ಕೋಲಾರ: ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಮುಸ್ಲಿಂ ಸಮುದಾಯ ಕೆಲಸ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರುವ ಸವಲತ್ತುಗಳನ್ನು ಅನುಭವಿಸಿ ಮೋಸ ಮಾಡಿದ್ದಾರೆ ಎಂದು ಸಂಸದ ಮುನಿಸ್ವಾಮಿ ಮುಸ್ಲಿಂ ಸಮುದಾಯದ ವಿರುದ್ಧ ಹರಿಹಾಯ್ದಿದ್ದು, ನೀವು ನಮ್ಮ ವಿರುದ್ಧವಾಗಿ ಕೆಲಸ ಮಾಡಿದ್ದೀರ. ಹೀಗಾಗಿ ನಾವು ಇನ್ಮುಂದೆ ನಿಮ್ಮ ವಿರುದ್ಧವಾಗಿ ಮಾಡುತ್ತೇವೆ. ಇದರಲ್ಲಿ ಎರಡು ಮಾತಿಲ್ಲ ಎಂದು ಕಿಡಿಕಾರಿದ್ದಾರೆ.
ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ವತಿಯಿಂದ ಏರ್ಪಡಿಸಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ವಾಗ್ದಾಳಿ ನಡೆಸಿದ ಸಂಸದ ಎಸ್. ಮುನಿಸ್ವಾಮಿ, ನಮ್ಮ ವಿರುದ್ಧವಾಗಿ ನೀವು ಕೆಲಸ ಮಾಡಿದ್ದಕ್ಕೆ, ಈಗ ನಾವೂ ಸಹ ನಿಮ್ಮ ವಿರುದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಎಚ್ಚರಿಕೆಯನ್ನು ನೀಡುವ ಮೂಲಕ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಇದನ್ನೂ ಓದಿ: Karnataka CM: ಕರ್ನಾಟಕ ಜನರ ತೀರ್ಪು ದೇಶಕ್ಕೇ ಹೊಸ ಆಶಾಕಿರಣ; ಬೆಂಗಳೂರಿನಲ್ಲಿ ಮೆಹಬೂಬಾ ಮುಫ್ತಿ ಹೇಳಿಕೆ
ನಿಮ್ಮ ವಿರುದ್ಧವಾಗಿ ನಾವು ಸಹ ನಡೆದುಕೊಳ್ಳುತ್ತೇವೆ. ಅದೇನು ಮಾಡುತ್ತೀರೋ ಮಾಡಿಕೊಳ್ಳಿ. ನನ್ನ ಮೇಲೆ ಕೇಸ್ ಹಾಕುತ್ತೀರಾ? ಹಾಕಿಕೊಳ್ಳಿ, ನೋ ಪ್ರಾಬ್ಲಂ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಇವತ್ತಲ್ಲ ನಾಳೆ ನಿಮಗೆ ಸತ್ಯದ ಅರಿವು ಆಗುತ್ತದೆ ಎಂದು ಅವರು ಹೇಳಿದ್ದಾರೆ.
ಇವತ್ತಲ್ಲ ನಾಳೆ ನಿಮಗೆ ಸತ್ಯದ ಅರಿವು ಆಗೇ ಆಗುತ್ತದೆ. ಅದರಲ್ಲಿ ಯಾವುದೇ ಸಂಶಯ ಬೇಡ. ಕಾಂಗ್ರೆಸ್‌ಗೆ ಮತ ಹಾಕಿರುವುದಕ್ಕೆ ನೀವು ಅನುಭವಿಸುತ್ತೀರಿ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್‌ನವರು ಶನಿವಾರ ಸಂಪುಟ ಸಭೆಯಲ್ಲಿ ಗ್ಯಾರಂಟಿ ಜಾರಿ ಬಗ್ಗೆ ಒಪ್ಪಿಗೆ ಪಡೆದಿದ್ದಾರೆ. ಈಗಾಗಲೇ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆಜ್ಞೆಗಳನ್ನು ಹೊರಡಿಸಿದ್ದಾರೆ. ನಾನು ಅನಗತ್ಯವಾಗಿ ಟೀಕೆ ಟಿಪ್ಪಣಿ ಮಾಡಲು ಹೋಗಲ್ಲ. ಅವರು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ವಿಶ್ವಾಸ ನನಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಈಗಾಗಲೇ ಅವೆಲ್ಲ ಭರವಸೆಗಳನ್ನು ಈಡೇರಿಸುವುದಾಗಿ ಅವರು ಹೇಳಿದ್ದಾರೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ.
ಇದನ್ನೂ ಓದಿ: UR Sabhapati: ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನ; ಕರಾವಳಿ ಭಾಗದ ಪ್ರಭಾವಿ ನಾಯಕ ಇನ್ನಿಲ್ಲ
ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಅವರು ರೀತಿಯ ಹೇಳಿಕೆ ಕೊಟ್ಟಿರೋದು ಸ್ವಾಭಾವಿಕವಾಗಿದೆ. ಇಂಥ ಹೇಳಿಕೆಗಳ ಬಗ್ಗೆ ನಾವು ಚಿಂತೆ ಮಾಡುವುದಿಲ್ಲ. ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ, ನಾವು ಚಿಂತೆ ಮಾಡಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.