬಳಿಕ ಇನ್ನುಳಿದ ಆರೋಪಿಗಳನ್ನೂ ಪೊಲೀಸ್ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆದಿದೆ. A2 ಲೇಡಿ ವಾರ್ಡನ್, A4 ಪರಮಶಿವಯ್ಯರನ್ನು ವಶಕ್ಕೆ ಪಡೆಯಲಿದ್ದಾರೆ. ಇವರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ A3 ಮಠದ ಉತ್ತರಾಧಿಕಾರಿ ಬಸವಾದಿತ್ಯ (17), A5 ಮುರುಘಾಶ್ರೀ ಸಹಾಯಕ ಮಹಾಲಿಂಗ, A6 ಅಡುಗೆಭಟ್ಟ ಕರಿಬಸಪ್ಪ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮೊದಲನೇ ಲೈಂಗಿಕ ದೌರ್ಜನ್ಯ ಕೇಸ್‌ನ ನಾಲ್ಕನೇ ಆರೋಪಿ ಅರೆಸ್ಟ್