ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಚಿತ್ರದುರ್ಗ ಕೇಂದ್ರ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ 2261 ಕೈದಿ ನಂಬರ್ ನೀಡಲಾಗಿದೆ.
ಮುರುಘಾಶ್ರೀಗಳನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದಕ್ಕೂ ಮುನ್ನ ಚಳ್ಳಕೆರೆ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ಹಾಗೂ ಚಿತ್ರದುರ್ಗದಲ್ಲಿ ವೈದ್ಯಕೀಯ ತಪಾಸಣೆ ನಡೆದಿತ್ತು. ಇದೀಗ ಶ್ರೀಗಳು ವಿಚಾರಣಾಧೀನ ಕೈದಿ ನಂಬರ್ 2261 ಆಗಿದ್ದು, ಇಂದು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಶ್ರೀಗಳಿಗೆ ಜಾಮೀನು ನೀಡದಿರಲು ಪೊಲೀಸರ ಆಕ್ಷೇಪವೇನು?