Site icon Vistara News

Moral Policing: ಹಿಂದು ಯುವತಿಗೆ ಲವ್‌ ಪ್ರಪೋಸ್‌ ಮಾಡ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

Moral policing

ಚಿಕ್ಕಮಗಳೂರು: ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕ ಮತ್ತು ಅತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿರುವ ಘಟನೆ (Moral Policing) ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಯುವತಿಗೆ ಚಾಕೋಲೆಟ್ ನೀಡಿ‌ ಪ್ರೀತಿ ನಿವೇದನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆದಿದೆ.

ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವತಿಗೆ ಲವ್‌ ಪ್ರಪೋಸ್‌ ಮಾಡುತ್ತಿದ್ದಾಗ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಹಲ್ಲೆ ನಡೆಸಿದವರು ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರು ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಮುನೀರ್, ಸಮೀರ್‌ನನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ

ಇದನ್ನೂ ಓದಿ | Killer CEO: ತಲೆದಿಂಬಿನಿಂದ ಉಸಿರುಗಟ್ಟಿಸಿ ಮಗನನ್ನೇ ಕೊಂದ ಸಿಇಒ; ವೈದ್ಯರಿಂದ ಸ್ಫೋಟಕ ಮಾಹಿತಿ

ಬನ್ನೇರುಘಟ್ಟದ ಬೆಟ್ಟದ ಮೇಲೆ ಕೈ-ಕಾಲು ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ನಗರದ ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹವು (Dead Body Found ) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಿದ ನಶೆಯಲ್ಲಿ ಬೆಟ್ಟದಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ವಾರದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಒಂದು ಕೈ ಮತ್ತು ಕಾಲನ್ನು ಕಾಡು ಪ್ರಾಣಿಗಳು ಎಳೆದೊಯ್ದಿವೆ.

ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ. ಮೃತ ವ್ಯಕ್ತಿ ಯಾರು? ಈ ಸಾವು ಆಕಸ್ಮಿಕವೋ ಅಥವಾ ಕೊಲೆಯೊ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಆಂಬ್ಯುಲೆನ್ಸ್‌

ಬೆಂಗಳೂರು:‌ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಪಟ್ಟಣದ ಬೈಚಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೋಗಿಯನ್ನು ಪಿಕಪ್ ಮಾಡಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ | Lokayukta Raid : ಆರು ಭ್ರಷ್ಟರ ಮೇಲೆ ಲೋಕಾ ದಾಳಿ ; ಕೋಟಿ ಕೋಟಿ ಹಣ, ದುಬಾರಿ ಮದ್ಯ ವಶ!

ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್‌ ಮೊದಲು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ, ಪಲ್ಟಿ ಹೊಡೆದಿದೆ. ಏರ್‌ಪೋರ್ಟ್‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version