Mysore Dasara 2022 | ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಡ್ರೋನ್‌ ಕ್ಯಾಮೆರಾ ಕಣ್ಗಾವಲು - Vistara News

ಕರ್ನಾಟಕ

Mysore Dasara 2022 | ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಡ್ರೋನ್‌ ಕ್ಯಾಮೆರಾ ಕಣ್ಗಾವಲು

ಕೋವಿಡ್‌ ಕಾರಣದಿಂದ ಮಂಕಾಗಿದ್ದ ಮೈಸೂರು ದಸರಾ (Mysore Dasara 2022) ಈ ಬಾರಿ ಅದ್ಧೂರಿತನಕ್ಕೆ ಸಾಕ್ಷಿಯಾಗುತ್ತಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ನಗರ ಪೊಲೀಸ್‌ ಅಧಿಕಾರಿಗಳು, ಮಹೋತ್ಸವಕ್ಕೆ ಡ್ರೋನ್‌ ಕ್ಯಾಮೆರಾ ಕಣ್ಗಾವಲು ಇರಲಿದೆ.

VISTARANEWS.COM


on

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ (Mysore Dasara 2022) ಸೆ.26ರಿಂದ ಅ.5ರವರೆಗೆ ನಡೆಯಲಿದೆ. ಕೋವಿಡ್‌ ಕಾರಣದಿಂದ ಕಳೆದ ೨ ವರ್ಷ ಸರಳವಾಗಿ ನಡೆದಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ನಗರದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಪ್ರತಿಯೊಂದು ಚಲನವಲನಗಳ ಮೇಲೆ ಪೊಲೀಸರ ಕಣ್ಣಿರಲಿದೆ.

ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ತಯಾರಿ ನಡೆಸಿದೆ. ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆಯುಕ್ತ ಚಂದ್ರಗುಪ್ತ, ಮೈಸೂರು ನಗರ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದೆ. ಮೈಸೂರು ನಗರದಿಂದ 1255, ಹೊರ ಜಿಲ್ಲೆಗಳಿಂದ 3580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 650 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಬಾಡಿ ಪೋರ್ಸ್‌ ಕ್ಯಾಮೆರಾ

ಮೊಬೈಲ್ ಕಮಾಂಡ್ ಸೆಂಟರ್ ಬಸ್‌ ಅನ್ನು ದಸರಾ ಮಹೋತ್ಸವದಲ್ಲಿ ಬಳಕೆ ಮಾಡಲಾಗುತ್ತಿದೆ. ಈ ಬಸ್ಸಿನಲ್ಲಿ ಸಿಸಿಟಿವಿ ವ್ಯವಸ್ಥೆ ಇದ್ದು, ಬಾಡಿ ಫೋರ್ಸ್ ಕ್ಯಾಮೆರಾಗಳು, ಲಾಂಗ್ ಡಿಸ್ಟೆನ್ಸ್ ಫೋಟೊಗ್ರಫಿ ಮತ್ತು ವಿಡಿಯೊಗ್ರಫಿಗಳನ್ನು ತೆಗೆಯುವ ವ್ಯವಸ್ಥೆ ಇರಲಿದೆ.

ಅರಮನೆ ಮತ್ತು ಬನ್ನಿ ಮಂಟಪದ ಎಲ್ಲ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿಫೋರ್ಸ್ ಕ್ಯಾಮೆರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿ ಈ ಕ್ಯಾಮೆರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್‌ನಲ್ಲಿ ರೆಕಾರ್ಡ್ ಆಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು ಮಾಡಲಾಗುವುದು. ದಸರಾ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಿ ಅದರ ಮೇಲೆ ಪೊಲೀಸರನ್ನು ಮೆಗಾ ಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತಿದೆ.

ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ

ನಗರದ ಲಾಡ್ಜ್‌ಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ದಿನದ 24 ಗಂಟೆ ನುರಿತ ಅಪರಾಧ ವಿಭಾಗದ ಸಿಬ್ಬಂದಿ ಗಸ್ತಿನಲ್ಲಿದ್ದು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತದೆ.

ದಸರಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳಕ್ಕೆ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ ಮತ್ತು 8 ಆ್ಯಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಈಗಾಗಲೇ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಅಳವಡಿಸಿಕೊಂಡಿರುವ 13,140 ಸಿಸಿ ಕ್ಯಾಮೆರಾಗಳು ಇದ್ದು, ಹೆಚ್ಚುವರಿಯಾಗಿ ಮೈಸೂರು ಅರಮನೆ, ಬನ್ನಿಮಂಟಪದ ಮೈದಾನ ಮೆರವಣಿಗೆ ಮಾರ್ಗ ಮತ್ತು ಇತರೆ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ರೌಡಿ ಪರೇಡ್‌

ರೌಡಿ ಪರೇಡ್ ನಡೆಸಿ ರೌಡಿಗಳಿಗೆ ಅಹಿತಕರ ಘಟನೆ ನಡೆಸದಂತೆ ಕಟ್ಟೆಚ್ಚರ ನೀಡಲಾಗಿದೆ. ಗರುಡಾ ಫೋರ್ಸ್ ಮತ್ತು ಎಎನ್ಎಫ್ ತಂಡಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಈ ಮಧ್ಯೆ ಶನಿವಾರ ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ. ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಕಾವಲಿಗೆ ನಿಂತಿದ್ದಾರೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೈಯ್ಯಲು ತೆರಳಬಹುದೆಂಬ ಕಾರಣಕ್ಕೆ ಮಹಿಷ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.

ಬೆಟ್ಟಕ್ಕೆ ತೆರಳುವ ವಾಹನಗಳನ್ನು ಈಗಾಗಲೇ ಪ್ರವೇಶಕ್ಕೆ ಮುನ್ನ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆಯನ್ನು ಚಾಮುಂಡಿಬೆಟ್ಟದಲ್ಲಿ ನಿಯೋಜಿಸಲಾಗಿದೆ.

ಇದನ್ನೂ ಓದಿ | Mysore Dasara 2022 | ಮೈಸೂರು ಫಲಪುಷ್ಪ ಪ್ರದರ್ಶನ; ಗುಲಾಬಿ ರಂಗಲ್ಲಿ ಕಂಗೊಳಿಸಲಿದೆ ರಾಷ್ಟ್ರಪತಿ ಭವನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

Lok Sabha Election 2024 : ಮತದಾನದ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟಿಗೆ ಜೆಡಿಎಸ್‌ ಕಾರ್ಯಕರ್ತರ ಬೆರಳುಗಳು ಕಟ್‌ ಆಗಿವೆ.

VISTARANEWS.COM


on

By

Lok sabha election 2024
Koo

ಚಿಕ್ಕಬಳ್ಳಾಪುರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ನಿನ್ನೆ ಶುಕ್ರವಾರ ಸಂಜೆ ಮತದಾನದ ವೇಳೆ ಮಾರಾಮಾರಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತದಾನ ಮುಕ್ತಾಯ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಜೆಡಿಎಸ್‌ಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರ ಜಗಳದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ ಎಂಬುವವರ ಬೆರಳುಗಳು ಕಟ್ ಆಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ನರೇಂದ್ರ ಮಂಜುನಾಥ, ಗಣೇಶ, ಮಹೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಸದ್ಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಆಸ್ಪತ್ರೆಗೆ ಜೆಕೆ ಕೃಷ್ಣಾರೆಡ್ಡಿ ಭೇಟಿ

ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಶನಿವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ಗಂಭೀರ ಗಾಯಗೊಂಡಿದ್ದ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡನೇ ಹಂತದ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಸಜ್ಜಾಗಿವೆ. ಉತ್ತರ ಕರ್ನಾಟಕದೆಲ್ಲೆಡೆ ಅಬ್ಬರದ ಪ್ರಚಾರದ ಮೂಲಕ ಜನರ ವಿಶ್ವಾಸ ಗಳಿಸುವುದು ಎರಡೂ ಪಕ್ಷಗಳ ನಾಯಕರ ಗುರಿಯಾಗಿದೆ.

