SC ST Reservation: 2B ಪ್ರವರ್ಗ ಹಿಂತೆಗೆತಕ್ಕೆ ಸಿಡಿದ ಮುಸ್ಲಿಮರು; ರಾಜ್ಯದ ಹಲವು ಕಡೆ ಬೃಹತ್‌ ಪ್ರತಿಭಟನೆ - Vistara News

ಕರ್ನಾಟಕ

SC ST Reservation: 2B ಪ್ರವರ್ಗ ಹಿಂತೆಗೆತಕ್ಕೆ ಸಿಡಿದ ಮುಸ್ಲಿಮರು; ರಾಜ್ಯದ ಹಲವು ಕಡೆ ಬೃಹತ್‌ ಪ್ರತಿಭಟನೆ

2B category: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಪ್ರವರ್ಗದಡಿ ಇದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿರುವ ಕ್ರಮವನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ರಾಜ್ಯದ ಹಲವು ಕಡೆ ಪ್ರತಿಭಟನೆಗೆ ಇಳಿದಿದ್ದಾರೆ. ಅಲ್ಲದೆ, ಈ ಹಿಂದಿನ ಮೀಸಲಾತಿ ಪದ್ಧತಿಯೇ ಇರಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Muslims protesting for 2B category withdrawal Massive protests in many parts of the state SC ST Reservation updates
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಸ್‌ಸಿ-ಎಸ್‌ಟಿ ಮೀಸಲಾತಿ (SC ST Reservation) ಜಾರಿಯಲ್ಲಿ ಒಳ ಮೀಸಲಾತಿ ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಎಸ್‌ಸಿ ಸಮುದಾಯದ ಒಳಮೀಸಲಾತಿಗೆ ಬಂಜಾರ ಸಮುದಾಯದವರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಒಳ ಮೀಸಲಾತಿ ಮಾಡುವ ವೇಳೆ ಮುಸ್ಲಿಂ ಸಮುದಾಯಕ್ಕೆ ಇದ್ದ 2ಬಿ (2B) ಪ್ರವರ್ಗವನ್ನು ತೆಗೆದು ಹಾಕಿರುವ ಸಂಬಂಧ ಮುಸ್ಲಿಂ ಸಮುದಾಯದವರು ತಿರುಗಿಬಿದ್ದಿದ್ದು, ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಹಳೇ ಮೀಸಲಾತಿ ಪದ್ಧತಿಯೇ ಜಾರಿಯಲ್ಲಿರಲಿ ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮುಸ್ಲಿಮರ ಆಕ್ರೋಶ

ಬೆಳಗಾವಿ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಪ್ರವರ್ಗದಡಿ ಇದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ವತಿಯಿಂದ ಚೆನ್ನಮ್ಮ ‌ವೃತ್ತದಿಂದ‌ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ. ತಕ್ಷಣವೇ ಸಚಿವ ಸಂಪುಟ ‌ಸಭೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: NCERT: ಹೊಸ ಶಿಕ್ಷಣ ನೀತಿ ಅನುಸಾರ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಪರಿಷ್ಕರಣೆ, ಮುಂದಿನ ವರ್ಷದಿಂದಲೇ ಜಾರಿ

