ಬೆಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಉದ್ವಿಗ್ನ ವಾತಾವರಣ ಇರುವಂತೆಯೇ ಸುರತ್ಕಲ್ನಲ್ಲಿ ಮುಸ್ಲಿಂ ಯುವಕನ ಹತ್ಯೆ ಗುರುವಾರ ರಾತ್ರಿ ನಡೆದಿದೆ.
ಸುರತ್ಕಲ್ನ ಫಾಜಿಲ್ ಎಂಬಾತನೇ ಮೃತ ದುರ್ದೈವಿ. ಮಂಗಳೂರಿನ ಹೊರವಲಯದ ಸುರತ್ಕಲ್ನ ಮಂಗಳಪಾದೆ ನಿವಾಸಿಯಾದ ಫಾಜಿಲ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಬಟ್ಟೆ ಅಂಗಡಿಯನ್ನು ಬಂದ್ ಮಾಡುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಫಾಜಿಲ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.