ಬೆಂಗಳೂರು: ಉಗ್ರಂ, ಮಫ್ತಿ, ಕೆಜಿಎಫ್ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರು ಗಾಯಕರಾಗಿ, ನಿರ್ಮಾಪಕರಾಗಿಯೂ ಸ್ಯಾಂಡಲ್ವುಡ್ಗೆ ಚಿರಪರಿತ. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರು ಅವರ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.
ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮ್ಸ್ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಉಳಿದಂತೆ ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿ ಹಲವರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ | ನೋಡಲೇಬೇಕಾದ ಸಿನಿಮಾ : AYOTHI: ಹೀರೋಯಿಸಂಗೆ ಹೊಸ ವಿವರಣೆ ನೀಡಿದ ಚಿತ್ರ
ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕೋ ಡೈರೆಕ್ಟರ್ ಆಗಿ ವೀರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.