ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ, ಆಕ್ಷೇಪಣೆ ಸಲ್ಲಿಸಲು ಪೊಲೀಸ್ ಇಲಾಖೆಯೂ ತಯಾರಿ ಮಾಡಿಕೊಳ್ಳುತ್ತಿದೆ.
ತನಿಖೆಯ ಹಂತದಲ್ಲಿ ಶ್ರೀಗಳಿಗೆ ಜಾಮೀನು ನೀಡಬಾರದು. ಜಾಮೀನು ದೊರೆತರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು. ಶ್ರೀಗಳು ಪ್ರಭಾವಿಯಾಗಿದ್ದು, ಸಾಕ್ಷಿ ನಾಶ ಮಾಡಬಹುದು. ಮಠ ಬಿಟ್ಟು ಬೇರೆ ಕಡೆ ತಲೆ ಮರೆಸಿಕೊಳ್ಳಬಹುದು. ಅಲ್ಲದೆ ಶ್ರೀಗಳ ವಿಚಾರಣೆ ಇನ್ನೂ ಮುಗಿದಿಲ್ಲ. ಸಾಂದರ್ಭಿಕ ಸಾಕ್ಷಿಗಳ ಆಧಾರದ ಮೇಲೆ ಈ ಪ್ರಕರಣ ಹೆಚ್ಚು ಅವಲಂಬಿತವಾಗಿದೆ. ಪ್ರಕರಣ ನಡೆದು ಸಾಕಷ್ಟು ದಿನ ಆಗಿರುವುದರಿಂದ ಟೆಕ್ನಿಕಲ್ ಸಾಕ್ಷಿಗಳನ್ನು ಪತ್ತೆ ಮಾಡಬೇಕು. ಹಾಗೇ ಬಯಾಲಜಿಕಲ್ ಸಾಕ್ಷಿಗಳನ್ನು ಪತ್ತೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು, ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ವಾದಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಇಂದು ಶ್ರೀಗಳ ಜಾಮೀನು ಅರ್ಜಿ ಸಲ್ಲಿಕೆ, ಕಸ್ಟಡಿಗೆ ಕೇಳಲಿದ್ದಾರೆ ಪೊಲೀಸರು