Site icon Vistara News

Muslim Quota Issue : ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರಿಂ ಕೋರ್ಟ್‌ ತಡೆ

supreme court Ballari mines

ನವ ದೆಹಲಿ: ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಮುಸ್ಲಿಮ್ ಸಮುದಾಯಕ್ಕೆ ನೀಡಲಾಗಿದ್ದ ಶೇ.4 ಮೀಸಲು ರದ್ದು (Muslim Quota Issue) ಮಾಡಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ (Supreme Court) ಮಂಗಳವಾರ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಮುಂದಿನ ವಿಚಾರಣೆಯನ್ನು ಮೇ. 9 ಕ್ಕೆ ನಿಗದಿಪಡಿಸಲಾಗಿದೆ. ಕರ್ನಾಟಕದಲ್ಲಿ ಒಬಿಸಿ ಕೋಟಾದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಶೇ.4 ಮೀಸಲಾತಿ ಜಾರಿಯಲ್ಲಿತ್ತು. ಕಳೆದ ಮಾರ್ಚ್‌ 27 ರಂದು ಕರ್ನಾಟಕ ಸರ್ಕಾರವು ಮೀಸಲು ರದ್ದುಪಡಿಸಿ, ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ ಶೇ.2 ಮೀಸಲು ಹೆಚ್ಚಿಸಿತ್ತು.

ರಾಜ್ಯದಲ್ಲಿ ಮುಸ್ಲಿಮರ ಕೋಟಾವನ್ನು ರದ್ದುಗೊಳಿಸಿದ ಸರ್ಕಾರದ ಆದೇಶವನ್ನು ಪರಿಶೀಲಿಸಿದರೆ, ರದ್ದು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಅಡಿಪಾಯವು ಅಸ್ಥಿರ ಮತ್ತು ದೋಷಪೂರಿತವಾಗಿದೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿಯೇ ಹೇಳಿತ್ತು. ಅಲ್ಲದೆ, ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಮಂಗಳವಾರ ರಾಜ್ಯ ಸರ್ಕಾರ ನೀಡಿದ ವಿವರಣೆಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದ್ದರು. ಕಳೆದ ಮಾರ್ಚ್‌ 27 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಎಲ್‌. ಗುಲಾಮ್‌ ರಸೂಲ್‌ ಮತ್ತು ಇತರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಮುಸ್ಲಿಮರ ಮೀಸಲನ್ನು ರದ್ದು ಪಡಿಸಿದ್ದ ರಾಜ್ಯ ಸರ್ಕಾರ ಅವರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನುತೆಗೆದುಕೊಂಡಿತ್ತು.

ಇದನ್ನೂ ಓದಿ :Supreme Court: ಮುಸ್ಲಿಮ್ ಸಮುದಾಯದ ಶೇ.4 ಮೀಸಲು ರದ್ದು ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

Exit mobile version