Site icon Vistara News

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ

Hubli

Muslim Man Thrashes Hindu Girl In Hubballi

ಹುಬ್ಬಳ್ಳಿ: ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ (Neha Murder Case) ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ನೇಹಾ ಹಿರೇಮಠ ಅವರನ್ನು ಕೊಲೆಗೈದ ಫಯಾಜ್‌ (Fayaz) ಎಂಬುವನನ್ನು ಗಲ್ಲಿಗೇರಿಸಬೇಕು, ಎನ್‌ಕೌಂಟರ್‌ ಮಾಡಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರಕರಣದ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರವು ಸಿಐಡಿ (CID) ತನಿಖೆಗೆ ವಹಿಸಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ (Hubballi) ಮತ್ತೊಬ್ಬ ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ಹಲ್ಲೆ ನಡೆಸಿದ್ದಾನೆ.

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಫ್ತಾಬ್‌ ಶಿರಹಟ್ಟಿ ಎಂಬ ಯುವಕನು ಪೂರ್ಣಿಮಾ ಎನ್ನುವ ಹಿಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಕುರಿತು ಯುವತಿಯು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಹಿಂದು ಯುವತಿ ಮೇಲೆ ಮುಸ್ಲಿಂ ಯುವಕನು ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೇಹಾ ಕೇಸ್‌ ಸಿಐಡಿ ತನಿಖೆಗೆ

ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಹೇಳಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಲವ್‌ ಜಿಹಾದ್‌ ಆರೋಪವೂ ಕೇಳಿಬಂದಿವೆ. ಅದರಲ್ಲೂ, ನೇಹಾ ಹಿರೇಮಠ ಪ್ರಕರಣವು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಹಾಗಾಗಿ, ರಾಜ್ಯ ಸರ್ಕಾರವು ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

9 ಸಲ ಅಲ್ಲ 14 ಬಾರಿ ಇರಿದು ಕೊಂದ ಫಯಾಜ್

ವಿದ್ಯಾರ್ಥಿನಿ ನೇಹಾಳಿಗೆ ಪಾಗಲ್‌ ಫಯಾಜ್‌ 9 ಬಾರಿ ಅಲ್ಲ, 14 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಇದಕ್ಕೂ ಮೊದಲು, ನೇಹಾ ಹಿರೇಮಠ್‌ಗೆ ಫಯಾಜ್‌ 9 ಬಾರಿ ಚಾಕು ಇರಿದು ಕೊಲೆ ಮಾಡಿದ್ದ ಎಂಬುದಾಗಿ ಹೇಳಲಾಗಿತ್ತು. ಆದರೆ, ಈಗ 14 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾಣೆ ಎಂದು ಮರಣೋತ್ತರ ವರದಿ ತಿಳಿಸಿದೆ. ಏಪ್ರಿಲ್‌ 19ರಂದು ಬಿವಿಬಿ ಕಾಲೇಜು ಆವರಣದಲ್ಲಿ ಭೀಕರವಾಗಿ ಕೊಲೆ ನಡೆದಿತ್ತು.

ಇದನ್ನೂ ಓದಿ: Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆಯನ್ನು ಖಂಡಿಸಿ, ಹಿಂದೂ ಸಂಘಟನೆಗಳಿಂದ ಮನವಿ

Exit mobile version