ಚಿತ್ರದುರ್ಗದಲ್ಲಿ ರಸ್ತೆ ಮೇಲೇ ಕುರ್ಚಿ ಹಾಕಿ ಪ್ರತಿಭಟನೆ

ಚಿತ್ರದುರ್ಗ: ರಾಜ್ಯ ಸರ್ಕಾರವು 2ಬಿ ಮೀಸಲಾತಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಎಸ್‌ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ‌ಆಕ್ರೋಶವನ್ನು ಹೊರಹಾಕಲಾಗಿದೆ. ನಗರದ ಡಿಸಿ ಸರ್ಕಲ್ ಬಳಿ ಪ್ರತಿಭಟನೆಗೆ ವೇದಿಕೆಯನ್ನು ಹಾಕಲಾಗಿತ್ತು. ಆದರೆ, ಅನುಮತಿ ಪಡೆಯದ ಹಿನ್ನೆಲೆಯಲ್ಲಿ ವೇದಿಕೆಯನ್ನು ಬಳಸದಂತೆ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೆಲ ಕಾಲ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ಕಾರ್ಯಕ್ರಮದ ವೇದಿಕೆಯನ್ನು ತೆರವುಗೊಳಿಸಿದ್ದಾರೆ. ವೇದಿಕೆ ತೆರವು ಹಿನ್ನೆಲೆಯಲ್ಲಿ ರಸ್ತೆ ಮೇಲೆಯೇ ಕುರ್ಚಿ ಹಾಕಿ ಕುಳಿತ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆಯನ್ನು ಮುಂದುವರಿಸಿದರು.

Muslims protesting for 2B category withdrawal Massive protests in many parts of the state SC ST Reservation updates
ಮಂಡ್ಯದಲ್ಲಿ ಎಸ್‌ಡಿಪಿಐ ವತಿಯಿಂದ ಮುಸ್ಲಿಂರ ಪ್ರತಿಭಟನೆ

ಮಂಡ್ಯದಲ್ಲಿ ಮುಸ್ಲಿಮರ ಆಕ್ರೋಶ

ಮಂಡ್ಯ: ಮುಸ್ಲಿಂ ಸಮುದಾಯದವರಿಗೆ 2ಬಿ ಮೀಸಲಾತಿ ರದ್ದು ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಭುಗಿಲೆದ್ದ ಸಮುದಾಯದವರ ಆಕ್ರೋಶ ಭುಗಿಲೆದ್ದಿದೆ. ಎಸ್‌ಡಿಪಿಐ ನೇತೃತ್ವದಲ್ಲಿ ಹಲವು ಮುಸ್ಲಿಂ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಮುಸ್ಲಿಂ ಸಮುದಾಯದವರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದರು. ಹೊಸ ಮೀಸಲಾತಿ ಕ್ರಮವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Karnataka Elections : ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಮಂಜುನಾಥ್ ಕುನ್ನೂರುಗೆ ಇಲ್ಲ, ವಿನಯ ಕುಲಕರ್ಣಿಯೇ ಪಕ್ಕಾ?

ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಹೊಸಪೇಟೆಯಲ್ಲಿಯೂ ಮುಸ್ಲಿಂರ ಆಕ್ರೋಶ

ಒಳ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಹೊಸಪೇಟೆಯ ತಹಸೀಲ್ದಾರ್‌ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

UPSC Results 2023: ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆ ಹಾಳ್‌ ಗ್ರಾಮದ ಶಾಂತಪ್ಪ ಕುರುಬರ ಅವರು ಯುಪಿಎಸ್‌ ಪರೀಕ್ಷೆಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

VISTARANEWS.COM


on

UPSC Results 2023
Koo

ಬಳ್ಳಾರಿ: ಸೋಲೇ ಗೆಲುವಿನ‌ ಸೋಪಾನ ಎಂಬ ಗಾದೆ ಮಾತು‌ ಅಕ್ಷರಶಃ ಸತ್ಯ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ ಜಿಲ್ಲೆಯ ಯುಪಿಎಸ್‌ಸಿ ಅಭ್ಯರ್ಥಿ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗೆಣಿಕೆ ಹಾಳ್‌ ಗ್ರಾಮದ ಕಡೇಮನೆ ಶಿವಕುಮಾರಪ್ಪ ಹಾಗೂ ಜಡಿಯಮ್ಮ ಅವರ ಪುತ್ರ ಶಾಂತಪ್ಪ ಕುರುಬರ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ (UPSC Results 2023) 644 ರ‍್ಯಾಂಕ್‌ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇನ್ನು ಇವರು ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆಗಿರುವುದು ವಿಶೇಷವಾಗಿದೆ.

ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕು ವಿಷಯದಲ್ಲಿ ಫೇಲ್, ಬಿಎಸ್ಸಿಯಲ್ಲಿ ಫೇಲ್, ಕೆಎಎಸ್ ಪರೀಕ್ಷೆಯಲ್ಲಿ ಪ್ರಯತ್ನ ವಿಫಲ, ಯುಪಿಎಸ್ ಪರೀಕ್ಷೆಯಲ್ಲಿ ಆರಂಭದಲ್ಲಿ ವಿಫಲ. ಆದರೆ ನಿಶ್ಚಿಯಿಸಿದ ಗುರಿ ತಲುಪಲು ದೃಢ ನಿರ್ಧಾರ ಮತ್ತು ಪರಿಶ್ರಮದಿಂದ ಸಾಧ್ಯ ಎಂಬ ಸತ್ಯ ಅರಿತು, ಸೋಲನ್ನು ಸಾಧನೆಯ ಮೆಟ್ಟಿಲು ಮಾಡಿಕೊಂಡು ಶಾಂತಪ್ಪ ಕುರುಬರ ಸಕ್ಸಸ್ ಆಗಿದ್ದಾರೆ.

ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿದ್ದ ಇವರು ಬಳಿಕ ಉತ್ತೀರ್ಣರಾಗಿ, ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾರೆ. 2017ರಲ್ಲಿ ಪಿಎಸ್‌ಐ ಆಗಿ ನೇಮಕವಾಗುವ ಮೂಲಕ ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ್ದು, ಪ್ರಸ್ತುತ ಬೆಂಗಳೂರಿನ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಂಡಿರುವ ಇವರು ವಿದ್ಯಾಭ್ಯಾಸ ಮಾಡುವ ಬಡ ಮಕ್ಕಳಿಗೆ ವೈಯಕ್ತಿಕವಾಗಿ ನೆರವಾಗುವುದು, ಎಸ್ಸೆಸ್ಸೆಲ್ಸಿಯಲ್ಲಿ ರ‍್ಯಾಂಕ್‌ ಪಡೆದವರನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದು, ಕೋವಿಡ್‌ ವೇಳೆ ಶಾಲೆಗಳಿಗೆ ತೆರಳಿ ಪಾಠ ಮಾಡುವುದು ಸೇರಿದಂತೆ ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸೈ ಎನಿಸಿಕೊಂಡಿದ್ದರು.

ಇದನ್ನೂ ಓದಿ | UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

ಯುಪಿಎಸ್‌ಸಿ ಮಾಡಬೇಕೆಂಬ ಗುರಿಯನ್ನು ಬೆನ್ನತ್ತಿದ್ದ ಇವರು ಸತತ 7ನೇ ಬಾರಿ ಪರೀಕ್ಷೆ ಬರೆದಿದ್ದು, ಎರಡು ಬಾರಿ ಸಂದರ್ಶನ ಹಂತಕ್ಕೂ ತೆರಳಿದ್ದರೂ ಆಯ್ಕೆಯಾಗಿರಲಿಲ್ಲ. ನಂತರ ಪ್ರಯತ್ನವನ್ನು ಮುಂದುವರಿಸಿದ ಇವರು 8ನೇ ಬಾರಿಗೆ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್ ಪಡೆಯುವಲ್ಲಿ ಸಫಲರಾಗಿದ್ದಾರೆ. ಇವರು ದೆಹಲಿಯ ವಾಜಿರಾಮ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದಾರೆ.

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ಅಧ್ಯಯನ ಮಾಡಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಶಾಂತಪ್ಪ ಕುರುಬರ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಹೋಗಿ ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

Continue Reading

ಬೆಂಗಳೂರು

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

UPSC Results 2023: ಬೆಂಗಳೂರಿನ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ 18 ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

VISTARANEWS.COM


on

Universal Coaching Centre
Koo

ಬೆಂಗಳೂರು: ಮತ್ತೊಮ್ಮೆ ಮಗದೊಮ್ಮೆ ಯುನಿವರ್ಸಲ್ ಕೋಚಿಂಗ್ ಸೆಂಟರ್, ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC Results 2023) ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್‌ನ (Universal Coaching Centre) 18 ಅಭ್ಯರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ.

