ಚಿತ್ರದುರ್ಗ: ಇಲ್ಲಿನ ಮುರುಘಾಮಠಕ್ಕೆ ಸೇರಿದ ಹಾಸ್ಟೆಲ್‌ನ ವಾರ್ಡನ್ ರಶ್ಮಿ ಅವರ ಮೇಲೆ ಅತ್ಯಾಚಾರ ಯತ್ನ ನಡೆಸಿದ ಮತ್ತು ಬ್ಲ್ಯಾಕ್‌ಮೇಲ್ ನಡೆಸಿದ ಆರೋಪ ಎದುರಿಸುತ್ತಿದ್ದ ಮಾಜಿ ಶಾಸಕ ಎಸ್.ಕೆ. ಬಸವರಾಜ್ ಮತ್ತು ಅವರ ಪತ್ನಿ ಸೌಭಾಗ್ಯ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮುರುಘಾ ಶ್ರೀಗಳ ವಿರುದ್ಧ ಮಠದ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾ ಶ್ರೀಗಳು, ಹಾಸ್ಟೆಲ್ ವಾರ್ಡನ್ ರಶ್ಮಿ ಸೇರಿದಂತೆ ಐವರ ವಿರುದ್ಧ ದೂರು ದಾಖಲಿಸುತ್ತಿದ್ದಂತೆಯೇ ಇತ್ತ ವಾರ್ಡನ್ ರಶ್ಮಿ ಅವರು ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ. ಬಸವರಾಜ್ ವಿರುದ್ಧ ಅತ್ಯಾಚಾರ ಯತ್ನ ಮತ್ತು ಅವರ ಪತ್ನಿ, ಮಾಜಿ ಜಿಪಂ ಅಧ್ಯಕ್ಷೆ ಸೌಭಾಗ್ಯ ಅವರ ವಿರುದ್ಧ ಬ್ಲ್ಯಾಕ್‌ಮೇಲ್ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಹಾಸ್ಟೆಲ್‌ನಲ್ಲಿ ಸ್ಥಳ ಮಹಜರು ನಡೆದಿದೆ. ತನಿಖಾಧಿಕಾರಿಗಳು ವಾರ್ಡನ್ ರಶ್ಮಿ ಅವರ ಸಮ್ಮುಖದಲ್ಲಿ ನಡೆದಿರುವ ವಿದ್ಯಮಾನಗಳ ಮಾಹಿತಿಯನ್ನು ಪಡೆದಿದ್ದರು.
ಈ ನಡುವೆ ಬಸವರಾಜ್ ಮತ್ತು ಸೌಭಾಗ್ಯ ದಂಪತಿ ತಾವು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುವುದಾಗಿ ಹೇಳಿ ಅನುಮತಿ ಕೋರಿದರು. ಆದರೆ ಅರ್ಜಿದಾರರಾದ ವಾರ್ಡನ್ ರಶ್ಮಿ ಪರ ವಕೀಲರು ಈ ರೀತಿ ಅವಕಾಶ ನೀಡಬಾರದು ಎಂದು ವಿನಂತಿಸಿದರು. ಈ ಹೀಗಾಗಿ ಕೋರ್ಟ್ ಅವರನ್ನು ಖುದ್ದಾಗಿ ಹಾಜರಾಗುವಂತೆ ಸೂಚಿಸಿತು. ಬಳಿಕ ಬಸವರಾಜನ್ ಮತ್ತು ಸೌಭಾಗ್ಯ ದಂಪತಿ ಕೋರ್ಟ್‌ಗೆ ಹಾಜರಾದರು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ಒಪ್ಪಿತು.
ಇದನ್ನೂ ಓದಿ| ಮುರುಘಾಶ್ರೀ ಪ್ರಕರಣ| ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ, ಮುಂದೇನು?