Site icon Vistara News

SC ST Reservation: 2B ಪ್ರವರ್ಗ ಹಿಂತೆಗೆತಕ್ಕೆ ಸಿಡಿದ ಮುಸ್ಲಿಮರು; ರಾಜ್ಯದ ಹಲವು ಕಡೆ ಬೃಹತ್‌ ಪ್ರತಿಭಟನೆ

Muslims protesting for 2B category withdrawal Massive protests in many parts of the state SC ST Reservation updates

ಬೆಂಗಳೂರು: ಎಸ್‌ಸಿ-ಎಸ್‌ಟಿ ಮೀಸಲಾತಿ (SC ST Reservation) ಜಾರಿಯಲ್ಲಿ ಒಳ ಮೀಸಲಾತಿ ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಎಸ್‌ಸಿ ಸಮುದಾಯದ ಒಳಮೀಸಲಾತಿಗೆ ಬಂಜಾರ ಸಮುದಾಯದವರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಒಳ ಮೀಸಲಾತಿ ಮಾಡುವ ವೇಳೆ ಮುಸ್ಲಿಂ ಸಮುದಾಯಕ್ಕೆ ಇದ್ದ 2ಬಿ (2B) ಪ್ರವರ್ಗವನ್ನು ತೆಗೆದು ಹಾಕಿರುವ ಸಂಬಂಧ ಮುಸ್ಲಿಂ ಸಮುದಾಯದವರು ತಿರುಗಿಬಿದ್ದಿದ್ದು, ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದಾರೆ. ಹಳೇ ಮೀಸಲಾತಿ ಪದ್ಧತಿಯೇ ಜಾರಿಯಲ್ಲಿರಲಿ ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮುಸ್ಲಿಮರ ಆಕ್ರೋಶ

ಬೆಳಗಾವಿ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಪ್ರವರ್ಗದಡಿ ಇದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ವತಿಯಿಂದ ಚೆನ್ನಮ್ಮ ‌ವೃತ್ತದಿಂದ‌ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ. ತಕ್ಷಣವೇ ಸಚಿವ ಸಂಪುಟ ‌ಸಭೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: NCERT: ಹೊಸ ಶಿಕ್ಷಣ ನೀತಿ ಅನುಸಾರ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಪರಿಷ್ಕರಣೆ, ಮುಂದಿನ ವರ್ಷದಿಂದಲೇ ಜಾರಿ

ಚಿತ್ರದುರ್ಗದಲ್ಲಿ ರಸ್ತೆ ಮೇಲೇ ಕುರ್ಚಿ ಹಾಕಿ ಪ್ರತಿಭಟನೆ

ಚಿತ್ರದುರ್ಗ: ರಾಜ್ಯ ಸರ್ಕಾರವು 2ಬಿ ಮೀಸಲಾತಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಎಸ್‌ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ‌ಆಕ್ರೋಶವನ್ನು ಹೊರಹಾಕಲಾಗಿದೆ. ನಗರದ ಡಿಸಿ ಸರ್ಕಲ್ ಬಳಿ ಪ್ರತಿಭಟನೆಗೆ ವೇದಿಕೆಯನ್ನು ಹಾಕಲಾಗಿತ್ತು. ಆದರೆ, ಅನುಮತಿ ಪಡೆಯದ ಹಿನ್ನೆಲೆಯಲ್ಲಿ ವೇದಿಕೆಯನ್ನು ಬಳಸದಂತೆ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೆಲ ಕಾಲ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ಕಾರ್ಯಕ್ರಮದ ವೇದಿಕೆಯನ್ನು ತೆರವುಗೊಳಿಸಿದ್ದಾರೆ. ವೇದಿಕೆ ತೆರವು ಹಿನ್ನೆಲೆಯಲ್ಲಿ ರಸ್ತೆ ಮೇಲೆಯೇ ಕುರ್ಚಿ ಹಾಕಿ ಕುಳಿತ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆಯನ್ನು ಮುಂದುವರಿಸಿದರು.

ಮಂಡ್ಯದಲ್ಲಿ ಎಸ್‌ಡಿಪಿಐ ವತಿಯಿಂದ ಮುಸ್ಲಿಂರ ಪ್ರತಿಭಟನೆ

ಮಂಡ್ಯದಲ್ಲಿ ಮುಸ್ಲಿಮರ ಆಕ್ರೋಶ

ಮಂಡ್ಯ: ಮುಸ್ಲಿಂ ಸಮುದಾಯದವರಿಗೆ 2ಬಿ ಮೀಸಲಾತಿ ರದ್ದು ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಭುಗಿಲೆದ್ದ ಸಮುದಾಯದವರ ಆಕ್ರೋಶ ಭುಗಿಲೆದ್ದಿದೆ. ಎಸ್‌ಡಿಪಿಐ ನೇತೃತ್ವದಲ್ಲಿ ಹಲವು ಮುಸ್ಲಿಂ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಮುಸ್ಲಿಂ ಸಮುದಾಯದವರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶವನ್ನು ಹೊರಹಾಕಿದರು. ಹೊಸ ಮೀಸಲಾತಿ ಕ್ರಮವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Karnataka Elections : ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಮಂಜುನಾಥ್ ಕುನ್ನೂರುಗೆ ಇಲ್ಲ, ವಿನಯ ಕುಲಕರ್ಣಿಯೇ ಪಕ್ಕಾ?

ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಹೊಸಪೇಟೆಯಲ್ಲಿಯೂ ಮುಸ್ಲಿಂರ ಆಕ್ರೋಶ

ಒಳ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ಪ್ರಶ್ನಿಸಿ ಹೊಸಪೇಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಹೊಸಪೇಟೆಯ ತಹಸೀಲ್ದಾರ್‌ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಲಾಗಿದೆ.

Exit mobile version