ಅಯಾನ್ ಜೈನ್ 16ನೇ ರ‍್ಯಾಂಕ್‌, ಅಭಿಮನ್ಯು ಮಲಿಕ್ 60ನೇ ರ‍್ಯಾಂಕ್‌, ಡಾ. ಪ್ರಶಾಂತ್. ಎಸ್ 78ನೇ ರ‍್ಯಾಂಕ್‌, ಶಾಶ್ವತ್ ಅಗರವಾಲ್ 121ನೇ ರ‍್ಯಾಂಕ್‌, ಪೌರವಿ ಗುಪ್ತ 213ನೇ ರ‍್ಯಾಂಕ್‌, ಸಮೀರ್ ಗೋಯೆಲ್-222 ರ‍್ಯಾಂಕ್‌, ಅಂಕುರ್ ಕುಮಾರ್ – 344ನೇ ರ‍್ಯಾಂಕ್‌, ಶಿವಶಕ್ತಿವೇಲ್.ಸಿ 340ನೇ ರ‍್ಯಾಂಕ್‌, ಶುಭಮ್ ರಘುವಂಶಿ 556ನೇ ರ‍್ಯಾಂಕ್‌, ಅಜಿತ್ ಸಿಂಗ್ ಖಡ್ಡ 563 ನೇ ರ‍್ಯಾಂಕ್‌, ಕಾರ್ತಿಕೇಯನ್ ಎ.ಕೆ 579ನೇ ರ‍್ಯಾಂಕ್‌, ಲಕ್ಷ್ಮಣ ಪ್ರತಾಪ್ ಚೌಧರಿ 597 ರ‍್ಯಾಂಕ್‌,
ದಿವ್ಯಾಂಶು ಪಾಲ್ ನಗರ 618 ರ‍್ಯಾಂಕ್‌, ಯಶವಂತ್ ನಾಯಕ್ 627ನೇ ರ‍್ಯಾಂಕ್‌, ಕಮಲೇಶ್ ಕುಮಾವತ್ 653ನೇ ರ‍್ಯಾಂಕ್‌, ಸಿದ್ದಾಂತ್ ಬೇಸ್ರ 800ನೇ ರ‍್ಯಾಂಕ್‌, ಸಂಪ್ರೀತ್ ಸಂತೋಷ್ – 868ನೇ ರ‍್ಯಾಂಕ್‌ ಹಾಗೂ ಕರ್ಮವೀರ್ ನಾರ್ವಾಡಿಯ 954ನೇ ರ‍್ಯಾಂಕ್‌ ಪಡೆದಿದ್ದಾರೆ.

ಇದನ್ನೂ ಓದಿ | UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ತಮ್ಮ ಅಭ್ಯರ್ಥಿಗಳ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. “ಇಂದು ಯುನಿವರ್ಸಲ್ ಸಂಸ್ಥೆ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿ ಬೆಳೆದು ನಿಲ್ಲಲು, ಈ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಕಾರಣ. ನಮ್ಮ ಸಂಸ್ಥೆಯ ತರಬೇತಿಯ ಶ್ರೇಷ್ಠತೆಗೆ ಇದು ಒಂದು ಉದಾಹರಣೆ ಎಂದು ತಿಳಿಸಿದ್ದಾರೆ.

Continue Reading

Lok Sabha Election 2024

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಕರ್ತವ್ಯನಿರತ ಪೊಲೀಸರು ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಈ ವೇಳೆ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದ್ದು, ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಈ ಮನೆಯ ಮೇಲೆ ದಾಳಿ ನಡೆಸಿದ್ದರು. ಆದರೆ, ಅಲ್ಲಿ ಮದ್ಯದ ಬಾಟಲಿ ಸಿಗುವ ಬದಲು ಕಂತೆ ಕಂತೆ ಹಣ ಸಿಕ್ಕಿದೆ. ಹೀಗಾಗಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

