Site icon Vistara News

Mysore Dasara 2022 | ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಚಿವ ಎಸ್.ಟಿ.ಸೋಮಶೇಖರ್ ಆಹ್ವಾನ

dasara murmu

ನವ ದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ (Mysore Dasara 2022) ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಬುಧವಾರ ಅಧಿಕೃತ ಆಹ್ವಾನ ನೀಡಲಾಯಿತು.

ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ಸಚಿವರು, ಮೈಸೂರು ದಸರಾ ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟನೆ ಮಾಡಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.

ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಪ್ರಥಮ ಬಾರಿಗೆ ರಾಷ್ಟ್ರಪತಿ ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ | Mysore Dasara 2022 | ಈ ಬಾರಿ ಇಂಗ್ಲಿಷ್‌ನಲ್ಲಿ ಆಹ್ವಾನ ಪತ್ರಿಕೆ; ಒಂದು ದಿನ ಪುನೀತ್‌ಗೆ ಮೀಸಲು

ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

ವೆಬ್‌ಸೈಟ್‌ ಆರಂಭ
ಮೈಸೂರು ದಸರಾ ಇತಿಹಾಸ, ಸಂಭ್ರಮ ಹಾಗೂ ಕಾರ್ಯಕ್ರಮ ವಿವರಗಳಿಗಾಗಿ ರಾಜ್ಯ ಸರ್ಕಾರವು ಅಧಿಕೃತ ವೆಬ್‌ಸೈಟ್‌ವೊಂದನ್ನು ತೆರೆದಿದ್ದು, ಆಸಕ್ತು ವೆಬ್‌ಸೈಟ್‌ ಲಿಂಕ್‌- https://mysoredasara.gov.in/ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿ ಮೈಸೂರು ದಸರಾ ವೇಳೆ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುವುದು.

ಇದನ್ನೂ ಓದಿ | Mysore Dasara 2022 | ಮೈಸೂರು ಫಲಪುಷ್ಪ ಪ್ರದರ್ಶನ; ಗುಲಾಬಿ ರಂಗಲ್ಲಿ ಕಂಗೊಳಿಸಲಿದೆ ರಾಷ್ಟ್ರಪತಿ ಭವನ

Exit mobile version