VISTARANEWS.COM


on

Lok Sabha
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇದುವರೆಗೆ ದಕ್ಷಿಣ ಕರ್ನಾಟಕ ಭಾಗದಲ್ಲಿಯೇ ಬೀಡುಬಿಟ್ಟಿದ್ದ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಕಡೆ ತೆರಳುತ್ತಿದ್ದಾರೆ. ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ದಿಸೆಯಲ್ಲಿ ಕಾಂಗ್ರೆಸ್‌ ಅಲರ್ಟ್‌ ಆಗಿದ್ದು, ಹೆಚ್ಚುವರಿಯಾಗಿ 13 ಕ್ಷೇತ್ರಗಳಿಗೆ ಸಚಿವರಿಗೆ ಜವಾಬ್ದಾರಿ ನೀಡಿದೆ. ಬಿಜೆಪಿ ನಾಯಕರು ಕೂಡ ಉತ್ತರ ಕರ್ನಾಟಕದಲ್ಲೇ ಮೊಕ್ಕಾ ಹೂಡಿದ್ದಾರೆ.

13 ಸಚಿವರಿಗೆ ಕಾಂಗ್ರೆಸ್‌ ಟಾಸ್ಕ್‌

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿರುವ ರಾಜ್ಯ ಕಾಂಗ್ರೆಸ್‌, 13 ಸಚಿವರಿಗೆ 13 ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಜವಾಬ್ದಾರಿ ನೀಡಿದೆ. ಹೆಚ್ಚುವರಿ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆದೇಶಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ನಾಯಕರನ್ನು ಸದ್ಬಳಕೆ ಮಾಡಿಕೊಂಡು ಬಿಜೆಪಿಗೆ ತಿರುಗೇಟು ನೀಡುವುದು ಕಾಂಗ್ರೆಸ್‌ ತಂತ್ರವಾಗಿದೆ.

ಕ್ಷೇತ್ರವಾರು ಜವಾಬ್ದಾರಿ ಹಂಚಿಕೆ ಹೀಗಿದೆ

ದಾವಣಗೆರೆಡಾ.ಜಿ. ಪರಮೇಶ್ವರ್
ಧಾರವಾಡದಿನೇಶ್‌ ಗುಂಡೂರಾವ್
ಕೆ.ಜೆ. ಜಾರ್ಜ್ಉತ್ತರ ಕನ್ನಡ
ಚಿಕ್ಕೋಡಿಕೆ.ಎಚ್‌.ಮುನಿಯಪ್ಪ
ಹಾವೇರಿಕೃಷ್ಣ ಭೈರೇಗೌಡ
ಬಳ್ಳಾರಿ ರಾಮಲಿಂಗಾರೆಡ್ಡಿ
ಬೆಳಗಾವಿಬೈರತಿ ಸುರೇಶ್
ಕೊಪ್ಪಳಎಂ.ಸಿ. ಸುಧಾಕರ್
ರಾಯಚೂರುಕೆ.ಎನ್.ರಾಜಣ್ಣ
ಬೀದರ್ಕೆ. ವೆಂಕಟೇಶ್
ಶಿವಮೊಗ್ಗಎನ್.‌ ಚೆಲುವರಾಯಸ್ವಾಮಿ
ವಿಜಯಪುರಎಚ್.ಸಿ.ಮಹಾದೇವಪ್ಪ
ಬಾಗಲಕೋಟೆಡಿ. ಸುಧಾಕರ್

ಕಲಬುರಗಿಗೆ ತೆರಳಿದ ಸಿದ್ದರಾಮಯ್ಯ

ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕಕ್ಕೆ ತೆರಳಿದ್ದಾರೆ. ಸದ್ಯ, ಕಲಬುರಗಿಯಲ್ಲಿರುವ ಸಿದ್ದರಾಮಯ್ಯ ಬಳಿಕ ಇಂದೇ ತೇರದಾಳ, ರಬಕವಿ ಬನಹಟ್ಟಿಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರ ಪರ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ ಅವರು ಪ್ರಮುಖ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆಯಿಂದ ಮೋದಿ ಮೇನಿಯಾ

ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿ ಹಲವೆಡೆ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ರಿಂದ 1.50ರ ವರೆಗೂ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Lok Sabha Election

ಅಲ್ಲಿಂದ ದಾವಣಗೆರೆ ಜಿಲ್ಲೆಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 3 ರಿಂದ 3.50 ವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಳ್ಳಾರಿ ಜಿಲ್ಲೆಗೆ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ಅಲ್ಲಿನ ಪುನೀತ್ ರಾಜ್‍ಕುಮಾರ್ ಆಟದ ಮೈದಾನದಲ್ಲಿ ಸಂಜೆ 5ರಿಂದ 5.50ರ ವರೆಗೂ ಮೋದಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.