VISTARANEWS.COM


on

Lok Sabha Election 2024 Rs 18 crore seized from raids for liquor
Koo

ಧಾರವಾಡ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಇಲ್ಲಿನ ದಾಸನಕೊಪ್ಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಣೆ (Illegal liquor collection) ಮಾಡಲಾಗಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳಿಗೆ ಶಾಕ್‌ ಕಾದಿತ್ತು. ಅಲ್ಲಿದ್ದಿದ್ದು ಅಕ್ರಮ ಬಾಟಲಿಗಳಲ್ಲ. ಬದಲಾಗಿ ಕಂತೆ ಕಂತೆ ಹಣ ಎಂಬುದು ಬೆಳಕಿಗೆ ಬಂದಿದೆ. ಕೂಡಲೇ ಐಟಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 18 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಧಾರವಾಡದಲ್ಲಿ ಐಟಿ ಅಧಿಕಾರಿಗಳು ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿ ಈ ದಾಳಿ ನಡೆದಿದೆ. ಈ ಸಂಬಂಧ ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸಿಪಿ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Lok Sabha Election 2024 Rs 18 crore seized from raids for liquor

ಹಣದ ಮೂಲದ ಬಗ್ಗೆ ತನಿಖೆ?

ಸದ್ಯ ಐಟಿ ಹಾಗೂ ಚುನಾವಣಾಧಿಕಾರಿಗಳು ಮನೆಯನ್ನು ಶೋಧಿಸುತ್ತಿದ್ದು, ಈಗಾಗಲೇ 18 ಕೋಟಿ ರೂಪಾಯಿಗೂ ಹೆಚ್ಚು ಹಣ ಸಿಕ್ಕಿದೆ ಎನ್ನಲಾಗಿದೆ. ಇನ್ನೂ ಶೋಧವನ್ನು ಮುಂದುವರಿಸಲಾಗಿದೆ. ಈ ನಡುವೆ ಹಣದ ಮೂಲದ ಬಗ್ಗೆ ಪತ್ತೆ ಹಚ್ಚಲೂ ಮುಂದಾಗಲಾಗಿದೆ. ಒಂದು ಬಾರಿ ಶೋಧ ಪೂರ್ಣಗೊಂಡ ಬಳಿಕ ಪ್ರಕರಣ ದಾಖಲು ಮಾಡಿಕೊಂಡು ಬಸವರಾಜ್ ದುತ್ತಣ್ಣವರ ಅವರಿಗೆ ನೋಟಿಸ್‌ ನೀಡಲು ನಿರ್ಧಾರ ಮಾಡಲಾಗಿದೆ.

ನಡೆದಿದ್ದು ಲಿಕ್ಕರ್‌ಗಾಗಿ ದಾಳಿ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಕರ್ತವ್ಯನಿರತ ಪೊಲೀಸರು ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಈ ವೇಳೆ ದಾಸನಕೊಪ್ಪದಲ್ಲಿನ ಅರ್ನಾ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದ್ದು, ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಈ ಮನೆಯ ಮೇಲೆ ದಾಳಿ ನಡೆಸಿದ್ದರು. ಆದರೆ, ಅಲ್ಲಿ ಮದ್ಯದ ಬಾಟಲಿ ಸಿಗುವ ಬದಲು ಕಂತೆ ಕಂತೆ ಹಣ ಸಿಕ್ಕಿದೆ. ಹೀಗಾಗಿ ಕೂಡಲೇ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಹಾವೇರಿ, ಬಾಗಲಕೋಟೆ ಸೇರಿ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 87 ಲಕ್ಷ ರೂ. ಜಪ್ತಿ

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿವಿಧೆಡೆ ಮತದಾರರಿಗೆ ಹಂಚಲು ಹಣ, ಮದ್ಯ, ಉಡುಗೊರೆಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬರುತ್ತಿದೆ. ಈ ನಡುವೆ ಹಾವೇರಿ, ಬಾಗಲಕೋಟೆ ಹಾಗೂ ಅನೇಕಲ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 87.67 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋಟೆಬೆನ್ನೂರಿನಲ್ಲಿ 75 ಲಕ್ಷ ರೂ. ವಾಹನ ಜಪ್ತಿ

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 75 ಲಕ್ಷ ರೂ. ಹಾಗೂ ವಾಹನವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಜಪ್ತಿ ಮಾಡಿದೆ. ಕಾರಿನಲ್ಲಿ ಸಮರ್ಪಕ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.

