Site icon Vistara News

Tipu Sultan: ಮೈಸೂರು ಏರ್‌ಪೋರ್ಟ್‌ಗೆ ಟಿಪ್ಪು ಹೆಸರನ್ನೇ ಇಡಬೇಕು ಎಂದ ನಟ ಚೇತನ್ ಅಹಿಂಸಾ

actor Chetan Kumar Ahimsa

ಬೆಂಗಳೂರು: ತಮ್ಮದೇ ಆದ ವಿಚಾರಗಳ ಮೂಲಕ ವಿವಾದಕ್ಕೆ ನಾಂದಿ ಹಾಡುವ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ(Chetan Ahimisa) ಅವರು ಇದೀಗ, ಮೈಸೂರು ವಿಮಾನ ನಿಲ್ದಾಣಕ್ಕೆ (Mysore Airport) ಟಿಪ್ಪು ಸುಲ್ತಾನ್(Tipu Sultan) ಹೆಸರು ಇಡಬೇಕಾ, ಬೇಡವಾ ಎಂಬ ಚರ್ಚೆಗೆ ಧುಮುಕಿದ್ದಾರೆ. ಈ ಚರ್ಚೆಯಲ್ಲಿ ಅವರು ಬೆಂಗಳೂರು ನಿರ್ಮಾತೃ ಕೆಂಪೇಗೌಡ (Kempegowda) ಅವರನ್ನೂ ಎಳೆದು ತಂದಿದ್ದಾರೆ! ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ನಾಮಕರಣ ಮಾಡುವುದೇ ಸೂಕ್ತ ಎಂದು ಪ್ರತಿಪಾದಿಸಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಹೆಸರನ್ನು ಶೌಚಾಲಯಗಳಿಗೆ ಇಡಬೇಕು ಎಂದು ಹೇಳಿದ್ದರು. ಈ ವಿಷಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಚೇತನ್ ಅಹಿಂಸಾ ಅವರು ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿಯಾಗಿದ್ದಾರೆ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಚೇತನ್ ಅಹಿಂಸಾ ಪೋಸ್ಟ್‌ಗಳಲ್ಲಿ ಏನಿದೆ?

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕಾ? ಸರ್ಕಾರಿ ಕಟ್ಟಡಗಳಿಗೆ ಯೋಧರಿಗಿಂತ ಹೆಚ್ಚಾಗಿ ಅಹಿಂಸೆಯ ಐಕಾನ್ಗಳ ಹೆಸರನ್ನು ಇಡಬೇಕೆಂದು ನಾನು ಭಾವಿಸುತ್ತೇನೆ; ಆದಾಗ್ಯೂ, ಟಿಪ್ಪುವಿನ ಜನ್ಮಸ್ಥಳವಾದ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಧ ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಆ ನಿದರ್ಶನದ ಪ್ರಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದರಲ್ಲಿ ತಪ್ಪೇನಿಲ್ಲ.

ಇಬ್ಬರು ಯೋಧರ ಕಥೆ

  1. ಕೆಂಪೇಗೌಡ — ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
  2. ಟಿಪ್ಪು ಸುಲ್ತಾನ್ — ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ.

1992 ರಲ್ಲಿ ಬಾಬರಿ ಮಸೀದಿ ವಿವಾದದ ಸಂದರ್ಭದಲ್ಲಿ, ನಮ್ಮ ಸಮಾನತೆಯ ಐಕಾನ್ ಕಾನ್ಶಿರಾಮ್ ಆ ಸ್ಥಳದಲ್ಲಿ ಭವ್ಯವಾದ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಹೇಳಿದರು.

ಯಾವುದೇ ದೇವಸ್ಥಾನ/ಮಸೀದಿ/ವಿಮಾನ ನಿಲ್ದಾಣಗಳಿಗಿಂತ ಶೌಚಾಲಯಗಳು ಅತ್ಯಗತ್ಯ
ಯತ್ನಾಳ್ ‘ಶೌಚಾಲಯಕ್ಕೆ ಟಿಪ್ಪು ಹೆಸರಿಡಿ’ ಎಂದು ಅವಹೇಳನಕಾರಿಯಾಗಿ ಹೇಳಿದ್ದಾರೆ . ಶೌಚಾಲಯಗಳನ್ನು ಯಾವಾಗಲೂ ಸ್ವಚ್ಛಗೊಳಿಸಬಹುದು; ಯತ್ನಾಳ್ ಮನಸ್ಸಿನಲ್ಲಿರುವ ಕೋಮು ಕೊಳಕುತನವನ್ನು ಎಂದಿಗೂ ಸ್ವಚ್ಛಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಗಾಂಧಿವಾದ ಕಿತ್ತೊಗೆಯಬೇಕು, ಪ್ರಗತಿಪರರಿಗೆ ಸಂವಿಧಾನ ತತ್ವ ತಿಳಿದಿಲ್ಲ! ನಟ ಚೇತನ್ ಹೊಸ ವರಸೆ

Exit mobile version