ಏಪ್ರಿಲ್ 28ರಂದು ರಾತ್ರಿ ಬಳ್ಳಾರಿಯ ಹೊಸಪೇಟೆಯಲ್ಲೇ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏಪ್ರಿಲ್‌ 29ರಂದು ಬಳ್ಳಾರಿಯಿಂದ ಬಾಗಲಕೋಟೆಗೆ ಪ್ರವಾಸ ಮಾಡಲಿರುವ ಮೋದಿ, ಬಾಗಲಕೋಟೆಯಲ್ಲಿ ಮಧ್ಯಾಹ್ನ 12 ರಿಂದ, 12.55 ರವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ‌ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Continue Reading

ಬೆಂಗಳೂರು ಗ್ರಾಮಾಂತರ

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

Assault Case : ಬಾರ್‌ನಲ್ಲಿ ಕುಡಿಯಲು ಹೋದ ಗೆಳೆಯರು ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದು ಸ್ನೇಹಿತನಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದರು. ಇದೀಗ ಆನೇಕಲ್‌ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

assault case in anekla
Koo

ಆನೇಕಲ್: ಬಾರ್‌ನಲ್ಲಿ ಕುಡಿಯಲು ಹೋದವರು ಮತ್ತಿನಲ್ಲಿ ಗಲಾಟೆ (Assault Case) ಮಾಡಿಕೊಂಡಿದ್ದರು. ನಶೆಯ ಗುಂಗಿನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ನಾಗೇಶ್ ಎಂಬಾತ ತನ್ನ ಸ್ನೇಹಿತರಾದ ವೆಂಕಟಸ್ವಾಮಿ ಮತ್ತು ಮುನಿರಾಜು ಎಂಬುವವರಿಂದ ದಾಳಿಗೆ ಒಳಗಾಗಿದ್ದ.

ಕಳೆದ 22ರಂದು ನಾಗೇಶ್, ವೆಂಕಟಸ್ವಾಮಿ ಮತ್ತು ಮುನಿರಾಜು ಒಟ್ಟಾಗಿ ಮದ್ಯ ಸೇವಿಸಲು ಆನೇಕಲ್ ಪಟ್ಟಣದಲ್ಲಿರುವ ಸಂಜಯ್ ಬಾರ್‌ಗೆ ಹೋಗಿದ್ದರು. ಒಂದೇ ಟೇಬಲ್‌ನಲ್ಲಿ ಕುಳಿತು ಮದ್ಯ ಸೇವಿಸುವಾಗ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಶುರುವಾಗಿತ್ತು.

ಈ ವೇಳೆ ನಾಗೇಶ್ ಮೇಲೆ ಮದ್ಯವನ್ನು ಸುರಿದು ಬೆಂಕಿ ಹಚ್ಚಿದ್ದ ಪರಾರಿ ಆಗಿದ್ದರು. ಇತ್ತ ಸ್ನೇಹಿತರ ಹಚ್ಚಿದ ಬೆಂಕಿಗೆ ನಾಗೇಶ್‌ಗೆ ಶೇ. 30ರಷ್ಟು ಸುಟ್ಟ ಗಾಯವಾಗಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಆನೇಕಲ್ ಪೊಲೀಸರು, ತಲೆಮರೆಸಿಕೊಂಡಿದ್ದ ವೆಂಕಟಸ್ವಾಮಿ ಮತ್ತು ಮುನಿರಾಜುರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Randeep Surjewala: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿಯು ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Randeep Surjewala
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಮುಂದುವರಿದಿದೆ. ಅದರಲ್ಲೂ, ಕರ್ನಾಟಕ ಕಾಂಗ್ರೆಸ್‌ (Karnataka Congress) ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ವಿಶೇಷ ವಿಮಾನಗಳಲ್ಲಿ ಓಡಾಡುತ್ತಿರುವುದಕ್ಕೆ ಕರ್ನಾಟಕ ಬಿಜೆಪಿ (Karnataka BJP) ಆಕ್ರೋಶ ವ್ಯಕ್ತಪಡಿಸಿದೆ. “ಕನ್ನಡಿಗರ ತೆರಿಗೆ ಹಣದಲ್ಲಿ ರಣದೀಪ್‌ ಸುರ್ಜೇವಾಲ (Randeep Surjewala) ಅವರು ಟ್ರಿಪ್‌ ಮಾಡುತ್ತಿದ್ದಾರೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ.

“ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ, ಹಣವಿಲ್ಲ ಎಂದು ಕೂತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಲೆಕ್ಷನ್‌ ಏಜೆಂಟ್ ಸುರ್ಜೇವಾಲಾ ಅವರ ಚುನಾವಣಾ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್‌ಗಳ ವ್ಯವಸ್ಥೆಯನ್ನೇ ಮಾಡಿದೆ. ಎಟಿಎಂ ಸರ್ಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನೂ ನೀಡಲಾಗಿದೆಯೇ” ಎಂದು ಪ್ರಶ್ನಿಸಿದೆ.

“ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರ್ಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತ, ಅವರ ಸೇವೆ ಮಾಡುತ್ತ, ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ರಣದೀಪ್‌ ಸುರ್ಜೇವಾಲಾ ಅವರ ಪ್ರವಾಸದ ವಿವರವನ್ನು ಬಿಜೆಪಿ ಹಂಚಿಕೊಂಡು ತಿರುಗೇಟು ನೀಡಿದೆ.

ಬರ ಪರಿಹಾರ; ಸಿಎಂ ಅಸಮಾಧಾನ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ರಾಜ್ಯದಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ಬೆಳೆ ನಷ್ಟವಾಗಿದೆ. 48 ಸಾವಿರ ಹೆಕ್ಟೇರ್‌ ಬೆಳೆ ನಾಶ ಆಗಿದೆ. 223 ತಾಲೂಕುಗಳು ಬರಪೀಡಿತ ಎಂಬುದಾಗಿ ಘೋಷಣೆ ಮಾಡಿದ್ದೇವೆ. ಹಾಗಾಗಿ, ನಾವು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ರೂ. ಪರಿಹಾರ ಕೇಳಿದ್ದೆವು. ಆದರೆ, ಈಗ ಕೇಂದ್ರ ಸರ್ಕಾರವು ನಾವು ಕೇಳಿದ ನಾಲ್ಕನೇ ಒಂದು ಭಾಗದಷ್ಟು ಮಾತ್ರ ಪರಿಹಾರ ನೀಡಿದೆ. ಇದು ತುಂಬ ಕಡಿಮೆ ಆಯಿತು. ಈ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂಬುದಾಗಿ ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿಳಿಸಿದರು.

ಮಲತಾಯಿ ಧೋರಣೆ ಎಂದ ಕೃಷ್ಣ ಭೈರೇಗೌಡ

ಕೇಂದ್ರ ಸರ್ಕಾರವು ಕಡಿಮೆ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇಷ್ಟಿದ್ದರೂ ಕೇವಲ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈ ದುಡ್ಡು ಯಾವುದಕ್ಕೂ ಸಾಕಾಗುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Drought Relief: 3,454 ಕೋಟಿ ರೂ. ಬರ ಪರಿಹಾರ; ‘ಅರೆಕಾಸಿನ ಮಜ್ಜಿಗೆ’ ಎಂದ ಸಿದ್ದರಾಮಯ್ಯ!

Continue Reading
Advertisement
car accident USA
ದೇಶ7 mins ago

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Lok sabha election 2024
Lok Sabha Election 202412 mins ago

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

ವೈರಲ್ ನ್ಯೂಸ್14 mins ago

Viral Video: ಅರೇ..! ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌

Job News
ಉದ್ಯೋಗ29 mins ago

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 15 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Lok Sabha
ಕರ್ನಾಟಕ36 mins ago

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

assault case in anekla
ಬೆಂಗಳೂರು ಗ್ರಾಮಾಂತರ1 hour ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ1 hour ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ1 hour ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ1 hour ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ2 hours ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ4 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