ಬಾದಾಮಿ ತಾಲೂಕಿನಲ್ಲಿ 6.87 ಲಕ್ಷ ರೂ. ವಶ

ಬಾಗಲಕೋಟೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ದಾಖಲೆ‌‌ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 6.87 ಲಕ್ಷ ರೂ.ಗಳನ್ನು ಬಾದಾಮಿ ತಾಲೂಕಿನ ಕುಳಗೇರಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ. ಆರ್.ಎಲ್.ನದಾಫ್ ನೇತೃತ್ವದ ಎಸ್.ಎಸ್.ಟಿ ತಂಡ ವಾಹನಗಳ ಪರಿಶೀಲನಾ ವೇಳೆ ಹಣ ವಶಕ್ಕೆ ಪಡೆದಿದೆ.

ನವಲಗುಂದದಿಂದ ಕೆರೂರಗೆ ಹೊರಟ ಕಾರಿನಲ್ಲಿ 2.83 ಲಕ್ಷ, ಗೂಡ್ಸ್ ವಾಹನದಲ್ಲಿ 1 ಲಕ್ಷ, ಹುಬ್ಬಳ್ಳಿಯಿಂದ ಕೆರೂರಿಗೆ ಹೊರಟ ವಾಹನದಲ್ಲಿ 2.40 ಲಕ್ಷ, ಶಿಗ್ಗಾಂವಿ ತಾಲೂಕಿನ ಪಾನಿಗಟ್ಟಿಯಿಂದ ಕೆರೂರಗೆ ಹೊರಟ ಬೊಲೆರೊದಲ್ಲಿ 1 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | Road Rage : ನಿಲ್ಲದ ರೋಡ್‌ ರೇಜ್; ನಿವೃತ್ತ ಬ್ರಿಗೇಡಿಯರ್ ಕಾರು ಅಡ್ಡಗಟ್ಟಿ ಬೆಲ್ಟ್‌ನಿಂದ ಹೊಡೆದು ಹಲ್ಲೆ

ಆನೇಕಲ್‌ನಲ್ಲಿ ಬೈಕ್‌ನಲ್ಲಿ ಕೊಂಡೊಯ್ಯುತ್ತಿದ್ದ 5.28 ಲಕ್ಷ ವಶಕ್ಕೆ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್‌ನಲ್ಲಿ ದಾಖಲೆ ಇಲ್ಲದೆ ಬೈಕ್‌ನಲ್ಲಿ ಕೊಂಡೊಯ್ಯುತ್ತಿದ್ದ 5.28 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಂಪಲಘಟ್ಟ ರಮೇಶ್ ಎಂಬುವವರು, ಹೊಂಪಲಘಟ್ಟ ಕಡೆಯಿಂದ ಆನೇಕಲ್ ಮಾರ್ಗವಾಗಿ ಹಣ ತೆಗೆದುಕೊಂಡು ಬರುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಯನಗರದಲ್ಲಿ ಸೀಜ್‌ ಆದ ಕೋಟ್ಯಂತರ ಹಣ; ಇಬ್ಬರ ವಿರುದ್ಧ ಎಫ್‌ಐಆರ್‌

