ಚಿತ್ರದುರ್ಗ: ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಅಧ್ಯಕ್ಷ ಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದು ಸಮಿತಿ ಗೌರವ ಕಾರ್ಯದರ್ಶಿ ಪ್ರೊ.ಕೆ.ಇ ರಾಧಾಕೃಷ್ಣ ತಿಳಿಸಿದ್ದಾರೆ.
ಮಲ್ಲಾಡಿಹಳ್ಳಿಯ ಆಶ್ರಮದ ಅಧೀನದಲ್ಲಿರುವ ಮೈಸೂರಿನ ಎಂಎಎಸ್‌ವಿಎಸ್ ಗುರುಕುಲ ಕಾಲೇಜಿನಲ್ಲಿ ಶನಿವಾರ ನಡೆದ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ ಸಭೆಯಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಸಮಿತಿ ಅಧ್ಯಕ್ಷ ಸ್ಥಾನದಿಂದ ಕೈಬಿಡುವ ಜತೆಗೆ ಸದಸ್ಯತ್ವ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು ಶ್ರೀಗಳ ಲೈಂಗಿಕ ಶಕ್ತಿ ಪರೀಕ್ಷೆ