Lok Sabha Election 2024

ಬೆಂಗಳೂರು: ಚುನಾವಣಾ ಸಮಯದಲ್ಲಿ (Lok Sabha Election 2024) ಹಣದ ಹೊಳೆಯೇ (Lok Sabha Election 2024) ಹರಿಯುತ್ತದೆ. ಸದ್ಯ ಜಯನಗರ ಚೆಕ್‌ಪೋಸ್ಟ್‌ನಲ್ಲಿ ಕಾರೊಂದರಲ್ಲಿ ಸಿಕ್ಕಿದ ಕೋಟ್ಯಂತರ ರೂ. ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಎನ್‌ ಮಂಜುನಾಥ್‌ ಕೊಟ್ಟ ದೂರನ್ನು ಆಧರಿಸಿ ಏ.15ರಂದು ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರಿಗೂ ನೋಟಿಸ್‌ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಕೋಟ್ಯಂತರ ರೂ. ಹಣವನ್ನು ನಗರ ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ. ಕಾರಿನಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಿದಾಗ 1,34,99,000 ರೂ. ಹಣ ಪತ್ತೆಯಾಗಿದ್ದು, ಜತೆಗೆ ಬಿಬಿಎಂಪಿಗೆ ಸಂಬಂಧಿಸಿದ ಕೆಲ ದಾಖಲೆಗಳು ಸಿಕ್ಕಿವೆ. ಇವೆಲ್ಲವನ್ನೂ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣದ ವರದಿಯನ್ನು ಕೊಟ್ಟಿದ್ದಾರೆ.

ಇನ್ನೂ ಕ್ಲಾಸ್ ಒನ್ ಗುತ್ತಿಗೆದಾರನಿಗೆ ಸೇರಿದ ಹಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವು ಯಾವುದಾದರು ಪಕ್ಷಕ್ಕೆ ಸೇರಿದ್ದಾ? ವೈಯಕ್ತಿಕ ವ್ಯವಹಾರದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸೀಜ್‌ ಮಾಡಿರುವ ಸ್ಕೂಟರ್‌ ಹಾಗೂ ಕಾರಿನ ಮಾಲೀಕರಾದ ಸೋಮಶೇಖರ್ ಮತ್ತು ಧನಂಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

ಆ ದಿನ ನಡೆದಿದ್ದು ಏನು? ದೂರಿನಲ್ಲಿ ಏನಿದೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರು ಪ್ಲೈಯಿಂಗ್‌ ಸ್ಕ್ವಾಡ್‌ ತಂಡ 3ರ ಟೀಮ್‌ ಲೀಡರ್‌ ಆಗಿ ನೇಮಕಗೊಂಡಿರುವ ಮಂಜುನಾಥ್‌ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆ ದೂರಿನನ್ವಯ ಏ.13ರ ಬೆಳಗ್ಗೆ 11:50ರ ಸುಮಾರಿಗೆ ಜಯನಗರ 4ನೇ ಬ್ಲಾಕ್‌ ಸಮೀಪ ಅಪರಿಚಿತ ವ್ಯಕ್ತಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹೆಚ್ಚಿನ ಪ್ರಮಾಣದ ನಗದನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ನೋಡಲ್‌ ಅಧಿಕಾರಿ ನಿಖಿತ ಚಿನ್ನಸ್ವಾಮಿ ಅವರು ತೆರಳಿದ್ದರು.

ಈ ವೇಳೆ ನೀಲಿ ಬಣ್ಣದ ಆಕ್ಸಸ್‌ ಗಾಡಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟುಕೊಂಡಿದ್ದ. ನೋಡಲ್‌ ಅಧಿಕಾರಿ ನಿಖಿತ ಅವರು ಆತನ ಬಳಿ ಹೋಗಿ ವಿಚಾರಿಸಲು ಮುಂದಾಗುತ್ತಿದ್ದಂತೆ, ಸ್ಕೂಟರ್‌ ಹಾಗೂ ಹಣದ ಬ್ಯಾಗ್‌ ಬಿಟ್ಟು ಪರಾರಿ ಆಗಿದ್ದ. ಅದೇ ರಸ್ತೆಯಲ್ಲಿದ್ದ ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್‌ ಕಾರು ಮತ್ತು ರಿಜಿಸ್ಟೇಷನ್‌ ನಂಬರ್‌ ಇಲ್ಲದ ಬಿಳಿ ಬಣ್ಣದ ಬೆಂಜ್‌ ಕಾರಿನಲ್ಲೂ ಗರಿ ಗರಿ ನೋಟು ಪತ್ತೆಯಾಗಿತ್ತು.

ಮೊದಮೊದಲು ಬ್ಯಾಗ್‌ನಲ್ಲಿ ಏನಿದೆ ತೋರಿಸಿ ಎಂದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದಿದ್ದರು. ಯಾವಾಗ ನೋಡೆಲ್‌ ಅಧಿಕಾರಿ ನಿಖಿತ ಅವರು ಕಾರು ಪರಿಶೀಲನೆ ಮಾಡಲು ಹೋದಾಗ ಕಾರಲ್ಲಿದ್ದ ಐವರು ಕಾಲ್ಕಿತ್ತಿದ್ದರು. ಒಟ್ಟು 1,34,99,000 ಹಣ ಪತ್ತೆಯಾಗಿದೆ. ಜತೆಗೆ ವೋಕ್ಸ್‌ ವ್ಯಾಗನ್‌ ಕಾರಲ್ಲಿ ಬಿಬಿಎಂಪಿ ದಾಖಲಾತಿಗಳು ಹಾಗೂ ರಿಜಿಸ್ಟೇಷನ್‌ ನಂಬರ್‌ ಇಲ್ಲದ ಕಾರಲ್ಲಿ ಒಂದು ಮೊಬೈಲ್‌, ಒಂದು ಕಾರ್ಡ್‌ ಪೌಚ್‌ ದೊರೆತಿದೆ. ಇದೆಲ್ಲವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Uttara Kannada News: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Drinking water problem Provide water immediately by tanker says DC
Koo

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರು (Drinking Water) ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದ್ದಾರೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರತಿದಿನ ವರದಿಯಾಗುತ್ತಿದ್ದು, ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳು ಆ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸೌಲಭ್ಯ ಒದಗಿಸಬೇಕು, ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಟೆಂಡರ್ ಕರೆಯಲು ಎಲ್ಲಾ ತಹಸೀಲ್ದಾರ್‌ಗಳಿಗೆ ಈಗಾಗಲೇ ಅನುಮತಿಯನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದು, ಒಂದು ವೇಳೆ ಅಗತ್ಯ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದಲ್ಲಿ, ಸದರಿ ಟೆಂಡರ್‌ಗೆ ಸಾರ್ವಜನಿಕ ಹಿತದೃಷ್ಠಿಯಿಂದ ಘಟನೋತ್ತರ ಮಂಜೂರಾತಿ ನೀಡಲು ಅನುಮತಿ ನೀಡಲಾಗುವುದು. ಆದರೆ ಯಾವುದೇ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರಿಗೆ ನೀರು ಒದಗಿಸಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಾತ್ರವಲ್ಲದೇ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲೆಯಲ್ಲಿರುವ ಎಲ್ಲಾ ಗೋಕಟ್ಟೆಗಳಿಗೂ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಮತ್ತು ಜಿಲ್ಲೆಯ ಅರಣ್ಯ ಭಾಗದ ಗ್ರಾಮಗಳಲ್ಲಿ ಕೂಡಾ ಜಾನುವಾರುಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ತಮ್ಮ ಸಮಸ್ಯೆಯಿದ್ದಲ್ಲಿ 24*7 ಕಾರ್ಯ ನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಗೋಕರ್ಣ, ನಾಡುಮಾಸ್ಕೇರಿ, ಹೆಗಡೆ, ಕುಜಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

Continue Reading
Advertisement
Nitin Gadkari
ದೇಶ2 mins ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ8 mins ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ22 mins ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ30 mins ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Universal Coaching Centre
ಬೆಂಗಳೂರು2 hours ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ2 hours ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

UPSC Result 2024
ಶಿಕ್ಷಣ2 hours ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Lok Sabha Election 2024 Rs 18 crore seized from raids for liquor
Lok Sabha Election 20242 hours ago

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Akshya Kumar
ಸಿನಿಮಾ2 hours ago

Akshya Kumar: ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್!

Drinking water problem Provide water immediately by tanker says DC
ಉತ್ತರ ಕನ್ನಡ2 hours ago

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ18 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